Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:22 - ಕನ್ನಡ ಸತ್ಯವೇದವು J.V. (BSI)

22 ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋವಿುನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

22 ಇಗೋ, ಬೊಚ್ರದ ಮೇಲೆ ಎರಗಬೇಕೆಂದು ಶತ್ರುವು ರಣಹದ್ದಿನಂತೆ ತನ್ನ ರೆಕ್ಕೆಗಳನ್ನು ಹರಡಿ ಹಾರಿ ಏರುವನು; ಆ ದಿನದಲ್ಲಿ ಎದೋಮಿನ ಶೂರರ ಎದೆಯು ಹೆರುವ ಹೆಂಗಸಿನ ಎದೆಯಂತೆ ಅದರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

22 ಶತ್ರುವು ಬೊಚ್ರದ ಮೇಲೆ ಎರಗಲು ರಣಹದ್ದಿನಂತೆ ರೆಕ್ಕೆಗಳನ್ನು ಹರಡಿ ಹಾರಿ ಏರುವನು. ಆ ದಿನದಂದು ಎದೋಮಿನ ಶೂರರ ಎದೆ ಹೆರುವ ಹೆಂಗಸಿನ ಎದೆಯಂತೆ ಅದರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

22 ಯೆಹೋವನು ತಾನು ಎರಗಬೇಕಾದ ಪ್ರಾಣಿಯ ಮೇಲೆ ಹಾರಾಡುವ ರಣಹದ್ದಿನಂತೆ ಇರುವನು. ಆತನು ಬೊಚ್ರ ನಗರದ ಮೇಲೆ ತನ್ನ ರೆಕ್ಕೆಗಳನ್ನು ಹರಡುವ ರಣಹದ್ದಿನಂತಿದ್ದಾನೆ. ಆ ಸಮಯದಲ್ಲಿ ಎದೋಮಿನ ಸೈನಿಕರು ಭಯಪಡುವರು. ಪ್ರಸವವೇದನೆಪಡುವ ಹೆಂಗಸಿನಂತೆ ಅವರು ಭಯದಿಂದ ಗೋಳಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

22 ಇಗೋ, ಅವನು ಹದ್ದಿನಂತೆ ಹಾರುವನು; ಬೊಚ್ರದ ಮೇಲೆ ತನ್ನ ರೆಕ್ಕೆಗಳನ್ನು ಚಾಚುವನು; ಎದೋಮಿನ ಪರಾಕ್ರಮಶಾಲಿಗಳು ಹೃದಯವು ಆ ದಿವಸದಲ್ಲಿ ಪ್ರಸವ ವೇದನೆಯುಳ್ಳ ಸ್ತ್ರೀಯ ಹೃದಯದ ಹಾಗೆ ಇರುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:22
21 ತಿಳಿವುಗಳ ಹೋಲಿಕೆ  

ಬಾಯಿಗೆ ತುತೂರಿಯನ್ನು ಹಿಡಿ. ನನ್ನ ಜನರು ನನ್ನ ಒಡಂಬಡಿಕೆಯನ್ನು ಮೀರಿ ನನ್ನ ಧರ್ಮವಿಧಿಗಳಿಗೆ ದ್ರೋಹಮಾಡಿದ್ದರಿಂದ ಶತ್ರುವು ಹದ್ದಿನ ಹಾಗೆ ಯೆಹೋವನಾದ ನನ್ನ ನಿವಾಸದ ಮೇಲೆ ಬರುತ್ತಾನೆ.


ಅವರು ಬೆಚ್ಚಿಬೀಳುವರು, ಯಾತನೆವೇದನೆಗಳು ಅವರನ್ನಾಕ್ರವಿುಸುವವು. ಹೆರುವ ಹೆಂಗಸಿನಂತೆ ಸಂಕಟಪಡುವರು; ಒಬ್ಬರನ್ನೊಬ್ಬರು ನೋಡಿ ವಿಸ್ಮಯಪಡುವರು, ಅವರ ಮುಖಗಳು [ತಲ್ಲಣದಿಂದ] ಬೆಂಕಿಬೆಂಕಿಯಾಗುವವು.


ದಮಸ್ಕವು ಕುಂದಿದೆ, ಓಡಿಹೋಗಲು ಹಿಂದಿರುಗಿದೆ; ಅದಕ್ಕೆ ನಡುಕ ಹಿಡಿದಿದೆ, ಪ್ರಸವವೇದನೆಯಂತಿರುವ ಯಾತನಾವ್ಯಥೆಗಳಿಗೆ ಒಳಗಾಗಿದೆ.


ವಿಚಾರಿಸಿ ನೋಡಿರಿ, ಗಂಡಸು ಪ್ರಸವವೇದನೆ ಪಡುವದುಂಟೇ? ಪ್ರತಿಯೊಬ್ಬನು ಹೆರುವವಳಂತೆ ಸೊಂಟವನ್ನು ಹಿಸಕಿಕೊಳ್ಳುವದು, ಎಲ್ಲಾ ಮುಖಗಳು ಬಿಳಿಚಿಕೊಂಡಿರುವದು, ಇವು ಏಕೆ ನನ್ನ ಕಣ್ಣಿಗೆ ಬೀಳುತ್ತವೆ?


ನಾವು ಅದರ ಸುದ್ದಿಯನ್ನು ಕೇಳಿದೆವು, ನಮ್ಮ ಕೈಗಳು ಜೋಲುಬಿದ್ದವು. ಪ್ರಸವವೇದನೆಯಂತಿರುವ ಯಾತನೆಯು ನಮ್ಮನ್ನು ಹಿಡಿದಿದೆ.


ಇಗೋ, [ಆ ಶತ್ರುವು] ಮೇಘಗಳೋಪಾದಿಯಲ್ಲಿ ಬರುತ್ತಾನೆ, ಅವನ ರಥಗಳು ಬಿರುಗಾಳಿಯಂತಿವೆ, ಅವನ ಅಶ್ವಗಳು ಹದ್ದುಗಳಿಗಿಂತ ವೇಗವಾಗಿವೆ! ನಮ್ಮ ಗತಿಯನ್ನು ಏನು ಹೇಳೋಣ, ಹಾಳಾದೆವಲ್ಲಾ!


ನಿಮಗೆ ತಿಳಿಯದ ಭಾಷೆಯನ್ನಾಡುವ ಒಂದು ಜನಾಂಗವು ರಣಹದ್ದು ಹೇಗೆ ದೂರದಿಂದ ಹಾರಿಬರುವದೋ ಹಾಗೆಯೇ ದೂರದಿಂದ ನಿಮ್ಮ ಮೇಲೆ ಬರುವಂತೆ ಯೆಹೋವನು ಮಾಡುವನು.


ಸಮಾಧಾನವಾಗಿಯೂ ನಿರ್ಭಯವಾಗಿಯೂ ಇರುತ್ತೇವೆಂದು ಜನರು ಹೇಳುತ್ತಿರುವಾಗಲೇ ಅವರ ಮೇಲೆ ನಾಶನವು ಗರ್ಭಿಣಿಗೆ ಪ್ರಸವವೇದನೆ ಬರುವ ಪ್ರಕಾರ ಬರುವದು; ಅವರು ಹೇಗೂ ತಪ್ಪಿಸಿಕೊಳ್ಳಲಾರರು.


ಮೊದಲು ಕಾಣಿಸಿದ ಮೃಗವು ಸಿಂಹದ ಹಾಗಿತ್ತು, ಅದಕ್ಕೆ ಹದ್ದಿನಂತೆ ರೆಕ್ಕೆಗಳಿದ್ದವು; ನಾನು ನೋಡುತ್ತಿರುವಾಗಲೇ ಆ ರೆಕ್ಕೆಗಳು ಕೀಳಲ್ಪಟ್ಟವು; ಅದು ನೆಲದಿಂದ ಎತ್ತಲ್ಪಟ್ಟು ಮನುಷ್ಯನ ಹಾಗೆ ಎರಡು ಕಾಲುಗಳ ಮೇಲೆ ನಿಲ್ಲಿಸಲ್ಪಟ್ಟಿತು, ಅದಕ್ಕೆ ಮನುಷ್ಯನ ಹೃದಯವು ಕೊಡೋಣವಾಯಿತು.


ಲೆಬನೋನಿನಲ್ಲಿ ವಾಸಿಸುವವಳೇ, ದೇವದಾರುಗಳಲ್ಲಿ ಗೂಡುಮಾಡಿಕೊಂಡಿರುವವಳೇ, ಪ್ರಸವವೇದನೆಯಂತಿರುವ ಸಂಕಟವು ನಿನಗೆ ಸಂಭವಿಸುವಾಗ ನಿನ್ನ ಸ್ಥಿತಿಯು ಎಷ್ಟೋ ದುಃಖಕರವಾಗಿರುವದು!


ನಿನ್ನಲ್ಲಿ ಬಳಿಕೆಗೊಳ್ಳುವಂತೆ ನೀನು ಅಭ್ಯಾಸಮಾಡಿಸಿದವರನ್ನು [ಯೆಹೋವನು] ನಿನಗೆ ತಲೆಯಾಗಿ ನೇವಿುಸುವಾಗ ಏನು ಹೇಳುವಿ? ವೇದನೆಯು ನಿನ್ನನ್ನು ಹೆರುವವಳನ್ನೋ ಎಂಬಂತೆ ಹಿಡಿಯುವದಲ್ಲವೆ.


ಚೀಯೋನ್ ನಗರಿಯು ಬೇನೆ ತಿನ್ನುವವಳಂತೆ, ಚೊಚ್ಚಲಹೆರಿಗೆಯ ವೇದನೆಯನ್ನು ಅನುಭವಿಸುವವಳ ಹಾಗೆ ಕೂಗಿಕೊಳ್ಳುವದನ್ನು ನಾನು ಕೇಳಿದ್ದೇನೆ; ಏದುತ್ತಾ ಕೈಚಾಚಿ - ಅಯ್ಯೋ, ನನ್ನ ಗತಿಯನ್ನು ಏನು ಹೇಳಲಿ! ಕೊಲೆಗಾರರಿಂದ ನನ್ನ ಆತ್ಮವು ಉಡುಗುತ್ತದೆ ಎಂದು ಬಡುಕೊಳ್ಳುತ್ತಾಳೆ.


ಹೆರಿಗೆ ಹತ್ತಿರವಾದ ಗರ್ಭಿಣಿಯು ಯಾತನೆಪಡುತ್ತಾ ಬೇನೆಯಿಂದ ಅರಚುವಂತೆ ಯೆಹೋವನೇ, ನಾವು ನಿನ್ನ ಮುಂದೆ ಅರಚಿದ್ದೇವೆ;


ಈ ದರ್ಶನದಿಂದ ನನ್ನ ಸೊಂಟದಲ್ಲಿ ನೋವು ತುಂಬಿದೆ, ಪ್ರಸವವೇದನೆಯಂತಿರುವ ವೇದನೆಯು ನನ್ನನ್ನು ಹಿಡಿದಿದೆ, ಕಿವಿ ಕಿವುಡಾಗುವಷ್ಟು ಯಾತನೆಪಡುತ್ತೇನೆ, ಕಣ್ಣು ಕುರುಡಾಗುವಷ್ಟು ತತ್ತರಗೊಂಡಿದ್ದೇನೆ.


ಪಾತಾಳಪಾಶಗಳು ನನ್ನನ್ನು ಆವರಿಸಿಕೊಂಡವು; ಮರಣಕರವಾದ ಉರುಲುಗಳು ನನ್ನೆದುರಿನಲ್ಲಿದ್ದವು.


ಯಾವವಂದರೆ, ಆಕಾಶದಲ್ಲಿ ಹದ್ದಿನ ಹಾದಿ, ಬಂಡೆಯ ಮೇಲೆ ಸರ್ಪದ ಸರಣಿ, ಸಾಗರದ ನಡುವೆ ಹಡಗಿನ ಮಾರ್ಗ, ಸ್ತ್ರೀಯಲ್ಲಿ ಪುರುಷನ ಪದ್ದತಿ, ಇವೇ.


ಇವು ಪಡುವಲಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವವು, ಜೊತೆಯಾಗಿ ಮೂಡಣದವರನ್ನು ಸೂರೆಗೊಳ್ಳುವವು; ಎದೋವಿುನ ಮತ್ತು ಮೋವಾಬಿನ ಮೇಲೆ ಕೈಮಾಡುವವು; ಅಮ್ಮೋನ್ಯರು ಇವುಗಳಿಗೆ ಅಧೀನರಾಗುವರು.


ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬೈಲಿಗೆ ಬರುವದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ!


ತೇಮಾನೇ, ನಿನ್ನ ಶೂರರು ಧೈರ್ಯಗೆಟ್ಟು ಎಲ್ಲರೂ ಹತರಾಗಿ ಏಸಾವಿನ ಪರ್ವತದೊಳಗಿಂದ ನಿರ್ಮೂಲರಾಗುವರು.


ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು