Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:8 - ಕನ್ನಡ ಸತ್ಯವೇದವು J.V. (BSI)

8 ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; ಯೆಹೋವನು ನುಡಿದಂತೆಯೇ ತಗ್ಗಿನ ಭೂವಿುಯು ಹಾಳಾಗುವದು, ಮೇಲ್ನಾಡೂ ನಾಶವಾಗುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

8 ಸೂರೆಗಾರನು ಪ್ರತಿಯೊಂದು ಪಟ್ಟಣದ ಮೇಲೆ ಬೀಳುವನು, ಯಾವ ಪಟ್ಟಣವೂ ಉಳಿಯದು; ಯೆಹೋವನು ನುಡಿದಂತೆಯೇ ತಗ್ಗಿನ ಭೂಮಿಯು ಹಾಳಾಗುವುದು, ಮೇಲ್ನಾಡೂ ನಾಶವಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

8 ಸೂರೆಗಾರನು ಪ್ರತಿಯೊಂದು ನಗರದ ಮೇಲೆ ಬೀಳುವನು. ಯಾವ ಪಟ್ಟಣವೂ ಉಳಿಯದು. ಸರ್ವೇಶ್ವರನ ನುಡಿಯಂತೆಯೆ ಮೇಲ್ನಾಡು ನಾಶವಾಗುವುದು, ಬೈಲ್ನಾಡು ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

8 ಪ್ರತಿಯೊಂದು ಪಟ್ಟಣದ ಮೇಲೆ ವಿನಾಶಕನು ಧಾಳಿ ಮಾಡುವನು. ಒಂದು ಪಟ್ಟಣವೂ ತಪ್ಪಿಸಿಕೊಳ್ಳಲಾರದು. ಇಳಿಜಾರು ಪ್ರದೇಶವನ್ನು ನಾಶಪಡಿಸಲಾಗುವುದು. ಎತ್ತರದಲ್ಲಿದ್ದ ಪ್ರದೇಶವನ್ನು ಹಾಳುಮಾಡಲಾಗುವುದು. ಇದನ್ನು ಯೆಹೋವನೇ ಹೇಳಿರುವುದರಿಂದ ನೆರವೇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

8 ಒಂದೊಂದು ಪಟ್ಟಣದ ಮೇಲೆ ವಿನಾಶಕನು ಬರುವನು; ಯೆಹೋವ ದೇವರು ಹೇಳಿದ ಹಾಗೆಯೇ, ಒಂದು ಪಟ್ಟಣವಾದರೂ ತಪ್ಪಿಸಿಕೊಳ್ಳಲಾರದು. ತಗ್ಗೂ ಸಹ ನಾಶವಾಗುವುದು; ಮತ್ತು ಬಯಲು ಹಾಳಾಗುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:8
10 ತಿಳಿವುಗಳ ಹೋಲಿಕೆ  

ನನ್ನ ಪ್ರಜೆಯೆಂಬ ಯುವತಿಯೇ, ಗೋಣಿತಟ್ಟನ್ನು ಸುತ್ತಿಕೊಂಡು ಬೂದಿಯಲ್ಲಿ ಬಿದ್ದು ಹೊರಳಾಡು; ಇದ್ದೊಬ್ಬ ಮಗನನ್ನು ಕಳೆದುಕೊಂಡಂತೆ ದುಃಖಪಟ್ಟು ಘೋರಪ್ರಲಾಪಮಾಡು; ಕೊಳ್ಳೆಗಾರನು ತಟ್ಟನೆ ನಮ್ಮ ಮೇಲೆ ಬೀಳುವನಷ್ಟೆ.


ಇಗೋ, ದೇಶಭೂಷಣಗಳಾದ ಮೋವಾಬಿನ ಗಡಿಯ ಪಟ್ಟಣಗಳು ಅಂದರೆ ಬೇತ್‍ಯೆಷೀಮೋತ್ ಬಾಳ್‍ಮೆಯೋನ್, ಕಿರ್ಯಾಥಯಿಮ್ ಎಂಬ ಪಟ್ಟಣಗಳು ಇರುವ ಕಡೆಯಲ್ಲಿ ನಾನು ಮೋವಾಬಿನ ಮೇರೆಯನ್ನು ಒಡೆದುಬಿಟ್ಟು


ಹಾಳುಮಾಡುವವನು ಬಾಬೆಲಿನ ಮೇಲೆ ಬಿದ್ದಿದ್ದಾನೆ, ಅದರ ಶೂರರು ಸೆರೆಯಾಗಿದ್ದಾರೆ, ಅದರ ಬಿಲ್ಲುಗಳು ಮುರಿದುಹೋಗಿವೆ; ಏಕಂದರೆ ಯೆಹೋವನು ಮುಯ್ಯಿತೀರಿಸುವ ದೇವರು, ಆತನು ಪ್ರತಿಕ್ರಿಯೆಮಾಡದೆ ಬಿಡನು.


ಯುವತಿಯೇ, ದೀಬೋನ್‍ಪುರಿಯೇ, ನಿನ್ನ ಮಹಿಮೆಯ ಪದವಿಯಿಂದ ಕೆಳಕ್ಕಿಳಿದು ಬಾಯಾರಿದವಳಾಗಿ ಕೂತುಕೋ! ಮೋವಾಬನ್ನು ಹಾಳುಮಾಡುವವನು ನಿನಗೆ ವಿರುದ್ಧವಾಗಿ ಬಂದು ನಿನ್ನ ಕೋಟೆಕೊತ್ತಲಗಳನ್ನು ಕೆಡವಿದ್ದಾನಲ್ಲಾ.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಅವರ ವಿಧವೆಯರು ನನ್ನ ಭಾಗಕ್ಕೆ ಸಮುದ್ರದ ಉಸುಬಿಗಿಂತ ಹೆಚ್ಚಾಗಿರುವರು; ಯುವಕರ ತಾಯಿಗಳ ಮೇಲೆ ಕೊಳ್ಳೆಹೊಡೆಯುವವನನ್ನು ಮಧ್ಯಾಹ್ನದಲ್ಲೇ ಬರಮಾಡುವೆನು; ಅವರ ಮೇಲೆ ಕಳವಳವನ್ನೂ ದಿಗಿಲನ್ನೂ ತಟ್ಟನೆ ಬೀಳಿಸುವೆನು.


ಒಟ್ಟಾರೆ ಮೀಶೋರೆಂಬ ಎತ್ತರವಾದ ಬೈಲಿನಲ್ಲಿದ್ದ ಎಲ್ಲಾ ಪಟ್ಟಣಗಳೂ ಹೆಷ್ಬೋನಿನಲ್ಲಿ ಆಳುತ್ತಿದ್ದ ಅಮೋರಿಯರ ಅರಸನಾದ ಸೀಹೋನನ ಸಮಸ್ತರಾಜ್ಯವೂ ಇವುಗಳೇ. ಮೋಶೆಯು ಆ ದೇಶದಲ್ಲಿ ವಾಸವಾಗಿದ್ದ ಸೀಹೋನನನ್ನೂ ಎವೀ, ರೆಕೆಮ್, ಚೂರ್, ಹೂರ್, ರೆಬಾ ಎಂಬ ವಿುದ್ಯಾನ್ ಪ್ರಭುಗಳಾಗಿರುವ ಅವನ ಸರದಾರರನ್ನೂ ಹೊಡೆದುಹಾಕಿದನು.


ಮೇದೆಬದ ತಪ್ಪಲಸೀಮೆಗೆ ಸೇರಿದ ಹೆಷ್ಬೋನ್ ಪಟ್ಟಣವೂ ಅದೇ ಎತ್ತರವಾದ ಬೈಲಿನಲ್ಲಿರುವ ದೀಬೋನ್, ಬಾಮೋತ್‍ಬಾಳ್, ಬೇತ್ಬಾಳ್ಮೆಯೋನ್,


ಅರ್ನೋನ್ ತಗ್ಗಿನ ಅಂಚಿನಲ್ಲಿದ್ದ ಅರೋಯೇರ್ ಪಟ್ಟಣವು ಮತ್ತು ತಗ್ಗಿನಲ್ಲಿಯೇ ಇದ್ದ ಪಟ್ಟಣವು ಇವು ಮೊದಲುಗೊಂಡು ದೀಬೋನಿನವರೆಗೆ ವಿಸ್ತರಿಸಿಕೊಂಡಿರುವ ಮೇದೆಬದ ತಪ್ಪಲಸೀಮೆ,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು