Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:39 - ಕನ್ನಡ ಸತ್ಯವೇದವು J.V. (BSI)

39 ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವದಕ್ಕೂ ಬೆಚ್ಚಿಬೀಳುವದಕ್ಕೂ ಆಸ್ಪದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ ಮತ್ತು ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅದು ಹೇಗೆ ನುಚ್ಚುನೂರಾಗಿದೆ ! ಆ ಜನರು ಕಿರಿಚಿಕೊಳ್ಳುತ್ತಿದ್ದಾರೆ ! ಇಗೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ. ನೆರೆಹೊರೆಯವರು ಅಣಕಿಸುವುದಕ್ಕೂ ಬೆಚ್ಚಿಬೀಳುವುದಕ್ಕೂ ಆಸ್ಪದ ಆಗಿದೆ.” ಸರ್ವೇಶ್ವರ ಹೀಗೆನ್ನುತ್ತಾರೆ :

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 “ಮೋವಾಬ್ ನುಚ್ಚುನೂರಾಯಿತು. ಜನರು ಕಿರುಚುತ್ತಿದ್ದಾರೆ. ಮೋವಾಬ್ ಶರಣಾಗತವಾಯಿತು. ಮೋವಾಬ್ ಈಗ ನಾಚಿಕೆಪಡುತ್ತಿದೆ. ಜನರು ಮೋವಾಬನ್ನು ತಮಾಷೆ ಮಾಡುತ್ತಾರೆ. ಆದರೆ ಇಲ್ಲಿ ನಡೆದ ಘಟನೆಗಳು ಅವರನ್ನು ಭೀತರನ್ನಾಗಿ ಮಾಡಿವೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 “ಆಹಾ, ಭಂಗವಾಯಿತು! ಕಿರುಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವುದಕ್ಕೂ, ಬೆಚ್ಚಿಬೀಳುವುದಕ್ಕೂ ಆಸ್ಪದವಾಗಿದೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:39
10 ತಿಳಿವುಗಳ ಹೋಲಿಕೆ  

ಅಕಟಾ, ಬಂಗಾರವು ಎಷ್ಟೋ ಮಸಕಾಯಿತು! ಚೊಕ್ಕ ಚಿನ್ನವು ಕಂದಾಗಿದೆಯಲ್ಲಾ. ಪವಿತ್ರಾಲಯದ ಕಲ್ಲುಗಳು ಪ್ರತಿ ಬೀದಿಯ ಕೊನೆಯಲ್ಲಿ ರಾಶಿರಾಶಿಯಾಗಿ ಬಿದ್ದು ಬಿಟ್ಟಿವೆ.


ಅಯ್ಯೋ, ಕರ್ತನು ಕೋಪಗೊಂಡು ಚೀಯೋನ್ ಪುರಿಗೆ ಮೋಡವು ಕವಿಯುವಂತೆ ಮಾಡಿದ್ದಾನಲ್ಲಾ! ಆತನು ತನ್ನ ಸಿಟ್ಟನ್ನು ತೀರಿಸಿಕೊಂಡ ದಿನದಲ್ಲಿ ತನ್ನ ಪಾದಪೀಠವನ್ನು ನೆನಪಿಗೆ ತಾರದೆ ಇಸ್ರಾಯೇಲಿನ ಶಿರೋಮಣಿಯನ್ನು ಆಕಾಶದಿಂದ ಭೂವಿುಗೆ ತಳ್ಳಿಬಿಟ್ಟನು.


ಅಯ್ಯೋ, ಜನಭರಿತವಾಗಿದ್ದ ನಗರಿಯು ಒಂಟಿಯಾಗಿ ಕೂತು ಬಿಟ್ಟಳಲ್ಲಾ! ಜನಾಂಗಗಳಲ್ಲಿ ರತ್ನವಾಗಿದ್ದವಳು ವಿಧವೆಯಾದಳು, ಸಂಸ್ಥಾನಗಳಲ್ಲಿ ಶಿರೋಮಣಿಯಾಗಿದ್ದವಳು ಬಿಟ್ಟಿಯಾಳಾದಳು.


ಮೋವಾಬಿನ ನೆರೆಹೊರೆಯವರೇ, ಅದರ ಹೆಸರುವಾಸಿಯನ್ನು ಬಲ್ಲವರೇ, ನೀವೆಲ್ಲರೂ ಅದಕ್ಕಾಗಿ ಎದೆಬಡುಕೊಳ್ಳಿರಿ; ಅಯ್ಯೋ, ಬಲವಾದ ಕೋಲು, ಮಹಿಮೆಯ ದಂಡವು ಮುರಿದುಹೋಯಿತಲ್ಲಾ ಎಂದು ಪ್ರಲಾಪಿಸಿರಿ.


ಆಗ ಇಸ್ರಾಯೇಲ್ ವಂಶದವರು ತಮಗೆ ಭರವಸವಾದ ಬೇತೇಲಿನಿಂದ ಆಶಾಭಂಗಪಟ್ಟಂತೆ ಮೋವಾಬ್ಯರು ಕೆಮೋಷಿನಿಂದ ಆಶಾಭಂಗಪಡುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು