ಯೆರೆಮೀಯ 48:32 - ಕನ್ನಡ ಸತ್ಯವೇದವು J.V. (BSI)32 ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿವಿುತ್ತ ಅಳುವದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲ ಮೇಲೆಯೂ ದ್ರಾಕ್ಷೆಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201932 ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲೂ ನಿನ್ನನ್ನು ಕಂಡು ಹೆಚ್ಚಾಗಿ ಅಳುವೆನು; ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿದ್ದವಲ್ಲಾ; ಈಗ ನಿನ್ನ ಹಣ್ಣುಹಂಪಲುಗಳ ಮೇಲೆಯೂ ಮತ್ತು ದ್ರಾಕ್ಷಿಯ ಸುಗ್ಗಿಯ ಮೇಲೆಯೂ ಸೂರೆಗಾರನು ಬಿದ್ದಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)32 ‘ಸಿಬ್ಮ’ದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ದುಃಖಿಸುವುದಕ್ಕಿಂತಲು ನಿನ್ನನ್ನು ಕಂಡು ಹೆಚ್ಚಾಗಿ ದುಃಖಿಸುತ್ತೇನೆ. ನಿನ್ನ ಶಾಖೆಗಳು ಸಮುದ್ರದಾಚೆಗೂ ಯಜ್ಜೇರಿನ ಸರೋವರದವರೆಗೂ ವ್ಯಾಪಿಸಿವೆ. ಈಗ ನಿನ್ನ ಹಣ್ಣುಹಂಪಲುಗಳ ಮೇಲೆ ಹಾಗು ದ್ರಾಕ್ಷೆಯ ಸುಗ್ಗಿಯ ಮೇಲೆ ಸೂರೆಗಾರ ಬಂದೆರಗಿದ್ದಾನೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್32 ನಾನು ಯೆಜ್ಜೇರಿನ ಜನರೊಂದಿಗೆ ಯೆಜ್ಜೇರಿಗಾಗಿ ಪ್ರಲಾಪಿಸುವೆನು. ಸಿಬ್ಮವೇ, ನಿನ್ನ ದ್ರಾಕ್ಷಿಬಳ್ಳಿಗಳು ಸಮುದ್ರದವರೆಗೂ ಹಬ್ಬಿದ್ದವು; ಅವು ಯೆಜ್ಜೇರ್ ಪಟ್ಟಣದವರೆಗೂ ಚಾಚಿದ್ದವು. ಆದರೆ ವಿನಾಶಕನು ನಿನ್ನ ಹಣ್ಣುಗಳನ್ನು ಮತ್ತು ದ್ರಾಕ್ಷಿಗಳನ್ನು ಕಿತ್ತುಕೊಂಡಿದ್ದಾನೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ32 ಸಿಬ್ಮದ ದ್ರಾಕ್ಷಾಲತೆಯೇ, ಯಜ್ಜೇರಿನ ನಿಮಿತ್ತ ಅಳುವುದಕ್ಕಿಂತಲು ನಿನ್ನ ನಿಮಿತ್ತವಾಗಿ ಅಳುವೆನು; ನಿನ್ನ ಬಳ್ಳಿಗಳು ಸಮುದ್ರವನ್ನು ದಾಟಿದವು. ಯಜ್ಜೇರಿನ ಸಮುದ್ರಕ್ಕೆ ಮುಟ್ಟಿದವು; ನಿನ್ನ ಹಣ್ಣುಗಳ ಮೇಲೆಯೂ, ನಿನ್ನ ದ್ರಾಕ್ಷಿ ಸುಗ್ಗಿಯ ಮೇಲೆಯೂ ವಿನಾಶ ಮಾಡುವವನು ಬಿದ್ದಿದ್ದಾನೆ. ಅಧ್ಯಾಯವನ್ನು ನೋಡಿ |