Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:18 - ಕನ್ನಡ ಸತ್ಯವೇದವು J.V. (BSI)

18 ಯುವತಿಯೇ, ದೀಬೋನ್‍ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕೂತುಕೋ! ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

18 ಯುವತಿಯೇ, ದೀಬೋನ್ ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕುಳಿತುಕೋ! ಮೋವಾಬನ್ನು ಹಾಳುಮಾಡುವವನು ನಿನ್ನ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

18 ಯುವತಿಯೇ, ದೀಬೋನ್ ನಗರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಕುಳಿತುಕೊ ಬಾಯಾರಿದವಳಂತೆ. ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದಿದ್ದಾನೆ. ನಿನ್ನ ಕೋಟೆಕೊತ್ತಲುಗಳನ್ನು ಅವನು ಕೆಡವಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

18 “ದೀಬೋನ್‌ನಲ್ಲಿ ವಾಸಿಸುವ ಜನರೇ, ನಿಮ್ಮ ಗೌರವಾನಿಬತ ಸ್ಥಳದಿಂದ ಕೆಳಗಿಳಿದು ಬನ್ನಿ. ನೆಲದ ಮೇಲೆ ಧೂಳಿನಲ್ಲಿ ಕುಳಿತುಕೊಳ್ಳಿ. ಏಕೆಂದರೆ, ಧ್ವಂಸಕನು ಬರುತ್ತಿದ್ದಾನೆ. ನಿಮ್ಮ ಭದ್ರವಾದ ನಗರಗಳನ್ನು ಅವನು ಹಾಳುಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

18 “ದೀಬೋನಿನ ನಿವಾಸಿಯಾದ ಮಗಳೇ, ನಿನ್ನ ವೈಭವದಿಂದ ಇಳಿದು ಬಾ; ಒಣಭೂಮಿಯ ಬಾಯಾರಿದವಳಂತೆ ಕೂತುಕೋ, ಏಕೆಂದರೆ ಮೋವಾಬನ್ನು ವಿನಾಶ ಮಾಡುವವನು ನಿನ್ನ ಮೇಲೆ ಬರುವನು; ನಿನ್ನ ಬಲವಾದ ಕೋಟೆಗಳನ್ನು ಕೆಡಿಸಿಬಿಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:18
13 ತಿಳಿವುಗಳ ಹೋಲಿಕೆ  

ಯುವತಿಯೇ, ಬಾಬೆಲ್‍ಪುರಿಯೇ, ಕೆಳಕ್ಕಿಳಿದು ಧೂಳಿನಲ್ಲಿ ಕೂತುಕೋ, ಕಸ್ದೀಯರ ನಗರಿಯೇ, ಸಿಂಹಾಸನರಹಿತಳಾಗಿ ನೆಲದ ಮೇಲೆ ಕುಕ್ಕರಿಸು! ನೀನು ಇನ್ನು ಕೋಮಲೆ, ಸುಕುಮಾರಿ, ಎಂದು ಎನಿಸಿಕೊಳ್ಳೆ.


ನಾವು ಅವರನ್ನು ಬಾಣದಿಂದ ಹೊಡೆದೆವು; ಹೆಷ್ಬೋನಿನಿಂದ ದೀಬೋನಿನವರೆಗೂ ಎಲ್ಲಾ ನಾಶವಾಯಿತು. ಮೇದೆಬಾ ಊರಿನ ನೆರೆಯಲ್ಲಿರುವ ನೋಫಹದ ತನಕ ಹಾಳುಮಾಡಿ ಬಿಟ್ಟೆವು ಎಂಬದೇ.


ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.


ನೆಬೋ, ಬೇತ್‍ದಿಬ್ಲಾತಯಿಮ್,


ಮೇದೆಬದ ತಪ್ಪಲಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣವೂ ಅದೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್‍ಬಾಳ್, ಬೇತ್ಬಾಳ್ಮೆಯೋನ್,


ಈಗ ಅದು ನೀರಿಲ್ಲದ ಬೆಂಗಾಡಿನಲ್ಲಿ ನಾಟಿಕೊಂಡಿದೆ.


ಆದಕಾರಣ ನನ್ನ ಜನರು ಜ್ಞಾನಹೀನರಾಗಿ ಸೆರೆಗೆ ಹೋಗುವದು ಖಂಡಿತ; ಘನವಂತರು ಹಸಿಯುವರು, ಸಾಮಾನ್ಯರು ಬಾಯಾರುವರು.


ಮತ್ತು ಅವನು ಬಹಳ ದಾಹವುಳ್ಳವನಾಗಿ ಯೆಹೋವನಿಗೆ - ನೀನು ನಿನ್ನ ಸೇವಕನ ಮೂಲಕವಾಗಿ ಈ ಮಹಾಜಯವನ್ನುಂಟು ಮಾಡಿದ ಮೇಲೆ ನಾನು ದಾಹದಿಂದ ಸತ್ತು ಸುನ್ನತಿಯಿಲ್ಲದವರ ಕೈಯಲ್ಲಿ ಬೀಳಬೇಕೋ ಎಂದು ಮೊರೆಯಿಡಲು


ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇದ್ದ ಪಟ್ಟಣವು ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲಸೀಮೆ,


ಯೆಹೋವನು ಇಸ್ರಾಯೇಲ್ಯರಿಗೆ ಅಧೀನಪಡಿಸಿದ ಈ ಪ್ರದೇಶವು ಅಂದರೆ ಅಟಾರೋತ್, ದೀಬೋನ್, ಯಗ್ಜೇರ್, ನಿಮ್ರಾ, ಹೆಷ್ಬೋನ್, ಎಲೆಯಾಲೆ, ಸೆಬಾಮ್, ನೆಬೋ, ಬೆಯೋನ್ ಎಂಬ ಪಟ್ಟಣಗಳ ಪ್ರದೇಶವು ದನಕುರಿಗಳ ಮೇವಿಗೆ ತಕ್ಕ ಪ್ರದೇಶ.


ಅಲ್ಲಿ ಜನರು ನೀರಿಲ್ಲದೆ ಬಾಯಾರಿಕೆಯ ಸಂಕಟದಿಂದ ಮೋಶೆಯ ಮೇಲೆ ಗುಣುಗುಟ್ಟುತ್ತಾ - ನೀನು ನಮ್ಮನ್ನೂ ನಮ್ಮ ಮಕ್ಕಳನ್ನೂ ದನಗಳನ್ನೂ ಐಗುಪ್ತ ದೇಶದಿಂದ ಕರತಂದು ಈಗ ನೀರಿಲ್ಲದೆ ಸಾಯುವ ಹಾಗೆ ಮಾಡಿದ್ದೇಕೆ ಎಂದರು.


ಮಗುವು ಸಾಯುವದನ್ನು ನೋಡಲಾರೆನು ಅಂದುಕೊಂಡು ಬಿಲ್ಲೆಸುಗೆಯಷ್ಟು ದೂರ ಹೋಗಿ ಅವನೆದುರಾಗಿ ಕೂತುಕೊಂಡು ಗಟ್ಟಿಯಾಗಿ ಅತ್ತಳು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು