Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:14 - ಕನ್ನಡ ಸತ್ಯವೇದವು J.V. (BSI)

14 ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಂತೆನ್ನುತ್ತಾನೆ - ನೀವು ಹೀಗೆ ಅಂದುಕೊಂಡದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ತಿಂದುಬಿಡುವದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

14 ಹೀಗಿರಲು ಸೇನಾಧೀಶ್ವರನಾದ ಯೆಹೋವನೆಂಬ ದೇವರು, “ನೀವು ಹೀಗೆ ಅಂದುಕೊಂಡಿದ್ದರಿಂದ ಆಹಾ, ನಾನು ಪ್ರವಾದಿಯ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಯೂ, ಈ ಜನರನ್ನು ಸೌದೆಯನ್ನಾಗಿಯೂ ಮಾಡುವೆನು, ಅದು ಅವರನ್ನು ದಹಿಸಿಬಿಡುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

14 ಆದುದರಿಂದ ಸೇನಾಧೀಶ್ವರ ಸರ್ವೇಶ್ವರ ಆದ ದೇವರು ಯೆರೆಮೀಯನಿಗೆ ಹೀಗೆಂದರು : “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು; ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು; ಆ ಬೆಂಕಿ ಅವರನ್ನು ಸುಟ್ಟುಹಾಕುವುದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

14 ಯೆಹೋವನೇ, ಸರ್ವಶಕ್ತನಾದ ದೇವರು. ಆತನು ಹೀಗೆನ್ನುತ್ತಾನೆ: “ನಾನು ಶಿಕ್ಷಿಸುವದಿಲ್ಲವೆಂದು ಆ ಜನರು ಹೇಳಿದರು. ಆದ್ದರಿಂದ ಯೆರೆಮೀಯನೇ, ನಾನು ನಿನಗೆ ಹೇಳುವ ಮಾತುಗಳು ಬೆಂಕಿಯಂತೆ ಇರುವವು. ಅವರು ಸೌದೆಯಂತೆ ಆಗುವರು. ಬೆಂಕಿಯು ಎಲ್ಲಾ ಸೌದೆಯನ್ನು ಸುಟ್ಟುಬಿಡುವದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

14 ಆದ್ದರಿಂದ ಸೇನಾಧೀಶ್ವರ ಯೆಹೋವ ದೇವರು ಯೆರೆಮೀಯನಿಗೆ ಹೀಗೆನ್ನುತ್ತಾರೆ: “ಇಗೋ, ಅವರು ಹೀಗೆ ಮಾತಾಡಿದ್ದರಿಂದ ನಿನ್ನ ಬಾಯಲ್ಲಿನ ನನ್ನ ಮಾತುಗಳನ್ನು ಬೆಂಕಿಯನ್ನಾಗಿಸುವೆನು, ಆ ಜನರನ್ನು ಅದಕ್ಕೆ ಸೌದೆಯನ್ನಾಗಿಸುವೆನು. ಆ ಬೆಂಕಿ ಅವರನ್ನು ಸುಟ್ಟುಹಾಕುವುದು.”

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:14
8 ತಿಳಿವುಗಳ ಹೋಲಿಕೆ  

ಹೊಟ್ಟೆಲ್ಲಿ? ಕಾಳೆಲ್ಲಿ? ನನ್ನ ವಾಕ್ಯವು ಬೆಂಕಿಗೂ ಬಂಡೆಯನ್ನು ಒಡೆದುಬಿಡುವ ಚಮಟಿಗೆಗೂ ಸಮಾನವಾಗಿದೆಯಲ್ಲಾ. ಯೆಹೋವನೇ ಇದನ್ನು ನುಡಿದಿದ್ದಾನೆ.


ಆಗ ಯೆಹೋವನು ಕೈಚಾಚಿ ನನ್ನ ಬಾಯನ್ನು ಮುಟ್ಟಿ - ಇಗೋ, ನಿನ್ನ ಬಾಯಲ್ಲಿ ನನ್ನ ಮಾತುಗಳನ್ನು ಇಟ್ಟಿದ್ದೇನೆ;


ಆದಕಾರಣ ನಾನು ನಿಮ್ಮ ಜನರನ್ನು ಪ್ರವಾದಿಗಳ ಮೂಲಕ ಹತಿಸಿದ್ದೇನೆ, ನನ್ನ ಬಾಯಿ ಮಾತುಗಳಿಂದ ಸಂಹರಿಸಿದ್ದೇನೆ; ನನ್ನ ನ್ಯಾಯದಂಡನೆಯು ವಿುಂಚಿನಂತೆ ಹೊರಡುವದು.


ಆದರೆ ನನ್ನ ಸೇವಕರಾದ ಪ್ರವಾದಿಗಳಿಗೆ ಆಜ್ಞಾಪಿಸಿದ ನನ್ನ ವಾಕ್ಯಗಳೂ ವಿಧಿಗಳೂ ನಿಮ್ಮ ಪಿತೃಗಳನ್ನು ಹಿಂದಟ್ಟಿ ಹಿಡಿದು ನಿತ್ಯವಾಗಿವೆಯಷ್ಟೆ; ಅವರು ತಿರುಗಿಕೊಂಡು - ಸೇನಾಧೀಶ್ವರ ಯೆಹೋವನು ನಮ್ಮ ದುರ್ಮಾರ್ಗ ದುಷ್ಕೃತ್ಯಗಳಿಗೆ ತಕ್ಕ ಹಾಗೆ ನಮಗೆ ಏನು ಮಾಡಬೇಕೆಂದು ಸಂಕಲ್ಪಿಸಿದನೋ ಅದನ್ನು ನಮಗೆ ಮಾಡಿದ್ದಾನಲ್ಲಾ ಅಂದುಕೊಂಡರು.


ಆದಕಾರಣ ಶಾಪವು ಲೋಕವನ್ನು ನುಂಗಿಬಿಟ್ಟಿದೆ, ಅಲ್ಲಿನವರು ದಂಡನೆಗೆ ಒಳಗಾಗಿದ್ದಾರೆ; ಭೂನಿವಾಸಿಗಳು ಸುಟ್ಟುಹೋಗಿ ಕೆಲವರು ಮಾತ್ರ ಉಳಿದಿದ್ದಾರೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು