Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:25 - ಕನ್ನಡ ಸತ್ಯವೇದವು J.V. (BSI)

25 ಅಯ್ಯೋ, ಹೆಸರುವಾಸಿಯ ಪಟ್ಟಣವು, ನನ್ನ ಇಷ್ಟದ ಪುರವು, ಏಕೆ ವಲಸೆಹೋಗಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಅಯ್ಯೋ, ಹೆಸರುವಾಸಿ ಪಟ್ಟಣವು, ನನ್ನ ಇಷ್ಟದ ಪುರವು ಏಕೆ ವಲಸೆಹೋಗಲಿಲ್ಲ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 ಅಕಟಾ, ಹೆಸರುವಾಸಿಯಾದಂಥ ಆ ನನ್ನ ಮೆಚ್ಚುಗೆಯ ನಗರ ವಲಸೆಹೋಗಲಿಲ್ಲವೇಕೆ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 “ದಮಸ್ಕವು ಸಂತೋಷಭರಿತವಾದ ನಗರವಾಗಿದೆ. ಜನರು ಇನ್ನೂ ಆ ‘ಮೋಜಿನ ನಗರವನ್ನು’ ಬಿಟ್ಟಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 ಹೊಗಳಿಕೆಯ ಪಟ್ಟಣವೂ ನನ್ನ ಸಂತೋಷದ ಪಟ್ಟಣವೂ ಬಿಡಲಾಗಿದೆ ಅಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:25
10 ತಿಳಿವುಗಳ ಹೋಲಿಕೆ  

ನಾನು ಈ ಜನರಿಗೆ ಅನುಗ್ರಹಿಸುವ ಎಲ್ಲಾ ಮೇಲುಗಳ ಸುದ್ದಿಯನ್ನು ಕೇಳಿ ನಾನು ಈ ಪಟ್ಟಣಕ್ಕೆ ಉಂಟುಮಾಡುವ ಸುಖಸಮಾಧಾನಗಳನ್ನು ನೋಡಿ ಹೆದರಿ ನಡುಗುವ ಸಕಲ ಭೂರಾಜ್ಯಗಳ ಮುಂದೆ ಈ ಪಟ್ಟಣವು ನನ್ನ ಕೀರ್ತಿಯೂ ಮಹಿಮೆಯೂ ಆನಂದದ ಬಿರುದೂ ಆಗುವದು.


ಆಹಾ, ಶೇಷಕ್ ಶತ್ರುವಶವಾಯಿತು, ಲೋಕಪ್ರಸಿದ್ಧವಾದ ಪಟ್ಟಣವು ಹಿಡಿಯಲ್ಪಟ್ಟಿದೆ,


ಅಯ್ಯೋ, ಅಯ್ಯೋ, ಮಹಾಪಟ್ಟಣವೇ, ಬಾಬೆಲೇ, ಬಲಿಷ್ಠವಾದ ನಗರಿಯೇ, ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ಗಳಿಗೆಯಲ್ಲಿ ಬಂತಲ್ಲಾ ಎಂದು ಹೇಳುವರು.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಆಹಾ, ಭಂಗವಾಯಿತು! ಕಿರಿಚಿಕೊಳ್ಳುತ್ತಾರಲ್ಲಾ! ಓಹೋ, ಮೋವಾಬು ನಾಚಿಕೆಯಿಂದ ಬೆನ್ನು ತೋರಿಸಿದೆ! ಅದರ ನೆರೆಹೊರೆಯವರು ಅಣಕಿಸುವದಕ್ಕೂ ಬೆಚ್ಚಿಬೀಳುವದಕ್ಕೂ ಆಸ್ಪದವಾಗಿದೆ.


ಮೋವಾಬಿನ ಕೀರ್ತಿಯು ಮಾಯವಾಯಿತು; ಶತ್ರುಗಳು ಹೆಷ್ಬೋನಿನಲ್ಲಿ ದೇಶಕ್ಕೆ ಕೇಡನ್ನು ಕಲ್ಪಿಸಿ - ಮೋವಾಬು ಇನ್ನು ಜನಾಂಗವೆನಿಸಿಕೊಳ್ಳದಂತೆ ಅದನ್ನು ನಿರ್ಮೂಲಮಾಡೋಣ ಬನ್ನಿರಿ ಎಂದು ಆಲೋಚಿಸಿಕೊಂಡಿದ್ದಾರೆ. ಮದ್ಮೆನೇ, ನೀನು ಸಹ ಸುಮ್ಮನಾಗುವಿ; ಖಡ್ಗವು ನಿನ್ನನ್ನು ಹಿಂದಟ್ಟುವದು.


ಪೂರ್ವದಲ್ಲಿ ನಿನಗಿದ್ದಂಥ ನ್ಯಾಯಾಧಿಪತಿಗಳನ್ನೂ ಮಂತ್ರಾಲೋಚಕರನ್ನೂ ಪುನಃ ಒದಗಿಸಿಕೊಡುವೆನು; ಆಮೇಲೆ ನೀನು ಧರ್ಮಪುರಿ ಎಂತಲೂ ಸುವ್ರತನಗರಿ ಎಂತಲೂ ಅನ್ನಿಸಿಕೊಳ್ಳುವಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು