ಯೆರೆಮೀಯ 48:1 - ಕನ್ನಡ ಸತ್ಯವೇದವು J.V. (BSI)1 ಮೋವಾಬನ್ನು ಕುರಿತದ್ದು. ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಅಯ್ಯೋ, ನೆಬೋಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗಹೊಂದಿದೆ, ವಿುಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20191 ಮೋವಾಬನನ್ನು ಕುರಿತು ಇಸ್ರಾಯೇಲಿನ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಅಯ್ಯೋ ನೆಬೋ ಊರಿನ ಗತಿಯನ್ನು ಏನು ಹೇಳಲಿ! ಅದು ಹಾಳಾಯಿತು; ಕಿರ್ಯಾತಯಿಮು ಶತ್ರುವಿನ ಕೈಗೆ ಸಿಕ್ಕಿ ಮಾನಭಂಗ ಹೊಂದಿದೆ, ಮಿಸ್ಗಾಬ್ ಕೆಡವಲ್ಪಟ್ಟು ಅವಮಾನಕ್ಕೆ ಗುರಿಯಾಗಿದೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)1 ಇಸ್ರಯೇಲಿನ ದೇವರೂ ಸೇನಾಧೀಶ್ವರರೂ ಆದ ಸರ್ವೇಶ್ವರ ಮೋವಾಬನ್ನು ಕುರಿತು ಹೀಗೆನ್ನುತ್ತಾರೆ: “ನೆಬೋ ಊರಿನ ಗತಿಯನ್ನು ಅಯ್ಯೋ, ಏನೆಂದು ಹೇಳಲಿ, ಅದು ಹಾಳಾಯಿತು. ಕಿರ್ಯತಯಿಮ್ ಮಾನಭಂಗ ಹೊಂದಿದೆ ಶತ್ರು ಕೈಗೆ ಸಿಕ್ಕಿ. ಮಿಸ್ಗಾಬ್ ಅವಮಾನಕ್ಕೆ ಗುರಿಯಾಗಿದೆ ನೆಲಸಮವಾಗಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್1 ಈ ಸಂದೇಶವು ಮೋವಾಬ್ ದೇಶವನ್ನು ಕುರಿತದ್ದು. ಇಸ್ರೇಲಿನ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆ ಹೇಳುತ್ತಾನೆ: “ನೆಬೋ ಪರ್ವತಕ್ಕೆ ದುರ್ಗತಿ ಬರುವುದು. ನೆಬೋ ಪರ್ವತ ಪ್ರದೇಶವು ಹಾಳಾಗುವುದು. ಕಿರ್ಯಾತಯಿಮ್ ಪಟ್ಟಣವು ಸೋಲುವುದು. ಅದನ್ನು ವಶಪಡಿಸಿಕೊಳ್ಳಲಾಗುವುದು. ಭದ್ರವಾದ ಸ್ಥಳವನ್ನು ಸೋಲಿಸಿ ಧ್ವಂಸ ಮಾಡಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ1 ಮೋವಾಬನ್ನು ಕುರಿತದ್ದು: ಇಸ್ರಾಯೇಲಿನ ದೇವರಾದ ಸೇನಾಧೀಶ್ವರ ಯೆಹೋವ ದೇವರು ಹೀಗೆ ಹೇಳುತ್ತಾರೆ: “ನೆಬೋ ಊರಿನವರಿಗೆ ಕಷ್ಟ! ಆ ಊರು ಸೂರೆಯಾಯಿತು; ಕಿರ್ಯಾತಯಿಮು ಶತ್ರುವಿನ ಕೈವಶವಾಗಿ ಅವಮಾನಕ್ಕೆ ಗುರಿಯಾಗಿದೆ; ಬಲವಾದ ಕೋಟೆಯು ಸಹ ಚದರಿ ನಾಚಿಕೆಗೆ ಈಡಾಗಿದೆ. ಅಧ್ಯಾಯವನ್ನು ನೋಡಿ |