Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:17 - ಕನ್ನಡ ಸತ್ಯವೇದವು J.V. (BSI)

17 ಎದೋಮು ಬೆರಗಿಗೆ ಆಸ್ಪದವಾಗುವದು; ಹಾದು ಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎದೋಮು ಪರಿಹಾಸ್ಯಕ್ಕೆ ಗುರಿಯಾಗುವುದು; ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳಿಗೆ ಬೆರಗಾಗಿ ಸಿಳ್ಳುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 “ಎದೋಮಿಗೆ ವಿಪತ್ತುಗಳು ಬಂದೊದಗುವುವು. ಅದನ್ನು ನೋಡುವವರು ಬೆರಗುಗೊಳ್ಳುವರು. ಹಾದುಹೋಗುವವರೆಲ್ಲರು ಸಿಳ್ಳುಹಾಕಿ ಪರಿಹಾಸ್ಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 “ಎದೋಮನ್ನು ನಾಶಮಾಡಲಾಗುವುದು. ಹಾಳಾದ ನಗರಗಳನ್ನು ಕಂಡು ಜನರು ಬೆರಗಾಗುವರು. ನಾಶವಾದ ನಗರಗಳನ್ನು ಕಂಡು ಜನರು ಆಶ್ಚರ್ಯಚಕಿತರಾಗಿ ಸಿಳ್ಳುಹಾಕುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಎದೋಮು ಸಹ ಹಾಳಾಗುವುದು; ಅದರ ಬಳಿಯಲ್ಲಿ ಹಾದುಹೋಗುವವರೆಲ್ಲರು ಅದರ ಎಲ್ಲಾ ಬಾಧೆಗಳ ನಿಮಿತ್ತ ವಿಸ್ಮಯಪಟ್ಟು, ಅಪಹಾಸ್ಯ ಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:17
16 ತಿಳಿವುಗಳ ಹೋಲಿಕೆ  

ಸೇಯೀರ್ ಬೆಟ್ಟವೇ, ನಾನು ನಿನ್ನ ಸೀಮೆಯನ್ನು ಹಾಳುಪಾಳುಮಾಡಿ ಅದರೊಳಗೆ ಹೋಗುವವರನ್ನೂ ಬರುವವರನ್ನೂ ಕತ್ತರಿಸಿಬಿಟ್ಟು


ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವದು; ಬಾಬೆಲನ್ನು ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಬೊಚ್ರವು ಹಾಳುಬಿದ್ದು ಬೆರಗಿಗೂ ನಿಂದೆಗೂ ಶಾಪಕ್ಕೂ ಗುರಿಯಾಗಿ ಅದಕ್ಕೆ ಸೇರಿದ ಊರುಗಳೆಲ್ಲಾ ನಿತ್ಯನಾಶನವನ್ನು ಹೊಂದುವವು ಎಂದು ನನ್ನ ಮೇಲೆ ಆಣೆಯಿಟ್ಟಿದ್ದೇನೆ. ಇದು ಯೆಹೋವನ ನುಡಿ.


ಆಗ ಬಾಬೆಲು ಹಾಳುದಿಬ್ಬಗಳೂ ನರಿಗಳ ಹಕ್ಕೆಯೂ ಆಗಿರುವದು; ಅದು ನಿರ್ಜನವಾಗಿ ಬೆರಗಿನ ಸಿಳ್ಳಿಗೆ ಗುರಿಯಾಗುವದು.


ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯವಾಗಿ ಗುರಿಯಾಗುವದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.


ಉನ್ನತವಾದ ಈ ಮಂದಿರದ ಮಾರ್ಗವಾಗಿ ಹಾದುಹೋಗುವವರು ಅದನ್ನು ನೋಡಿ ವಿಸ್ಮಿತರಾಗಿ - ಅಬ್ಬಬ್ಬಾ, ಇದೇನು! ಯೆಹೋವನು ಈ ದೇಶವನ್ನೂ ಈ ಆಲಯವನ್ನೂ ಹೀಗೇಕೆ ಮಾಡಿದನು ಎಂದು ಕೇಳುವರು.


ಈ ನಿನೆವೆಯು ಮೊದಲು ಉಲ್ಲಾಸದ ನಗರಿಯಾಗಿ ನೆಮ್ಮದಿಯಿಂದ ನೆಲೆಗೊಂಡಿದ್ದು ತನ್ನ ಹೃದಯದೊಳಗೆ - ನಾನೇ ಇರುವವಳು, ನನ್ನ ಹೊರತು ಇನ್ನು ಯಾರೂ ಇಲ್ಲ ಅಂದುಕೊಳ್ಳುತ್ತಿತ್ತು; ಅಯ್ಯೋ, ಎಷ್ಟೋ ಹಾಳಾಗಿ ಹೋಗಿ ಮೃಗಗಳು ತಂಗುವ ಹಕ್ಕೆಯಾಗಿದೆ! ಹಾದುಹೋಗುವವರೆಲ್ಲರೂ ಸಿಳ್ಳುಹಾಕಿ ಕೈಯಾಡಿಸುತ್ತಾರೆ.


ಒಮ್ರಿಯ ನಿಯಮಗಳೂ ಅಹಾಬನ ಮನೆತನದ ಸಕಲಾಚಾರಗಳೂ [ನಿನ್ನಲ್ಲಿ] ಸಲ್ಲುತ್ತಿವೆ, ನಿನ್ನವರು ಅವರ ದುರ್ನೀತಿಗೆ ಅನುಸಾರವಾಗಿ ನಡೆಯುತ್ತಾರೆ; ಆದಕಾರಣ ನಾನು ನಿನ್ನನ್ನು ಬೆರಗಿಗೂ ನನ್ನ ನಿವಾಸಿಗಳನ್ನು ಸಿಳ್ಳಿಗೂ ಗುರಿಮಾಡುವೆನು; ನನ್ನ ಜನರಿಗೆ ಸಂಭವಿಸಬೇಕಾದ ಅವಮಾನವನ್ನು ಅನುಭವಿಸುವಿರಿ.


ಇಸ್ರಾಯೇಲ್ಯರ ಸ್ವಾಸ್ತ್ಯದ ನಾಶನಕ್ಕೆ ನೀನು ಹೇಗೆ ಸಂತೋಷಪಟ್ಟಿಯೋ ಹಾಗೆಯೇ ನಿನ್ನ ನಾಶನಕ್ಕೆ ಲೋಕವೆಲ್ಲಾ ಸಂತೋಷಪಡುವಂತೆ ಮಾಡುವೆನು; ಸೇಯೀರ್ ಬೆಟ್ಟವೇ, ನೀನು ಹಾಳಾಗುವಿ; ಹೌದು, ಎದೋಮ್ ಸೀಮೆಯೆಲ್ಲಾ ತೀರಾ ಹಾಳಾಗುವದು; ಆಗ ನಾನೇ ಯೆಹೋವನು ಎಂದು ವ್ಯಕ್ತವಾಗುವದು.


ಹೀಗಿರಲು ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ನಾನು ಎದೋವಿುನ ಮೇಲೆ ಕೈಯೆತ್ತಿ ಅದರೊಳಗಿಂದ ಜನರನ್ನೂ ಪಶುಗಳನ್ನೂ ನಿರ್ಮೂಲಪಡಿಸಿ ತೇಮಾನಿನಿಂದ ದೆದಾನಿನವರೆಗೂ ಅದನ್ನು ಹಾಳುಮಾಡಿ ಪ್ರಜೆಗಳನ್ನು ಖಡ್ಗಕ್ಕೆ ಸಿಕ್ಕಿಸುವೆನು.


ಮುಂದೆ ಹುಟ್ಟುವ ನಿಮ್ಮ ಸಂತತಿಯವರೂ ದೇಶಾಂತರಗಳಿಂದ ಬರುವ ಅನ್ಯರೂ ನಿಮ್ಮ ದೇಶಕ್ಕೆ ಯೆಹೋವನು ಉಂಟುಮಾಡಿದ ರೋಗೋಪದ್ರವಗಳನ್ನು ಕಂಡು ಆಶ್ಚರ್ಯಪಡುವರು.


ಜನಾಂಗಗಳ ವರ್ತಕರು ನಿನ್ನನ್ನು ನೋಡಿ ಸಿಳ್ಳುಹಾಕುತ್ತಾರೆ; ನೀನು ತೀರಾ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾದಿ.


ಕರ್ತನಾದ ಯೆಹೋವನು ಇಂತೆನ್ನುತ್ತಾನೆ - ಸೇಯೀರ್‍ಬೆಟ್ಟವೇ, ಇಗೋ, ನಾನು ನಿನಗೆ ವಿರುದ್ಧನಾಗಿದ್ದೇನೆ; ನಾನು ನಿನ್ನ ಸೀಮೆಯ ಮೇಲೆ ಕೈಯೆತ್ತಿ ಅದನ್ನು ಹಾಳುಪಾಳುಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು