ಯೆರೆಮೀಯ 48:26 - ಕನ್ನಡ ಸತ್ಯವೇದವು J.V. (BSI)26 ಮೋವಾಬಿಗೆ ತಲೆಗೇರಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಗೇಲಿಗೆ ಗುರಿಯಾಗುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201926 “ಮೋವಾಬಿಗೆ ತಲೆಗೇರುವಂತೆ ಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಪರಿಹಾಸ್ಯಕ್ಕೆ ಗುರಿಯಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)26 “ಮೋವಾಬಿಗೆ ಅಮಲೇರುವಷ್ಟು ಕುಡಿಸಿರಿ. ಅದು ಸರ್ವೇಶ್ವರನನ್ನೆ ತಿರಸ್ಕರಿಸಿ ಉಬ್ಬಿಹೋಗಿದೆ. ತನ್ನ ವಾಂತಿಯಲ್ಲೆ ಬಿದ್ದು ಗೇಲಿ ಪರಿಹಾಸ್ಯಕ್ಕೆ ಗುರಿಯಾಗಲಿದೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್26 ತಾನು ಯೆಹೋವನಿಗಿಂತ ಬಹಳ ಮುಖ್ಯವಾದವನೆಂದು ಮೋವಾಬು ಭಾವಿಸಿತ್ತು. ಕುಡಿದು ಮದವೇರಿದವನಂತೆ ಆಗುವವರೆಗೆ ಮೋವಾಬನ್ನು ದಂಡಿಸಿರಿ. ಮೋವಾಬು ತನ್ನ ವಾಂತಿಯಲ್ಲಿ ಬಿದ್ದು ಹೊರಳಾಡುವದು. ಜನರು ಮೋವಾಬನ್ನು ತಮಾಷೆ ಮಾಡುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ26 “ಅದನ್ನು ನೀವು ಅಮಲೇರಿಸಿರಿ; ಏಕೆಂದರೆ ಯೆಹೋವ ದೇವರಿಗೆ ವಿರೋಧವಾಗಿ ತನ್ನನ್ನು ಹೆಚ್ಚಿಸಿಕೊಂಡಿದೆ; ಮೋವಾಬು ಸಹ ತಾನೇ ವಾಂತಿ ಮಾಡಿದ್ದರಲ್ಲಿ ಹೊರಳಾಡುವುದು; ಅದೇ ಹಾಸ್ಯಕ್ಕಾಗಿರುವುದು. ಅಧ್ಯಾಯವನ್ನು ನೋಡಿ |
ಪರಲೋಕದೊಡೆಯನಿಗೆ ವಿರುದ್ಧವಾಗಿ ನಿನ್ನನ್ನು ಹೆಚ್ಚಿಸಿಕೊಂಡಿ; ಆತನ ಆಲಯದ ಪಾತ್ರೆಗಳನ್ನು ಸನ್ನಿಧಿಗೆ ತಂದರಲ್ಲಾ; ನೀನು ನಿನ್ನ ರಾಜ್ಯದ ಮುಖಂಡರ ಮತ್ತು ಪತ್ನ್ಯುಪಪತ್ನಿಯರ ಸಂಗಡ ಅವುಗಳಲ್ಲಿ ದ್ರಾಕ್ಷಾರಸವನ್ನು ಕುಡಿದು ಬುದ್ಧಿ ಕಣ್ಣು ಕಿವಿ ಇಲ್ಲದ ಬೆಳ್ಳಿಬಂಗಾರತಾಮ್ರ ಕಬ್ಬಿಣ ಮರಕಲ್ಲುಗಳ ದೇವರುಗಳನ್ನು ಸ್ತುತಿಸಿದ್ದೀ; ಆದರೆ ನಿನ್ನ ಪ್ರಾಣವು ಯಾರ ಕೈಯಲ್ಲಿದೆಯೋ ನಿನ್ನ ಸ್ಥಿತಿಗತಿಗಳು ಯಾರ ಅಧೀನವೋ ಆ ದೇವರನ್ನು ಘನಪಡಿಸಲೇ ಇಲ್ಲ;