Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:19 - ಕನ್ನಡ ಸತ್ಯವೇದವು J.V. (BSI)

19 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

19 ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟ ಅಡವಿಯಿಂದ ಎದೋಮ್ಯರಿಗೆ ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವುದಕ್ಕೆ ನೇಮಿಸುವೆನು; ನನ್ನ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಯಾರು ಕರೆದಾರು? ಮಂದೆಯನ್ನು ಕಾಯುವ ಯಾರು ನನ್ನೆದುರಿಗೆ ನಿಲ್ಲಬಲ್ಲರು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

19 “ಎದೋಮ್ಯರಿಗೆ ನಿತ್ಯ ನೆಲೆಯಾದ ಗೋಮಾಳಕ್ಕೆ ಇದೋ ಜೋರ್ಡನ್ ದಟ್ಟಡವಿಯಿಂದ ಸಿಂಹದೋಪಾದಿ ಏರಿಬರುವೆನು. ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ಓಡಿಸಿಬಿಡುವೆನು. ಅದನ್ನು ಪಾಲಿಸುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನ್ಯಾಯವಿಚಾರಣೆಗೆ ನನ್ನನ್ನು ಎಳೆಯುವಂಥ ವ್ಯಕ್ತಿ ಯಾರು? ಮಂದೆಯನ್ನು ಕಾಯುವ ಯಾವನು ತಾನೆ ನನ್ನೆದುರಿಗೆ ನಿಲ್ಲಬಲ್ಲನು?

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

19 “ಜೋರ್ಡನ್ ನದಿಯ ಸಮೀಪದ ದಟ್ಟವಾದ ಕಾಡಿನಿಂದ ಫಕ್ಕನೆ ಒಂದು ಸಿಂಹ ಬರುವದು. ಅದು ಹೊಲಗಳಲ್ಲಿದ್ದ ಜನರ ದನಕುರಿಗಳ ಹಟ್ಟಿಗಳಿಗೆ ನುಗ್ಗುವುದು. ನಾನು ಆ ಸಿಂಹದಂತೆ ಇದ್ದೇನೆ. ನಾನು ಎದೋಮ್ ನಗರಕ್ಕೆ ಹೋಗಿ ಆ ಜನರನ್ನು ಹೆದರಿಸುವೆನು; ಅವರು ಓಡಿಹೋಗುವಂತೆ ಮಾಡುವೆನು. ಅವರ ತರುಣರಲ್ಲಿ ಯಾರೂ ನನ್ನನ್ನು ತಡೆಯಲಾರರು. ನನ್ನತೆ ಯಾರೂ ಇಲ್ಲ. ಯಾರೂ ನನ್ನನ್ನು ಪ್ರತಿಭಟಿಸುವದಿಲ್ಲ. ಅವರ ನಾಯಕರಲ್ಲಿ ಯಾರೂ ನನ್ನ ವಿರುದ್ಧ ನಿಲ್ಲುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

19 “ಇಗೋ, ಅವನು ಸಿಂಹದ ಹಾಗೆ ಯೊರ್ದನಿನ ದಟ್ಟ ಅಡವಿಯಿಂದ ಬಲವಾದ ಗೋಮಾಳಕ್ಕೆ ವಿರೋಧವಾಗಿ ಏರಿ ಬರುವನು; ಆದರೆ ನಾನು ಕ್ಷಣಮಾತ್ರದಲ್ಲಿ ಅವರನ್ನು ಅಲ್ಲಿಂದ ದೂರವಾಗಿ ಓಡಿಸಿಬಿಡುವೆನು. ಅದನ್ನು ಕಾಯುವುದಕ್ಕೆ ನಾನು ಆರಿಸಿಕೊಂಡವನನ್ನೇ ನೇಮಿಸುವೆನು. ನನಗೆ ಸಮಾನನು ಯಾರು? ನನ್ನನ್ನು ನ್ಯಾಯವಿಚಾರಣೆಗೆ ಕರೆಯುವವನು ಯಾರು? ನನಗೆ ಎದುರಾಗಿ ನಿಲ್ಲತಕ್ಕ ಕುರುಬನು ಯಾರು?”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:19
28 ತಿಳಿವುಗಳ ಹೋಲಿಕೆ  

[ಇಂತೆನ್ನುವ ನನಗೆ ಯೆಹೋವನು ಹೀಗೆ ಹೇಳಿದ್ದಾನೆ - ] ನೀನು ಕಾಲಾಳುಗಳ ಸಂಗಡ ಓಡಿ ಆಯಾಸಗೊಂಡಿದ್ದರೆ ಕುದುರೆಗಳೊಂದಿಗೆ ಓಡಿ ಹೇಗೆ ಮುಂದಾಗುವಿ? ನಿರಪಾಯದೇಶದಲ್ಲಿ ನೀನು ನಿರ್ಭಯವಾಗಿದ್ದರೂ ಯೊರ್ದನಿನ ದಟ್ಟಡವಿಯಲ್ಲಿ ಏನು ಮಾಡುವಿ?


ಅವರಲ್ಲೇ ಒಬ್ಬನು ಅವರಿಗೆ ಪ್ರಭುವಾಗಿರುವನು, ಅವರ ವಂಶದವನೇ ಅವರನ್ನಾಳುವನು; ನಾನು ಅವನನ್ನು ನನ್ನ ಹತ್ತಿರಕ್ಕೆ ಬರಗೊಡಿಸಲಾಗಿ ಅವನು ನನ್ನ ಸನ್ನಿಧಾನಕ್ಕೆ ಸೇರುವನು; ನನ್ನನ್ನು ಸಮೀಪಿಸುವದಕ್ಕೆ ಯಾರು ಧೈರ್ಯಗೊಂಡಾರು? ಇದು ಯೆಹೋವನ ನುಡಿ.


ಅದನ್ನು ಕೆಣಕಲು ಧೈರ್ಯಗೊಳ್ಳುವಷ್ಟು ಉಗ್ರತೆಯು ಯಾರಲ್ಲಿಯೂ ಇಲ್ಲ; ಹೀಗಿರಲು ನನ್ನ ಮುಂದೆ ನಿಲ್ಲಬಲ್ಲವರು ಯಾರು?


ನಾನು ಬಲಿಷ್ಠನ ಶಕ್ತಿಯನ್ನು ಮರೆಹೊಗುವೆನೆಂದರೆ [ದೇವರು] - ಇಗೋ, [ಇದ್ದೇನೆ; ಅನ್ನುವನು] ನ್ಯಾಯವಿಚಾರಣೆಯು [ಆಗಲಿ ಎಂದರೆ ಆತನು] ನನಗೆ ಕಾಲನಿಯಾಮಕರು ಯಾರು [ಅನ್ನುವನು].


ಮಂಜೂಷವನ್ನು ಹೊತ್ತ ಯಾಜಕರು ಯೊರ್ದನಿಗೆ ಬಂದು ನೀರಿನಲ್ಲಿ ತಮ್ಮ ಕಾಲುಗಳನ್ನು ಅದ್ದುತ್ತಲೇ ಸುಗ್ಗೀಕಾಲದಲ್ಲೆಲ್ಲಾ ದಡಮೀರಿ ಹರಿಯುವ ಯೊರ್ದನ್ ಹೊಳೆಯ ನೀರು ನಿಂತು ಹೋಯಿತು.


ಯೆಹೋವನೇ, ದೇವರುಗಳಲ್ಲಿ ನಿನ್ನ ಸಮಾನನು ಯಾವನು? ಪರಿಶುದ್ಧತ್ವದಿಂದ ಸರ್ವೋತ್ತಮನೂ ಪ್ರಖ್ಯಾತ ಕೃತ್ಯಗಳನ್ನು ಮಾಡಿರುವದರಿಂದ ಭಯಂಕರನೂ ಅದ್ಭುತಗಳನ್ನು ನಡಿಸುವವನೂ ಆಗಿರುವ ನಿನಗೆ ಸಮಾನನು ಎಲ್ಲಿ?


ಅವರ ಕೋಪವು ಕಾಣಿಸುವ ಮಹಾದಿನ ಬಂದದೆ; ಅದರ ಮುಂದೆ ನಿಲ್ಲುವದಕ್ಕೆ ಯಾರು ಶಕ್ತರು ಎಂದು ಹೇಳಿದರು.


ಆಹಾ, ಕುರುಬರು ಗೋಳಾಡುತ್ತಾರೆ! ಅವರ ಅತಿಶಯದ ಕಾವಲು ಹಾಳಾಗಿದೆ. ಇಗೋ, ಪ್ರಾಯದ ಸಿಂಹಗಳು ಗರ್ಜಿಸುತ್ತವೆ! ಯೊರ್ದನಿನ ದಟ್ಟಡವಿಯು ಪಾಳಾಗಿದೆ.


ಆತನ ಸಿಟ್ಟಿಗೆ ಯಾರು ತಡೆದಾರು? ಆತನ ರೋಷಾಗ್ನಿಗೆ ಯಾರು ನಿಂತಾರು? ಆತನ ರೌದ್ರವು ಜ್ವಾಲಾಪ್ರವಾಹದಂತೆ ಹರಿಯುತ್ತದೆ, ಬಂಡೆಗಳು ಆತನಿಂದ ಕೆಡವಲ್ಪಟ್ಟಿವೆ.


ಜನಾಂಗಘಾತುಕವಾದ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದಿದೆ; ಹೊರಟಿದೆ, ಸ್ಥಳದಿಂದ ತೆರಳಿದೆ; ನಿನ್ನ ದೇಶವನ್ನು ಹಾಳುಮಾಡುವದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ನಿವಾಸಿಗಳಾಗುವವು.


ಹೀಗಿರಲು ನನ್ನನ್ನು ಯಾರಿಗೆ ಹೋಲಿಸಿ ಸರಿಸಮಾನಮಾಡುತ್ತೀರಿ ಎಂದು ಸದಮಲ ಸ್ವಾವಿುಯು ಕೇಳುತ್ತಾನೆ.


ನಿನ್ನ ಸೇವಕನನ್ನು ವಿಚಾರಣೆಗೆ ಗುರಿಮಾಡಬೇಡ; ನಿನ್ನ ಸನ್ನಿಧಿಯಲ್ಲಿ ಯಾವ ಜೀವಿಯೂ ನೀತಿವಂತನಲ್ಲ.


ಯೆಹೋವನೇ, ಸೇನಾಧೀಶ್ವರನಾದ ದೇವರೇ, ನಿನಗೆ ಸಮಾನರು ಯಾರು? ಯಾಹುವೇ, ನೀನು ಶಕ್ತನು, ಸತ್ಯತೆಯಿಂದ ಆವರಿಸಲ್ಪಟ್ಟವನು.


ಮೇಘಮಂಡಲದಲ್ಲಿ ಯೆಹೋವನಿಗೆ ಸಮಾನರು ಯಾರು? ದೇವದೂತರಲ್ಲಿ ಯೆಹೋವನಿಗೆ ಸರಿಯಾದವರು ಯಾರು?


ನೀನು ಮಹಾಭಯಂಕರನು; ನೀನು ಸಿಟ್ಟುಗೊಂಡಾಗ ನಿನ್ನ ಮುಂದೆ ಯಾರು ನಿಂತಾರು?


ನಾನು ನಿರ್ದೋಷಿಯೇ ಹೌದು; ನನ್ನ ವಿಷಯದಲ್ಲಿ ನನಗೇನೂ ಚಿಂತೆಯಿಲ್ಲ; ನನ್ನ ಪ್ರಾಣವನ್ನು ತೃಣೀಕರಿಸುತ್ತೇನೆ.


ಯೊರ್ದನ್ ನದಿಯು ಪ್ರಥಮ ಮಾಸದಲ್ಲಿ ದಡತುಂಬಿ ಹರಿಯುತ್ತಿರುವಾಗ ಅದನ್ನು ದಾಟಿ ನದಿಯ ತಗ್ಗಿನ ಪೂರ್ವ ಪಶ್ಚಿಮ ಪ್ರದೇಶಗಳವರೆಲ್ಲರನ್ನೂ ಓಡಿಸಿಬಿಟ್ಟವರು ಇವರೇ.


ತನ್ನವರು ಯಾರಾರೆಂಬದನ್ನು ಯೆಹೋವನು ನಾಳೆ ತಿಳಿಸುವನು. ಯಾರನ್ನು ಯೆಹೋವನು ಪ್ರತಿಷ್ಠಿಸಿದ್ದಾನೋ ಯಾರನ್ನು ತಾನೇ ಆದು ಕೊಂಡಿದ್ದಾನೋ ಅವರನ್ನು ಮಾತ್ರ ಆತನು ತನ್ನ ಹತ್ತಿರಕ್ಕೆ ಬರಗೊಡಿಸುವನು.


ಪುರಾತನದ ಹಳೇ ಸಂಗತಿಗಳನ್ನು ಜ್ಞಾಪಿಸಿಕೊಳ್ಳಿರಿ; ನಾನೇ ದೇವರು, ಇನ್ನು ಯಾರೂ ಅಲ್ಲ; ನಾನೇ ಪರಮದೇವರು, ನನಗೆ ಸರಿಸಮಾನರಿಲ್ಲ.


ಯೆಹೋವನೇ, ನಮ್ಮ ಪಿತೃಗಳ ದೇವರೇ, ಪರಲೋಕದಲ್ಲಿ ದೇವರಾಗಿರುವಾತನು ನೀನಲ್ಲವೋ? ನೀನು ಜನಾಂಗಗಳ ಎಲ್ಲಾ ರಾಜ್ಯಗಳನ್ನು ಆಳುವವನಾಗಿರುತ್ತೀ. ನಿನ್ನ ಹಸ್ತದಲ್ಲಿ ಬಲಪರಾಕ್ರಮಗಳಿರುತ್ತವೆ; ನಿನ್ನೆದುರಿನಲ್ಲಿ ಯಾರೂ ನಿಲ್ಲಲಾರರು.


ಪರಲೋಕದಲ್ಲಿರುವ ನೀನು ನಿನ್ನ ನ್ಯಾಯವಿಧಿಯನ್ನು ಆಜ್ಞಾಪಿಸುವಾಗ


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವು ಕೊಡೋಣವಾಯಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು