Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 48:9 - ಕನ್ನಡ ಸತ್ಯವೇದವು J.V. (BSI)

9 ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

9 ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಬೇಕಲ್ಲಾ; ಅದರ ಪಟ್ಟಣಗಳು ಹಾಳುಬಿದ್ದು ನಿರ್ಜನವಾಗುವವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

9 ಮೋವಾಬಿಗೆ ರೆಕ್ಕೆ ಕಟ್ಟಿರಿ, ಅದು ಹಾರಿಹೋಗಲಿ ಅದರ ನಗರಗಳು ಹಾಳುಬಿದ್ದು ನಿರ್ಜನವಾಗುವುವು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

9 ಮೋವಾಬಿನ ಭೂಮಿಯ ಮೇಲೆ ಉಪ್ಪನ್ನು ಹರಡಿರಿ. ದೇಶವು ಬರಿದಾದ ಮರುಭೂಮಿಯಾಗುವುದು. ಮೋವಾಬಿನ ಪಟ್ಟಣಗಳು ಬರಿದಾಗುವವು. ಅಲ್ಲಿ ಯಾರೂ ವಾಸಮಾಡಲಾರರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

9 ಹಾರಿಹೋಗುವ ಹಾಗೆ ಮೋವಾಬಿಗೆ ರೆಕ್ಕೆಗಳನ್ನು ಕೊಡಿರಿ; ಏಕೆಂದರೆ ಅದರ ಪಟ್ಟಣಗಳು ಹಾಳಾಗುವುವು; ಅವುಗಳಲ್ಲಿ ನಿವಾಸಿಗಳಿರುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 48:9
8 ತಿಳಿವುಗಳ ಹೋಲಿಕೆ  

ಮೋವಾಬ್ಯರೇ, ಪಟ್ಟಣಗಳನ್ನು ಬಿಟ್ಟು ಬಂಡೆಯ ಗುಹೆಗಳಲ್ಲಿ ವಾಸಿಸಿರಿ; ಹಳ್ಳಕೊಳ್ಳದ ಆಚೆಯ ಪಕ್ಕೆಯಲ್ಲಿ ಗೂಡನ್ನು ಕಟ್ಟಿಕೊಳ್ಳುವ ಪಾರಿವಾಳದಂತಿರಿ;


ಅರ್ನೋನ್ ನದಿಯ ಹಾಯ್ಗಡಗಳಲ್ಲಿ ಮೋವಾಬಿನ ಊರುಗಳವರು ಅಲೆಯುವ ಪಕ್ಷಿಗಳಂತೆಯೂ ಗೂಡಿನಿಂದ ಚದರಿದ ಮರಿಗಳ ಹಾಗೂ ಆಗುವರು.


ಯೆಹೋವನನ್ನು ಆಶ್ರಯಿಸಿಕೊಂಡಿದ್ದೇನೆ.


ಆ ಸ್ತ್ರೀಯು ಅರಣ್ಯದಲ್ಲಿದ್ದ ತನ್ನ ಸ್ಥಳಕ್ಕೆ ಹಾರಿಹೋಗುವದಕ್ಕಾಗಿ ಆಕೆಗೆ ದೊಡ್ಡ ಗರುಡಪಕ್ಷಿಯ ಎರಡು ರೆಕ್ಕೆಗಳು ಕೊಡಲ್ಪಟ್ಟವು. ಅಲ್ಲಿ ಒಂದು ಕಾಲ, ಎರಡು ಕಾಲ, ಅರ್ಧಕಾಲ ಸರ್ಪನ ಮುಖಕ್ಕೆ ಮರೆಯಾಗಿ ಪೋಷಣೆ ಹೊಂದುತ್ತಾಳೆ.


ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.


ಐಗುಪ್ತದಲ್ಲಿ ವಾಸಿಸುವ ಯುವತಿಯೇ, ಸೆರೆಗೆ ಬೇಕಾದ ಸಾಮಗ್ರಿಗಳನ್ನು ಒದಗಿಸಿಕೋ; ನೋಫ್ ಪಟ್ಟಣವು ಹಾಳಾಗಿ ಸುಟ್ಟು ನಿರ್ಜನವಾಗುವದು.


ಆಹಾ, ನನಗೆ ರೆಕ್ಕೆಗಳಿದ್ದರೆ ಪಾರಿವಾಳದಂತೆ ಹಾರಿಹೋಗಿ ಆಶ್ರಯಸೇರಿಕೊಳ್ಳುತ್ತಿದ್ದೆನು.


ನೀವು ನಡಿಸಿದ ದುರಾಚಾರಗಳನ್ನೂ ಅಸಹ್ಯಕಾರ್ಯಗಳನ್ನೂ ಯೆಹೋವನು ಇನ್ನು ಸಹಿಸಲಾರದೆ ಹೋದದರಿಂದ ನಿಮ್ಮ ದೇಶವು ಹಾಳುಬಿದ್ದು ಜನವಿಲ್ಲದೆ ಬೆರಗಿಗೂ ಶಾಪಕ್ಕೂ ಆಸ್ಪದವಾಯಿತು; ಈಗಲೂ ಹಾಗೆಯೇ ಇದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು