ಯೆರೆಮೀಯ 48:7 - ಕನ್ನಡ ಸತ್ಯವೇದವು J.V. (BSI)7 ನೀನು ನಿನ್ನ ಕೆಲಸಗಳಲ್ಲಿಯೂ ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20197 ನೀನು ನಿನ್ನ ಕೆಲಸಗಳಲ್ಲಿಯೂ, ಧನರಾಶಿಗಳಲ್ಲಿಯೂ ಭರವಸವಿಟ್ಟದ್ದರಿಂದ ನೀನೂ ಶತ್ರುವಿನ ಕೈವಶವಾಗುವಿ; ಕೆಮೋಷ್ ದೇವತೆಯೂ ಅದರ ಭಕ್ತರಾದ ಯಾಜಕರೂ ಮತ್ತು ಪ್ರಧಾನರೂ ಒಟ್ಟಾಗಿ ಸೆರೆಗೆ ಹೋಗುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)7 “ಮೋವಾಬೇ, ನಿನ್ನ ಸಾಧನೆಗಳಲ್ಲೇ, ಧನರಾಶಿಗಳಲ್ಲೇ ಭರವಸೆಯಿಟ್ಟೆ. ಆದುದರಿಂದ ನೀನು ಇದೀಗಲೆ ಶತ್ರುಗಳ ಕೈವಶವಾಗುವೆ. ಕೆಮೋಷ್ ಎಂಬ ನಿನ್ನ ದೇವತೆಯೂ ಅದರ ಭಕ್ತ ಯಾಜಕರೂ ಹಾಗೂ ರಾಜ್ಯಾಧಿಕಾರಿಗಳು ಸೆರೆಗೆ ಹೋಗುವರು ಒಟ್ಟಿಗೆ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್7 “ನೀವು ನಿರ್ಮಿಸಿದ ವಸ್ತುಗಳಲ್ಲಿ ಮತ್ತು ನಿಮ್ಮ ಸಂಪತ್ತಿನಲ್ಲಿ ನಂಬಿಕೆಯಿಟ್ಟಿದ್ದರಿಂದ ನಿಮ್ಮನ್ನು ವಶಪಡಿಸಿಕೊಳ್ಳಲಾಗುವುದು. ಕೆಮೋಷ್ ದೇವತೆಯನ್ನು ಅದರ ಯಾಜಕರೊಂದಿಗೆ ಮತ್ತು ಪ್ರಧಾನರೊಂದಿಗೆ ಸೆರೆಹಿಡಿಯಲಾಗುವುದು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ7 ಏಕೆಂದರೆ ನಿನ್ನ ಕ್ರಿಯೆಗಳಲ್ಲಿಯೂ, ನಿನ್ನ ದ್ರವ್ಯಗಳಲ್ಲಿಯೂ ನಂಬಿಕೆ ಇಟ್ಟಿದ್ದರಿಂದ, ನೀನು ಸಹ ಸೆರೆಯಾಗುವಿ ಮತ್ತು ಕೆಮೋಷನು, ಅವನ ಯಾಜಕರು, ಅವನ ಪ್ರಧಾನರು ಸಹಿತವಾಗಿ ಸೆರೆಗೆ ಹೋಗುವರು. ಅಧ್ಯಾಯವನ್ನು ನೋಡಿ |