Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:3 - ಕನ್ನಡ ಸತ್ಯವೇದವು J.V. (BSI)

3 ಅಯ್ಯೋ, ಸೂರೆಹೋದೆವು, ಬಹು ನಾಶವಾದೆವು ಎಂಬ ಕೂಗಾಟವು ಹೊರೊನಯಿವಿುನಿಂದ ಕೇಳಬರುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ‘ಅಯ್ಯೋ, ಸೂರೆ ಹೋದೆವು, ಬಹು ನಾಶವಾದೆವು’ ಎಂಬ ಕೂಗಾಟವು ಹೊರೊನಯಿಮಿನಿಂದ ಕೇಳಬರುತ್ತದೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ‘ಅಯ್ಯೋ, ಸೂರೆಹೋದೆವು, ತೀವ್ರ ನಾಶವಾದೆವು!’ ಎಂಬ ಕೂಗಾಟ ಕೇಳಿಬರುತ್ತಿದೆ ಹೊರೊನಯಿಮಿನಿಂದ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಹೊರೊನಯಿಮಿನಿಂದ ಬರುವ ಗೋಳಾಟದ ಧ್ವನಿಯನ್ನು ಕೇಳಿರಿ. ಅದು ವಿನಾಶದ ಮತ್ತು ಗೊಂದಲದ ಧ್ವನಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಹೊರೊನಯಿಮಿನಿಂದ ಕೂಗುವ ಸ್ವರವು, ಸೂರೆಯು, ದೊಡ್ಡ ನಾಶವು, ಹೊರಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:3
12 ತಿಳಿವುಗಳ ಹೋಲಿಕೆ  

ನನ್ನ ಹೃದಯವು ಮೋವಾಬಿನ ನಿವಿುತ್ತವಾಗಿ ಮೊರೆಯಿಡುತ್ತದೆ; ಅಲ್ಲಿಂದ ಪಲಾಯನವಾದವರು ಚೋಯರಿಗೂ ಎಗ್ಲತ್ ಶೆಲಿಶೀಯಕ್ಕೂ ಓಡಿಹೋಗುತ್ತಾರೆ, ಅಳುತ್ತಾ ಲೂಹೀಥ್ ದಿಣ್ಣೆಯನ್ನು ಹತ್ತುತ್ತಾರೆ, ಹೊರೊನಯಿವಿುನ ದಾರಿಯಲ್ಲಿ ನಡೆಯುತ್ತಾ ನಾಶನವಾದೆವಲ್ಲಾ ಎಂದು ದನಿಗೈಯುತ್ತಾರೆ.


ಹೆಷ್ಬೋನಿನಿಂದ ಎಲೆಯಾಲೆಯ ಮತ್ತು ಯಹಚಿನವರೆಗೆ ಅರಿಚಿಕೊಳ್ಳುತ್ತಾರೆ. ಚೋಯರಿನಿಂದ ಹೊರೊನಯಿವಿುನ ಮತ್ತು ಎಗ್ಲತ್ ಶೆಲಿಶೀಯದವರೆಗೆ ಕಿರಿಚಿಕೊಳ್ಳುತ್ತಾರೆ; ನಿಮ್ರೀಮ್ ಹಳ್ಳವೂ ಹಾಳಾಗಿದೆ.


ಅಳುತ್ತಳುತ್ತಾ ಲೂಹೀತ್ ದಿಣ್ಣೆಯನ್ನು ಹತ್ತುತ್ತಾರೆ; ನಾಶವಾದೆವಲ್ಲಾ ಎಂಬ ಪ್ರಾಣಸಂಕಟ ಪ್ರಲಾಪವು ಹೊರೊನಯಿಮ್ ಇಳಿಜಾರಿನಲ್ಲಿ ಕೇಳಿಸುತ್ತದೆ.


ಯೆಹೋವನು ಇಂತೆನ್ನುತ್ತಾನೆ - ಇಗೋ, ಪ್ರವಾಹವು ಬಡಗಲಿಂದ ಹೊರಟು ತುಂಬಿತುಳುಕುವ ತೊರೆಯಾಗಿ ದೇಶವನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ಆಕ್ರವಿುಸುವದು; ಆಗ ಅಲ್ಲಿನವರು ಮೊರೆಯಿಡುವರು, ದೇಶದವರೆಲ್ಲಾ ಗೋಳಾಡುವರು.


ಹೀಗಿರಲು ನನ್ನ ಕಡೆಯಿಂದ ದೃಷ್ಟಿ ತಿರುಗಿಸಿರಿ. ಬಹುಸಂಕಟದಿಂದ ಅಳುವೆನು, ನನ್ನ ಜನವೆಂಬ ಯುವತಿಯು ಹಾಳಾದ ವಿಷಯದಲ್ಲಿ ನನ್ನನ್ನು ಸಂತೈಸುವದಕ್ಕೆ ತವಕಗೊಳ್ಳದಿರಿ ಅಂದೆನು.


ಪ್ರಲಾಪವು ಮೋವಾಬಿನ ಎಲ್ಲೆಗಳ ತನಕ ಹಬ್ಬಿದೆ, ಅದರ ಅರಚಾಟವು ಎಗ್ಲಯಿವಿುನವರೆಗೂ ಬೆಯೇರ್ ಏಲೀವಿುನ ಪರ್ಯಂತವೂ ವ್ಯಾಪಿಸಿದೆ.


ಬಯಿತ್ ಮತ್ತು ದೀಬೋನ್ ಊರುಗಳವರು ಅಳುವದಕ್ಕಾಗಿ ಪೂಜಾಸ್ಥಾನಗಳಿಗೆ ಹತ್ತಿದ್ದಾರೆ; ನೆಬೋವಿನಲ್ಲಿಯೂ ಮೇದೆಬದಲ್ಲಿಯೂ ಮೋವಾಬ್ಯರು ಗೋಳಾಡುತ್ತಾರೆ; ಎಲ್ಲರ ತಲೆಯು ಬೋಳು, ಎಲ್ಲರ ಗಡ್ಡವು ವಿಕಾರವಾಗಿ ಕತ್ತರಿಸಿದೆ.


ಯೆಹೋವನು ಕನಿಕರಪಡದೆ ಕೆಡವಿಬಿಟ್ಟ ಪಟ್ಟಣಗಳ ಗತಿಯು ಅವನಿಗೆ ಬರಲಿ; ಪ್ರಾತಃಕಾಲದಲ್ಲಿ ಅರಚಾಟವು, ಮಧ್ಯಾಹ್ನದಲ್ಲಿ ಕೂಗಾಟವು ಅವನ ಕಿವಿಗೆ ಬೀಳಲಿ!


ಮೋವಾಬಿಗೆ ಭಂಗವಾಯಿತು; ಅಲ್ಲಿ ದಿಕ್ಕೆಟ್ಟವರು ಮೊರೆಯಿಟ್ಟಿದ್ದಾರೆ.


ಆಹಾ, ಬಾಬೆಲಿನಿಂದ ಮೊರೆಯೂ ಕಸ್ದೀಯರ ದೇಶದಿಂದ ಮಹಾನಾಶನದ ಶಬ್ದವೂ ಕೇಳ ಬರುತ್ತವೆ!


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು