ಯೆರೆಮೀಯ 46:9 - ಕನ್ನಡ ಸತ್ಯವೇದವು J.V. (BSI)9 ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದರಿಯಲಿ! ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20199 ಅಶ್ವಗಳೇ, ಕುಣಿದಾಡಿರಿ! ರಥಗಳೇ, ರಭಸವಾಗಿರಿ! ಶೂರರು ಹೊರಡಲಿ! ಖೇಡ್ಯ ಸನ್ನದ್ಧರಾದ ಕೂಷ್ಯರು, ಪೂಟ್ಯರು, ಧನುರ್ಧಾರಿಗಳಾದ ಲೂದ್ಯರು ಮುಂದೆ ಹೋಗಲಿ! ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)9 ಅಶ್ವಗಳೇ, ಕುಣಿದಾಡಿ; ರಥಗಳೇ, ರಭಸವಾಗಿ ಓಡಿ! ಹೊರಡಲಿ ಶೂರರು, ಖೇಡ್ಯ ಸನ್ನದ್ಧರಾದ ಸುಡಾನರು, ಲಿಬಿಯಾದವರು ಮುನ್ನುಗ್ಗಲಿ ಧನುರ್ಧಾರಿಗಳಾದ ಲಿಡಿಯದವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್9 ಅಶ್ವಾರೋಹಿಗಳೇ, ಯುದ್ಧದಲ್ಲಿ ಧುಮುಕಿರಿ, ಸಾರಥಿಗಳೇ, ರಥಗಳನ್ನು ವೇಗವಾಗಿ ಓಡಿಸಿರಿ. ಶೂರ ಸೈನಿಕರೇ, ಮುನ್ನುಗ್ಗಿರಿ; ಕೂಷ್ಯ ಮತ್ತು ಪೂಟ್ಯ ಸೈನಿಕರೇ, ನಿಮ್ಮ ಗುರಾಣಿಗಳನ್ನು ಹಿಡಿದುಕೊಂಡು ಹೋಗಿರಿ. ಲೂದ್ಯ ಸೈನಿಕರೇ, ನಿಮ್ಮ ಬಿಲ್ಲುಗಳನ್ನು ಉಪಯೋಗಿಸಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ9 ಕುದುರೆಗಳೇ ಬನ್ನಿರಿ; ಸಾರಥಿಗಳೇ ಓಡಾಡಿರಿ; ಪರಾಕ್ರಮಶಾಲಿಗಳು ಹೊರಗೆ ಬರಲಿ; ಗುರಾಣಿಯನ್ನು ಹಿಡಿಯುವ ಕೂಷ್ಯರೂ, ಪೂಟ್ಯರೂ, ಬಿಲ್ಲನ್ನು ಹಿಡಿದು ಬಗ್ಗಿಸುವ ಲೂದ್ಯರೂ ಹೊರಗೆ ಬರಲಿ. ಅಧ್ಯಾಯವನ್ನು ನೋಡಿ |