Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:40 - ಕನ್ನಡ ಸತ್ಯವೇದವು J.V. (BSI)

40 ಯೆಹೋವನು ಇಂತೆನ್ನುತ್ತಾನೆ - ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ಯೆಹೋವನು ಇಂತೆನ್ನುತ್ತಾನೆ, “ಇಗೋ, ಮೋವಾಬಿನ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 “ಶತ್ರುವು ಮೋವಾಬಿನ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ಯೆಹೋವನು ಹೀಗೆನ್ನುತ್ತಾನೆ: “ನೋಡಿ, ಒಂದು ರಣಹದ್ದು ಆಕಾಶದಿಂದ ಎರಗುತ್ತಿದೆ. ಅದು ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಹರಡುತ್ತಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಅವನು ಹದ್ದಿನ ಹಾಗೆ ಹಾರಿ, ಮೋವಾಬಿನ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:40
11 ತಿಳಿವುಗಳ ಹೋಲಿಕೆ  

ಅದು ತನ್ನ ಪಾತ್ರವನ್ನೆಲ್ಲಾ ಒಳಗೊಂಡು ದಡಗಳನ್ನೆಲ್ಲಾ ಮೀರಿ ಯೆಹೂದದಲ್ಲಿಯೂ ನುಗ್ಗಿ ತುಂಬಿತುಳುಕಿ ಹಬ್ಬಿಕೊಂಡು ಕತ್ತಿನವರೆಗೂ ಏರುವದು; ಇಮ್ಮಾನುವೇಲನೇ! ಆ ಅರಸನ ರೆಕ್ಕೆಗಳು ಹರಡಿ ನಿನ್ನ ದೇಶದ ಅಗಲದಲ್ಲೆಲ್ಲಾ ಮುತ್ತಿಬಿಡುವವು.


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ರಣಹದ್ದು ಹೇಗೆ ದೂರದಿಂದ ಹಾರಿಬರುವದೋ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋವಿುನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು.


ಬಾಯಿಗೆ ತುತೂರಿಯನ್ನು ಹಿಡಿ. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಅಗಲವಾದ ಮತ್ತು ಉದ್ದವಾದ ರೆಕ್ಕೆಗಳುಳ್ಳ ತುಪ್ಪಳ ತುಂಬಿದ ನಾನಾ ಬಣ್ಣದ ದೊಡ್ಡ ಹದ್ದು ಲೆಬನೋನಿಗೆ ಬಂದು ದೇವದಾರು ಮರದ ಮೇಲ್ಗಡೆಯ ರೆಂಬೆಯನ್ನು ಕಿತ್ತಿತು;


ಅವರ ಕುದುರೆಗಳು ಚಿರತೆಗಳಿಗಿಂತ ವೇಗವಾಗಿವೆ, ಸಂಜೆಯ ತೋಳಗಳಿಗಿಂತ ಚುರುಕಾಗಿವೆ; ಅವರ ಸವಾರರು ಕುದುರೆಗಳನ್ನು ಕುಣಿದಾಡಿಸುವರು; ದೂರದಿಂದ ಹತ್ತಿಕೊಂಡು ಬರುವರು; ಕೊಳ್ಳೆಗೆ ಆತುರಪಡುವ ಹದ್ದಿನಂತೆ ಹಾರಾಡುವರು.


ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವು ಕೊಡೋಣವಾಯಿತು.


ನಮ್ಮನ್ನು ಹಿಂದಟ್ಟಿದವರು ಆಕಾಶದ ಹದ್ದುಗಳಿಗಿಂತ ವೇಗಿಗಳಾಗಿದ್ದರು; ಬೆಟ್ಟಗಳ ಮೇಲೆ ನಮ್ಮನ್ನು ಬೆನ್ನಹತ್ತಿ ಅರಣ್ಯದಲ್ಲಿ ಹೊಂಚುಹಾಕಿದರು.


ಇಗೋ, [ಆ ಶತ್ರುವು] ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವನ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ!


ಯಾವವಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ದತಿ, ಇವೇ.


ಇವು ಪಡುವಲಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವವು, ಜೊತೆಯಾಗಿ ಮೂಡಣದವರನ್ನು ಸೂರೆಗೊಳ್ಳುವವು; ಎದೋವಿುನ ಮತ್ತು ಮೋವಾಬಿನ ಮೇಲೆ ಕೈಮಾಡುವವು; ಅಮ್ಮೋನ್ಯರು ಇವುಗಳಿಗೆ ಅಧೀನರಾಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು