Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:10 - ಕನ್ನಡ ಸತ್ಯವೇದವು J.V. (BSI)

10 ಯೆಹೋವನು ನೇವಿುಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪತಗಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

10 ಯೆಹೋವನು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

10 ಸರ್ವೇಶ್ವರನು ನೇಮಿಸಿದ ಕೆಲಸವನ್ನು ನಿರ್ವಹಿಸುವುದರಲ್ಲಿ ಆಲಸ್ಯನಾಗಿರುವವನು ಶಾಪಗ್ರಸ್ತನು. ತನ್ನ ಕತ್ತಿ ರಕ್ತಸುರಿಸದಂತೆ ತಡೆಯುವವನಿಗೆ ಶಾಪ ತಗಲಲಿ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

10 ಯೆಹೋವನು ಹೇಳಿದಂತೆ ನಡೆಯದಿದ್ದವನಿಗೆ ಮತ್ತು ಆ ಜನರನ್ನು ಕೊಲ್ಲಲು ತನ್ನ ಖಡ್ಗವನ್ನು ಬಳಸದಿದ್ದವನಿಗೆ ಕೇಡಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

10 “ಯೆಹೋವ ದೇವರು ನೇಮಿಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ರಕ್ತದಿಂದ ತನ್ನ ಖಡ್ಗವನ್ನು ಹಿಂದೆಗೆಯುವವನಿಗೆ ಶಾಪವಾಗಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:10
15 ತಿಳಿವುಗಳ ಹೋಲಿಕೆ  

ಪ್ರವಾದಿಯು ಅರಸನಿಗೆ - ಸಂಹರಿಸಬೇಕೆಂದು ಹೇಳಿ ನಾನು ನಿನ್ನ ಕೈಗೆ ಒಪ್ಪಿಸಿದ ಮನುಷ್ಯನನ್ನು ನೀನು ಹೋಗಗೊಟ್ಟದ್ದರಿಂದ ಅವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ಹೋಗುವದು; ನಿನ್ನ ಪ್ರಜೆಗಳು ಅವನ ಪ್ರಜೆಗಳಾಗುವರು ಎಂಬದಾಗಿ ಯೆಹೋವನು ಅನ್ನುತ್ತಾನೆ ಎಂದು ಹೇಳಿದನು.


ಈಗ ನೀನು ಹೋಗಿ ಅವರನ್ನು ಸೋಲಿಸಿ ಅವರಿಗಿರುವದನ್ನೆಲ್ಲಾ ಸಂಪೂರ್ಣವಾಗಿ ಹಾಳುಮಾಡು. ಗಂಡಸರನ್ನೂ ಹೆಂಗಸರನ್ನೂ ಮಕ್ಕಳನ್ನೂ ಶಿಶುಗಳನ್ನೂ ಎತ್ತು, ಕುರಿ, ಕತ್ತೆ, ಒಂಟೆ, ಇವುಗಳನ್ನೂ ಕನಿಕರವಿಲ್ಲದೆ ಕೊಂದುಹಾಕು ಎಂದು ಹೇಳುತ್ತಾನೆ ಅಂದನು.


ಮೇರೋಜ್ ಊರನ್ನು ಶಪಿಸಿರೆಂದು ಯೆಹೋವನ ದೂತನು ಹೇಳುತ್ತಾನೆ. ಅದರ ನಿವಾಸಿಗಳು ಯೆಹೋವನ ಸಹಾಯಕ್ಕೆ ಬರಲಿಲ್ಲ; ಯುದ್ಧವೀರರ ಜೊತೆಯಲ್ಲಿ ಯೆಹೋವನ ಸಹಾಯಕ್ಕೆ ಬರಲಿಲ್ಲವಲ್ಲಾ; ಅವರನ್ನು ಶಪಿಸೇ ಶಪಿಸಿರಿ.


ಆಗ ದೇವರ ಮನುಷ್ಯನು ಅವನ ಮೇಲೆ ಕೋಪಗೊಂಡು - ನೀನು ಐದಾರು ಸಾರಿ ಹೊಡೆಯಬೇಕಾಗಿತ್ತು. ಹಾಗೆ ಮಾಡಿದ್ದರೆ ಅರಾಮ್ಯರು ನಿರ್ನಾಮವಾಗಿ ಹೋಗುವವರೆಗೂ ಅವರ ಮೇಲೆ ನಿನಗೆ ಜಯದೊರಕುತ್ತಿತ್ತು. ನೀನು ಮೂರೇ ಸಾರಿ ಹೊಡೆದದರಿಂದ ಅವರನ್ನು ಮೂರು ಸಾರಿ ಮಾತ್ರ ಸೋಲಿಸುವಿ ಎಂದು ಹೇಳಿದನು.


ಸೌಲನೂ ಇಸ್ರಾಯೇಲ್ಯರೂ ಅಗಾಗನನ್ನೂ ಮೇಲ್ತರದ ಕುರಿ ದನಗಳನ್ನೂ ಕುರಿಮರಿಗಳನ್ನೂ ಕೊಬ್ಬಿದ ಪಶುಗಳನ್ನೂ ಶ್ರೇಷ್ಠವಾದ ಎಲ್ಲಾ ಪದಾರ್ಥಗಳನ್ನೂ ನಾಶಮಾಡ ಮನಸ್ಸಿಲ್ಲದೆ ಉಳಿಸಿ ಪ್ರಯೋಜನವಿಲ್ಲದಂಥ ಹೀನವಾದವುಗಳನ್ನೆಲ್ಲಾ ನಾಶಮಾಡಿಬಿಟ್ಟರು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.


ಅಯ್ಯೋ, ಯೆಹೋವನ ಖಡ್ಗವೇ, ಇನ್ನೆಷ್ಟರವರೆಗೆ ವಿಶ್ರಾಂತಿಗೊಳ್ಳದೆ ಇರುವಿ? ನಿನ್ನನ್ನು ಒರೆಯಲ್ಲಿ ಅಣಗಿಕೋ! ಶಾಂತಿಗೊಳ್ಳು, ಸುಮ್ಮನಿರು!


ಅವನು ಹಾದುಹೋಗುವಾಗ ಅವನಿಗೆ - ನಿನ್ನ ಸೇವಕನಾದ ನಾನು ಯುದ್ಧಕ್ಕೆ ಹೋದಾಗ ರಣರಂಗದಲ್ಲಿ ಒಬ್ಬನು ಇನ್ನೊಬ್ಬನನ್ನು ಹಿಡಿದುಕೊಂಡು ನನ್ನ ಬಳಿಗೆ ಬಂದು - ನೀನು ಇವನನ್ನು ಕಾಯಬೇಕು; ಇವನು ತಪ್ಪಿಸಿಕೊಂಡರೆ ಇವನ ಪ್ರಾಣಕ್ಕೆ ಬದಲಾಗಿ ನಿನ್ನ ಪ್ರಾಣವು ನನ್ನದಾಗಿರುವದು; ಅಥವಾ ನೀನು ನನಗೆ ಒಂದು ತಲಾಂತು ಬೆಳ್ಳಿಯನ್ನು ಕೊಡಬೇಕು ಎಂದು ಆಜ್ಞಾಪಿಸಿದನು.


ನಾನು ಕೆಲಸದಲ್ಲಿದ್ದಾಗ ಅವನು ತಪ್ಪಿಸಿಕೊಂಡು ಹೋದನು ಎಂದು ಮೊರೆಯಿಟ್ಟನು. ಇಸ್ರಾಯೇಲ್ಯರ ಅರಸನು ಇವನಿಗೆ - ನಿನಗೆ ಆ ತೀರ್ಪು ಸರಿಯಾಗಿದೆ; ತೀರ್ಮಾನಿಸಿದವನು ನೀನೇ ಅಲ್ಲವೋ ಎಂದು ನುಡಿದನು.


ಕಬ್ಬಿಣ ಕರಗಿಸುವ ಕುಲಿಮೆಯೋಪಾದಿಯಲ್ಲಿದ್ದ ಐಗುಪ್ತದೇಶದಿಂದ ನಿಮ್ಮ ಪಿತೃಗಳನ್ನು ಬರಮಾಡಿದಾಗ - ನೀವು ನನ್ನ ಮಾತನ್ನು ಕೇಳಿ ನಾನು ನಿಮಗೆ ಆಜ್ಞಾಪಿಸಿರುವ ಈ ವಿಧಿಗಳನ್ನೆಲ್ಲಾ ಕೈಕೊಂಡರೆ ನೀವು ನನ್ನ ಪ್ರಜೆಯಾಗಿರುವಿರಿ,


ಖಡ್ಗವು ವಿಶ್ರಾಂತಿಗೊಳ್ಳುವದು ಹೇಗೆ? ಅಷ್ಕೆಲೋನಿನ ಮತ್ತು ಕರಾವಳಿಯ ವಿಷಯವಾಗಿ ಯೆಹೋವನು ಅದಕ್ಕೆ ಅಪ್ಪಣೆಕೊಟ್ಟನಲ್ಲಾ; ಅಲ್ಲಿಗೇ ಅದನ್ನು ನೇವಿುಸಿದ್ದಾನೆ.


ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.


ನೀವಾದರೋ ಅಲ್ಲೇ ನಿಂತುಕೊಳ್ಳಬೇಡಿರಿ; ಬೇಗನೆ ಹಿಂದಟ್ಟಿ ಹಿಂದಾದ ವೈರಿಗಳನ್ನು ಹತಮಾಡುತ್ತಾ ಹೋಗಿರಿ; ಅವರನ್ನು ಅವರ ಪಟ್ಟಣಗಳಲ್ಲಿ ಸೇರಗೊಡಿಸಬೇಡಿರಿ. ನಿಮ್ಮ ದೇವರಾದ ಯೆಹೋವನು ಅವರನ್ನು ನಿಮ್ಮ ಕೈಗೆ ಒಪ್ಪಿಸಿದ್ದಾನಲ್ಲಾ ಅಂದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು