Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:12 - ಕನ್ನಡ ಸತ್ಯವೇದವು J.V. (BSI)

12 ಯೆಹೋವನು ಇಂತೆನ್ನುತ್ತಾನೆ - ಪಾತ್ರೆಯಲ್ಲಿ ಕುಡಿಯುವದು ಯಾರ ಪಾಲಿಗೆ ಬರಲಿಲ್ಲವೋ ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿಯಲೇ ಕುಡಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಯೆಹೋವನು ಇಂತೆನ್ನುತ್ತಾನೆ, ಪಾತ್ರೆಯಲ್ಲಿ ಕುಡಿಯುವುದು ಯಾರ ಪಾಲಿಗೆ ಬರಲಿಲ್ಲವೋ, ಅವರೇ ಖಂಡಿತ ಕುಡಿಯಬೇಕಾಗಿರುವಲ್ಲಿ ನೀನು ಅದಕ್ಕೆ ತಪ್ಪಿಸಿಕೊಂಡೀಯಾ? ಆಗುವುದೇ ಇಲ್ಲ, ನೀನು ಕುಡಿದೇ ಕುಡಿಯುವಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಸರ್ವೇಶ್ವರ ಇಂತೆನ್ನುತ್ತಾರೆ: “ಕಷ್ಟವೆಂಬ ಕೊಡದಿಂದ ಕುಡಿಸಲು ಯಾರ ಪಾಲಿಗೆ ಬರಲಿಲ್ಲವೋ ಅಂಥವರೇ ಕುಡಿಯಬೇಕಾಗಿರುವಲ್ಲಿ ನೀನು ಅದರಿಂದ ತಪ್ಪಿಸಿಕೊಳ್ಳುವೆಯಾ? ಇಲ್ಲ, ಅದು ಸಾಧ್ಯವಿಲ್ಲ, ನೀನು ಕುಡಿದೇ ತೀರಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಯೆಹೋವನು ಹೀಗೆನ್ನುತ್ತಾನೆ: “ಕೆಲವು ಜನರು ದಂಡನೆಗೆ ಅರ್ಹರಾಗಿರುವದಿಲ್ಲ. ಆದರೂ ಅವರು ಕಷ್ಟ ಅನುಭವಿಸುವರು. ಎದೋಮೇ, ನೀನು ದಂಡನೆಗೆ ಯೋಗ್ಯಳಾಗಿರುವೆ. ಆದ್ದರಿಂದ ನಿಜವಾಗಿಯೂ ನಿನ್ನನ್ನು ದಂಡಿಸಲಾಗುವುದು. ನಿನಗೆ ಸಿಗಬೇಕಾದ ದಂಡನೆಯಿಂದ ನೀನು ತಪ್ಪಿಸಿಕೊಳ್ಳಲಾರೆ. ನಿನ್ನನ್ನು ದಂಡಿಸಲಾಗುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಏಕೆಂದರೆ ಯೆಹೋವ ದೇವರು ಹೀಗೆ ಹೇಳುತ್ತಾರೆ: “ಇಗೋ, ಪಾತ್ರೆಯಲ್ಲಿ ಕುಡಿಯುವುದಕ್ಕೆ ಯಾರಿಗೆ ನ್ಯಾಯ ತೀರ್ವಿಕೆ ಆಗಲಿಲ್ಲವೋ, ಅವರು ಸಹ ಕುಡಿದಿದ್ದಾರೆ; ಹಾಗಾದರೆ ನೀನು ಶುದ್ಧವಾಗಿ ಶಿಕ್ಷಿಸದೆ ಹೋಗಬೇಕು? ನೀವು ಶಿಕ್ಷಿಸದೆ ಹೋಗುವುದಿಲ್ಲ, ನಿಶ್ಚಯವಾಗಿ ಕುಡಿಯುವೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:12
9 ತಿಳಿವುಗಳ ಹೋಲಿಕೆ  

[ನನ್ನ ಜನರೇ,] ನೀವು ನನ್ನ ಪವಿತ್ರ ಪರ್ವತದಲ್ಲಿ [ವಿಪತ್ಪಾನಕವನ್ನು] ಪಾನಮಾಡಿದಂತೆಯೇ ಸಕಲ ಜನಾಂಗಗಳೂ ನಿತ್ಯವಾಗಿ ಪಾನಮಾಡುವವು; ಹೌದು, ಕುಡಿದು ನುಂಗಿಬಿಟ್ಟು ಇಲ್ಲದ ಹಾಗಾಗುವವು.


ನನ್ನ ಸೇವಕ ಯಾಕೋಬೇ, ಭಯಪಡಬೇಡ! ಇಸ್ರಾಯೇಲೇ, ಅಂಜಬೇಡ! ಇಗೋ, ನಾನು ನಿನ್ನನ್ನು ದೂರದೇಶದಿಂದ ಉದ್ಧರಿಸುವೆನು, ನಿನ್ನ ಸಂತಾನವನ್ನು ಸೆರೆಹೋದ ಸೀಮೆಯಿಂದ ರಕ್ಷಿಸುವೆನು; ಯಾಕೋಬು ಹಿಂದಿರುಗಿ ನೆಮ್ಮದಿಯಾಗಿಯೂ ಹಾಯಾಗಿಯೂ ಇರುವದು; ಯಾರೂ ಅದನ್ನು ಹೆದರಿಸರು.


ಯಾರೂ ಅದನ್ನು ಹೆದರಿಸರು. ಯೆಹೋವನು ಇಂತೆನ್ನುತ್ತಾನೆ - ನಾನು ನಿನ್ನನ್ನು ರಕ್ಷಿಸಲು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿ ಚದರಿಸಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು, ನಿನ್ನನ್ನೋ ನಿರ್ಮೂಲಮಾಡೆನು; ನಿನ್ನನ್ನು ವಿುತಿಮೀರಿ ಶಿಕ್ಷಿಸೆನು. ಆದರೆ ಶಿಕ್ಷಿಸದೆ ಬಿಡುವದಿಲ್ಲ.


ಇಸ್ರಾಯೇಲ್ಯರ ದೇವರಾದ ಯೆಹೋವನು ನನಗೆ - ರೋಷರೂಪಮದ್ಯದ ಈ ಪಾತ್ರೆಯನ್ನು ನೀನು ನನ್ನ ಕೈಯಿಂದ ತೆಗೆದುಕೊಂಡು ಯಾವ ಜನಾಂಗಗಳ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಕಲ ಜನಾಂಗಗಳು ಇದರಲ್ಲಿ ಕುಡಿಯುವಂತೆ ಮಾಡು.


ಬಡವರನ್ನು ಹಾಸ್ಯಮಾಡುವವನು ಸೃಷ್ಟಿಕರ್ತನನ್ನೇ ಹೀನೈಸುವನು; [ಪರರ] ವಿಪತ್ತಿಗೆ ಹಿಗ್ಗುವವನು ದಂಡನೆಯನ್ನು ಹೊಂದದಿರನು.


ಅದಕ್ಕೆ ಯೇಸು - ನೀವು ಬೇಡಿಕೊಂಡದ್ದು ಏನೆಂದು ನಿಮಗೆ ತಿಳಿಯದು. ನಾನು ಕುಡಿಯಬೇಕಾಗಿರುವ ಪಾತ್ರೆಯಲ್ಲಿ ನೀವು ಕುಡಿಯುವದು ನಿವ್ಮಿುಂದಾದೀತೇ ಎಂದು ಕೇಳಲು ಅವರು - ಆಗುವದು ಅಂದರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು