ಯೆರೆಮೀಯ 49:33 - ಕನ್ನಡ ಸತ್ಯವೇದವು J.V. (BSI)33 ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಆಗ ಹಾಚೋರು ಸದಾ ಹಾಳುಬಿದ್ದು ನರಿಗಳಿಗೆ ಹಕ್ಕೆಯಾಗುವುದು; ಅಲ್ಲಿ ಯಾರೂ ವಾಸಿಸರು, ಯಾವ ನರಮನುಷ್ಯನೂ ಇಳುಕೊಳ್ಳನು, ಇದು ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಆಗ ಹಾಜೋರು ಸದಾ ಹಾಳುಬಿದ್ದು ಮರಿಗಳಿಗೆ ಬೀಡಾಗುವುದು. ಅಲ್ಲಿ ಯಾರೂ ವಾಸಿಸರು, ಯಾವ ನರಪ್ರಾಣಿಯೂ ತಂಗದು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 “ಹಾಚೋರ್ ಪ್ರದೇಶವು ಕಾಡುನಾಯಿಗಳ ನಿವಾಸಸ್ಥಾನವಾಗುವುದು. ಅದು ಶಾಶ್ವತವಾಗಿ ಒಂದು ಬರಿದಾದ ಮರುಭೂಮಿಯಾಗುವುದು. ಅಲ್ಲಿ ಯಾರೂ ವಾಸಮಾಡಲಾರರು. ಆ ಸ್ಥಳದಲ್ಲಿ ಯಾವ ಮನುಷ್ಯನೂ ವಾಸಮಾಡುವದಿಲ್ಲ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಹಾಚೋರು ನರಿಗಳ ನಿವಾಸವೂ, ಎಂದೆಂದಿಗೂ ಹಾಳಾದ ಸ್ಥಳವೂ ಆಗುವುದು. ಅಲ್ಲಿ ಯಾವನಾದರೂ ವಾಸಮಾಡುವುದಿಲ್ಲ. ಯಾವ ನರಪುತ್ರನಾದರೂ ಅಲ್ಲಿ ತಂಗುವುದಿಲ್ಲ. ಅಧ್ಯಾಯವನ್ನು ನೋಡಿ |
ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.