ಯೆರೆಮೀಯ 47:2 - ಕನ್ನಡ ಸತ್ಯವೇದವು J.V. (BSI)2 ಯೆಹೋವನು ಇಂತೆನ್ನುತ್ತಾನೆ - ಇಗೋ, ಪ್ರವಾಹವು ಬಡಗಲಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ಆಕ್ರವಿುಸುವದು; ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20192 ಯೆಹೋವನು ಇಂತೆನ್ನುತ್ತಾನೆ, “ಇಗೋ, ಪ್ರವಾಹವು ಉತ್ತರದಿಕ್ಕಿನಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ, ಅದರಲ್ಲಿರುವ ಸಮಸ್ತವನ್ನೂ, ಪಟ್ಟಣವನ್ನೂ ಮತ್ತು ಪಟ್ಟಣದ ನಿವಾಸಿಗಳನ್ನೂ ಆಕ್ರಮಿಸುವುದು. ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)2 “ಸರ್ವೇಶ್ವರನ ವಾರ್ತೆ ಇದು: ಇಗೋ, ಬಡಗಲಿಂದ ಪ್ರವಾಹ ಹೊರಡುವುದು ತುಂಬಿತುಳುಕುವ ತೊರೆಯಾಗಿ ಬರುವುದು. ಆಕ್ರಮಿಸುವುದು ನಾಡನ್ನು, ಅದರಲ್ಲಿರುವ ಸಮಸ್ತವನ್ನು. ನಗರವನ್ನು, ಅದರ ನಿವಾಸಿಗಳನ್ನು. ಆಗ ನಾಡಿನವರೆಲ್ಲರೂ ಮೊರೆಯಿಡುವರು ದೇಶದವರೆಲ್ಲರು ಗೋಳಾಡುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್2 ಯೆಹೋವನು ಹೀಗೆನ್ನುತ್ತಾನೆ: “ನೋಡಿರಿ, ಉತ್ತರದಲ್ಲಿ ಶತ್ರು ಸೈನಿಕರು ಒಟ್ಟುಗೂಡುತ್ತಿದ್ದಾರೆ. ದಡಮೀರಿ ಭೋರ್ಗರೆಯುವ ನದಿಯಂತೆ ಅವರು ಬರುವರು. ಅವರು ಪ್ರವಾಹದಂತೆ ಇಡೀ ದೇಶವನ್ನು ವ್ಯಾಪಿಸುವರು. ಅವರು ಪಟ್ಟಣಗಳನ್ನೂ ಅಲ್ಲಿ ವಾಸಿಸುವ ಜನರನ್ನೂ ಮುತ್ತುವರು. ಆ ದೇಶಗಳಲ್ಲಿ ವಾಸಮಾಡುವ ಎಲ್ಲರೂ ಸಹಾಯಕ್ಕಾಗಿ ಗೋಳಿಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ2 ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪ್ರವಾಹಗಳು ಉತ್ತರದಿಂದ ಬರುತ್ತವೆ, ಅದು ತುಂಬಿ ತುಳುಕುವ ಪ್ರಳಯವಾಗುವುದು; ದೇಶವನ್ನೂ ಅದರಲ್ಲಿರುವ ಸಮಸ್ತ ಪಟ್ಟಣವನ್ನೂ, ಅದರ ನಿವಾಸಿಗಳನ್ನೂ ಆಕ್ರಮಿಸುವುವು; ಆಗ ಮನುಷ್ಯರು ಕೂಗುವರು; ದೇಶದ ನಿವಾಸಿಗಳೆಲ್ಲರು ಗೋಳಾಡುವರು. ಅಧ್ಯಾಯವನ್ನು ನೋಡಿ |