Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 49:28 - ಕನ್ನಡ ಸತ್ಯವೇದವು J.V. (BSI)

28 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. ಏಳಿರಿ, ಕೇದಾರಿಗೆ ಹೋಗಿ ಮೂಡಣ ದೇಶದವರನ್ನು ಹಾಳುಮಾಡಿರಿ ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಹೊಡೆದ ಕೇದಾರನ್ನೂ ಹಾಚೋರಿನ ರಾಷ್ಟ್ರಗಳನ್ನೂ ಕುರಿತದ್ದು. “ಏಳಿರಿ, ಕೇದಾರಿಗೆ ಹೋಗಿ ಪೂರ್ವ ದಿಕ್ಕಿನ ದೇಶದವರನ್ನು ಹಾಳುಮಾಡಿರಿ” ಎಂದು ಯೆಹೋವನು ಶತ್ರುಗಳಿಗೆ ಅಪ್ಪಣೆಮಾಡಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ಸೋಲಿಸಿದ ಕೇದಾರನ್ನು ಮತ್ತು ಹಾಜೋರಿನ ರಾಷ್ಟ್ರಗಳನ್ನು ಕುರಿತ ಹೇಳಿಕೆ: “ಏಳಿ, ಕೇದಾರಿಗೆ ಹೋಗಿ, ಪೂರ್ವ ದೇಶದವರನ್ನು ಹಾಳುಮಾಡಿ,” ಎಂದು ಸರ್ವೇಶ್ವರ ಸ್ವಾಮಿ ಶತ್ರುಗಳಿಗೆ ಆಜ್ಞೆಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಈ ಸಂದೇಶವು ಕೇದಾರ್ ಕುಲವನ್ನೂ ಹಾಚೋರಿನ ಅಧಿಪತಿಗಳನ್ನೂ ಕುರಿತದ್ದು. ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು ಅವರನ್ನು ಸೋಲಿಸಿದನು. ಯೆಹೋವನು ಹೀಗೆನ್ನುತ್ತಾನೆ: “ಹೋಗಿ ಕೇದಾರ ಕುಲದವರ ಮೇಲೆ ಧಾಳಿ ಮಾಡಿರಿ. ಪೂರ್ವದಿಕ್ಕಿನ ಜನರನ್ನು ನಾಶಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಬಾಬಿಲೋನಿನ ಅರಸನಾದ ನೆಬೂಕದ್ನೆಚ್ಚರನು ದಾಳಿಮಾಡಿದ ಕೇದಾರ್ ಹಾಗೂ ಹಾಚೋರ್ ರಾಜ್ಯಗಳನ್ನು ಕುರಿತದ್ದು: ಯೆಹೋವ ದೇವರು ಹೀಗೆ ಹೇಳುತ್ತಾರೆ, “ಏಳಿರಿ, ಕೇದಾರಿನ ಬಳಿಗೆ ಏರಿ ಹೋಗಿರಿ. ಪೂರ್ವದಿಕ್ಕಿನ ಮನುಷ್ಯರನ್ನು ಸುಲಿದುಕೊಳ್ಳಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 49:28
20 ತಿಳಿವುಗಳ ಹೋಲಿಕೆ  

ಇವು ಪಡುವಲಲ್ಲಿ ಫಿಲಿಷ್ಟಿಯರ ಭುಜದ ಮೇಲೆ ಎರಗುವವು, ಜೊತೆಯಾಗಿ ಮೂಡಣದವರನ್ನು ಸೂರೆಗೊಳ್ಳುವವು; ಎದೋವಿುನ ಮತ್ತು ಮೋವಾಬಿನ ಮೇಲೆ ಕೈಮಾಡುವವು; ಅಮ್ಮೋನ್ಯರು ಇವುಗಳಿಗೆ ಅಧೀನರಾಗುವರು.


ಇವರು ಬೀಜ ಬಿತ್ತಿದ ತರುವಾಯ ವಿುದ್ಯಾನ್ಯರೂ ಅಮಾಲೇಕ್ಯರೂ ಮೂಡಣ ದೇಶದವರೂ ಇವರಿಗೆ ವಿರೋಧವಾಗಿ ದಂಡೆತ್ತಿ ಬಂದು ಇಳುಕೊಂಡು


ಇಷ್ಮಾಯೇಲನ ಮಕ್ಕಳಿಗೂ ಇವರಿಂದ ಹುಟ್ಟಿದ ಕುಲಗಳಿಗೂ ಇರುವ ಹೆಸರುಗಳು ಯಾವವಂದರೆ - ಮೊದಲು ಹುಟ್ಟಿದವನು ನೆಬಾಯೋತ್; ಆಮೇಲೆ ಹುಟ್ಟಿದವರು ಕೇದಾರ್, ಅದ್ಬಯೇಲ್,


ಅರಾಬ್ಯರೂ ಕೇದಾರಿನ ಪ್ರಧಾನರೂ ನಿನ್ನ ಕೈಕೆಳಗಣ ವರ್ತಕರು; ಕುರಿ ಟಗರು ಹೋತಗಳನ್ನು ನಿನಗಾಗಿ ಸಾಗಿಸಿಕೊಂಡು ಬಂದರು.


ಯೆಹೋವನಿಂದ ಬಂದ ಸಮಾಚಾರವನ್ನು ಕೇಳಿದ್ದೇನೆ; ದೂತನ ಮೂಲಕ ಜನಾಂಗಗಳಿಗೆ ಹೀಗೆ ಹೇಳಿ ಕಳುಹಿಸಿದ್ದಾನೆ - ನೀವು ಕೂಡಿಕೊಂಡು ಯುದ್ಧಕ್ಕೆ ಹೊರಟು ಎದೋವಿುನ ಮೇಲೆ ಬೀಳಿರಿ.


ಕಿತ್ತೀಮ್ ದ್ವೀಪಗಳಿಗೆ ಹೋಗಿ ನೋಡಿರಿ, ಕೇದಾರಿಗೆ ಕಳುಹಿಸಿ ವಿಚಾರಮಾಡಿರಿ; ಇಂಥಾ ಕಾರ್ಯವು ಎಲ್ಲಿಯಾದರೂ ನಡೆಯಿತೇ ಎಂದು ಚೆನ್ನಾಗಿ ಆಲೋಚಿಸಿರಿ.


ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು. ಇದು ಯೆಹೋವನ ನುಡಿ.


ಅರಣ್ಯವೂ ಅಲ್ಲಿನ ಊರುಗಳೂ ಕೇದಾರಿನವರ ಗ್ರಾಮಗಳೂ ಆರ್ಭಟಿಸಲಿ, ಸೆಲಪಟ್ಟಣದವರು ಹರ್ಷಧ್ವನಿಗೈದು ಪರ್ವತಾಗ್ರಗಳಲ್ಲಿ ಕೇಕೆ ಹಾಕಲಿ.


ಅರಬಿಯ ವಿಷಯವಾದ ದೈವೋಕ್ತಿ. ಸಾರ್ಥವಾಹರಾದ ದೇದಾನ್ಯರೇ, ಮರುಭೂವಿುಯ ಪೊದೆಗಳಲ್ಲಿ ಇಳಿದುಕೊಳ್ಳಿರಿ.


ಯೆರೂಸಲೇವಿುನ ನಾರಿಯರೇ, ನಾನು ಕೇದಾರಿನ ಗುಡಾರಗಳಂತೆ ಕಪ್ಪಾಗಿದ್ದರೂ ಸೊಲೊಮೋನನ ಪರದೆಗಳಂತೆ ಚಂದವುಳ್ಳವಳು.


ಅವನಿಗೆ ಏಳು ಸಾವಿರ ಕುರಿಗಳೂ ಮೂರು ಸಾವಿರ ಒಂಟೆಗಳೂ ಐನೂರು ಜೋಡಿ ಎತ್ತುಗಳೂ ಐನೂರು ಹೆಣ್ಣು ಕತ್ತೆಗಳೂ ಅನೇಕಾನೇಕ ಸೇವಕರೂ ಇದ್ದದರಿಂದ ಅವನು ಮೂಡಣ ದೇಶದವರಲ್ಲೆಲ್ಲಾ ಹೆಚ್ಚು ಸ್ವಾಸ್ತ್ಯವುಳ್ಳವನಾಗಿದ್ದನು.


ಇಷ್ಮಾಯೇಲ್ಯರ ವಂಶಾವಳಿ - ಇಷ್ಮಾಯೇಲನಿಗೆ ಮೊದಲು ಹುಟ್ಟಿದವನು ನೆಬಾಯೋತ್; ಆಮೇಲೆ ಹುಟ್ಟಿದವರು - ಕೇದಾರ್, ಅದ್ಬೆಯೇಲ್,


ತನ್ನ ಉಪಪತ್ನಿಯರ ಮಕ್ಕಳಿಗೆ ಕೆಲವು ಸೊತ್ತುಗಳನ್ನು ದಾನಮಾಡಿ ತಾನು ಇನ್ನೂ ಜೀವದಿಂದಿರುವಾಗ ಅವರನ್ನು ತನ್ನ ಮಗನಾದ ಇಸಾಕನ ಬಳಿಯಿಂದ ಪೂರ್ವದಿಕ್ಕಿನಲ್ಲಿರುವ ಕೆದೆಮ್ ದೇಶಕ್ಕೆ ಕಳುಹಿಸಿದನು.


ಅಯ್ಯೋ, ನಾನು ಮೇಷೆಕಿನವರಲ್ಲಿ ತಂಗಬೇಕಲ್ಲಾ! ಕೇದಾರಿನವರ ಪಾಳೆಯಗಳಲ್ಲಿ ವಾಸಿಸಬೇಕಾಯಿತಲ್ಲಾ!


ಸಮುದ್ರದ ಆಚಿನ ಕರಾವಳಿಯ ಅರಸರು, ದೆದಾನ್ಯರು, ತೇಮಾದೇಶದವರು, ಬೂಜ್‍ದೇಶದವರು, ಚಂಡಿಕೆಬಿಟ್ಟುಕೊಂಡಿರುವವರೆಲ್ಲರು,


ಅರಬಿಯ ಎಲ್ಲಾ ಅರಸರು, ಅರಣ್ಯವಾಸಿಗಳಾದ ವಿುಶ್ರಜಾತಿಯವರ ಎಲ್ಲಾ ಅರಸರು,


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು