Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:17 - ಕನ್ನಡ ಸತ್ಯವೇದವು J.V. (BSI)

17 ಇವರು ನಿನ್ನ ಬೆಳೆಯನ್ನೂ ನಿನ್ನ ಆಹಾರವನ್ನೂ ನಿನ್ನ ಗಂಡು ಹೆಣ್ಣುಮಕ್ಕಳನ್ನೂ ನಿನ್ನ ದನಕುರಿಗಳನ್ನೂ ನಿನ್ನ ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು; ನಿನ್ನ ಭರವಸದ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಇವರು ನಿನ್ನ ಬೆಳೆಯನ್ನೂ, ನಿನ್ನ ಆಹಾರವನ್ನೂ, ನಿನ್ನ ಗಂಡು ಮತ್ತು ಹೆಣ್ಣುಮಕ್ಕಳನ್ನೂ, ನಿನ್ನ ದನ ಮತ್ತು ಕುರಿಗಳನ್ನೂ, ನಿನ್ನ ದ್ರಾಕ್ಷಾಲತೆಗಳನ್ನೂ ಹಾಗೂ ಅಂಜೂರದ ಗಿಡಗಳನ್ನೂ ತಿಂದುಬಿಡುವರು. ನಿನ್ನ ಭರವಸೆಯ ಕೋಟೆಕೊತ್ತಲುಗಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಅವರು ನಿನ್ನ ದವಸಧಾನ್ಯಗಳನ್ನು ತಿಂದುಬಿಡುವರು. ನಿನ್ನ ಗಂಡುಹೆಣ್ಣುಮಕ್ಕಳನ್ನು ಕೊಲ್ಲುವರು. ನಿನ್ನ ದನಕುರಿಗಳನ್ನು ಕಬಳಿಸಿಬಿಡುವರು. ದ್ರಾಕ್ಷಾಲತೆಗಳನ್ನೂ ಅಂಜೂರದ ಗಿಡಗಳನ್ನೂ ಹಾಳುಮಾಡುವರು. ನೀನು ನಂಬಿಕೊಂಡಿರುವ ಕೋಟೆಕೊತ್ತಲಗಳುಳ್ಳ ಪಟ್ಟಣಗಳನ್ನು ಅಸ್ತ್ರಗಳಿಂದ ಹಾಳುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆ ಸೈನಿಕರು ನೀವು ಬೆಳೆದ ಬೆಳೆಯನ್ನು ತಿಂದುಬಿಡುವರು. ಅವರು ನಿಮ್ಮೆಲ್ಲ ಆಹಾರವನ್ನು ತಿಂದುಬಿಡುವರು. ಅವರು ನಿಮ್ಮ ಗಂಡುಮಕ್ಕಳನ್ನೂ ಹೆಣ್ಣುಮಕ್ಕಳನ್ನೂ ತಿಂದುಬಿಡುವರು (ನಾಶಮಾಡುವರು). ಅವರು ನಿಮ್ಮ ದನಕರುಗಳ ಹಿಂಡುಗಳನ್ನು, ಕುರಿಗಳ ಮಂದೆಗಳನ್ನು ತಿಂದುಬಿಡುವರು. ಅವರು ನಿಮ್ಮ ದ್ರಾಕ್ಷಿಗಳನ್ನೂ ನಿಮ್ಮ ಅಂಜೂರಗಳನ್ನೂ ತಿಂದುಬಿಡುವರು. ಅವರು ತಮ್ಮ ಖಡ್ಗಗಳಿಂದ ನಿಮ್ಮ ಭದ್ರವಾದ ನಗರಗಳನ್ನು ನಾಶಮಾಡುವರು. ನೀವು ನಂಬಿಕೊಂಡಿದ್ದ ನಿಮ್ಮ ಭದ್ರವಾದ ನಗರಗಳನ್ನು ಅವರು ಹಾಳುಮಾಡುತ್ತಾರೆ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 ನಿನ್ನ ಪುತ್ರರು, ನಿನ್ನ ಪುತ್ರಿಯರು ನಿನ್ನ ಪೈರನ್ನೂ, ನಿನ್ನ ರೊಟ್ಟಿಯನ್ನೂ ನುಂಗಿಬಿಡುವರು. ನಿನ್ನ ಕುರಿಗಳನ್ನೂ, ನಿನ್ನ ದನಗಳನ್ನೂ ನುಂಗಿಬಿಡುವರು. ನಿನ್ನ ದ್ರಾಕ್ಷಿ ಲತೆಗಳನ್ನೂ, ಅಂಜೂರದ ಗಿಡಗಳನ್ನೂ ನುಂಗಿಬಿಡುವರು. ನೀನು ನಂಬಿಕೊಂಡಿದ್ದ ಕೋಟೆಯುಳ್ಳ ಪಟ್ಟಣಗಳನ್ನು ಖಡ್ಗದಿಂದ ಹಾಳುಮಾಡುವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:17
25 ತಿಳಿವುಗಳ ಹೋಲಿಕೆ  

ನಿಮಗೆ ಗುರುತೇ ಇಲ್ಲದ ಜನಾಂಗದವರು ಬಂದು ನಿಮ್ಮ ದೇಶದ ಬೆಳೆಯನ್ನೂ ನಿಮ್ಮ ಕಷ್ಟಾರ್ಜಿತವನ್ನೂ ತಿಂದುಬಿಡುವರು.


ನಾನು ನಿಮಗೆ ಮಾಡುವದೇನಂದರೆ - ಕ್ಷಯರೋಗ, ಚಳಿಜ್ವರ ಮುಂತಾದ ಭಯಂಕರ ವ್ಯಾಧಿಗಳನ್ನು ನಿಮ್ಮಲ್ಲಿ ಇರುವಂತೆ ಮಾಡುವೆನು; ಇವುಗಳ ದೆಸೆಯಿಂದ ನೀವು ಕಂಗೆಟ್ಟವರಾಗಿಯೂ ಮನಗುಂದಿದವರಾಗಿಯೂ ಇರುವಿರಿ. ನೀವು ಬೀಜ ಬಿತ್ತಿದಾಗ ಅದರ ಫಲವು ನಿಮಗೆ ದೊರೆಯದೆ ಹೋಗುವದು; ಶತ್ರುಗಳು ಬಂದು ಅದನ್ನು ತಿಂದುಬಿಡುವರು.


[ಯೆಹೋವನು ಇಂತೆನ್ನುತ್ತಾನೆ - ] ನಾನು ಜನಾಂಗಗಳನ್ನು ಧ್ವಂಸಪಡಿಸಿದ್ದೇನೆ, ಅವುಗಳ ಕೊತ್ತಲಗಳು ಪಾಳುಬಿದ್ದವು, ಅವುಗಳ ಬೀದಿಗಳನ್ನು ಹಾಳುಮಾಡಿದ್ದೇನೆ, ಯಾರೂ ಹಾದುಹೋಗರು; ಅವುಗಳ ಪಟ್ಟಣಗಳು ನಾಶವಾದವು, ಜನರೇ ಇಲ್ಲ, ನಿರ್ನಿವಾಸವಾಗಿವೆ.


ಇಸ್ರಾಯೇಲು ತನ್ನ ಸೃಷ್ಟಿಕರ್ತನನ್ನು ಮರೆತು ಅರಮನೆಗಳನ್ನು ಕಟ್ಟಿಕೊಂಡಿದೆ; ಯೆಹೂದವು ಕೋಟೆಕೊತ್ತಲಗಳ ಪಟ್ಟಣಗಳನ್ನು ಮಾಡಿಕೊಂಡಿದೆ; ಆಹಾ, ನಾನು ಆ ಪಟ್ಟಣಗಳ ಮೇಲೆ ಬೆಂಕಿಯನ್ನು ಕಳುಹಿಸುವೆನು, ಅದು ಆ ಸೌಧಗಳನ್ನು ನುಂಗಿಬಿಡುವದು.


ಆದಕಾರಣ ಇಸ್ರಾಯೇಲಿನ ಪರ್ವತಗಳೇ, ಕರ್ತನಾದ ಯೆಹೋವನ ವಾಕ್ಯಗಳನ್ನು ಕೇಳಿರಿ - ಬೆಟ್ಟಗುಡ್ಡ ತೊರೆತಗ್ಗುಗಳಿಗೂ ಕಾಡಾದ ಹಾಳುಪ್ರದೇಶಗಳಿಗೂ ಸುತ್ತಣ ಜನಾಂಗಗಳಲ್ಲಿ ಉಳಿದವರು ಕೊಳ್ಳೆಹೊಡೆದು ಅಣಕಿಸುವ ಹಾಳು ಪಟ್ಟಣಗಳಿಗೂ ಯೆಹೋವಕರ್ತನು ಹೀಗೆ ನುಡಿಯುತ್ತಾನೆ -


ಕರ್ತನು ಕನಿಕರಪಡದೆ ಯಾಕೋಬಿನ ಗೋಮಾಳಗಳನ್ನು ನಾಶಪಡಿಸಿ ಯೆಹೂದದ ಕೋಟೆಗಳನ್ನು ರೌದ್ರದಿಂದ ಕೆಡವಿ ನೆಲಸಮಮಾಡಿ ರಾಜ್ಯವನ್ನೂ ಅಲ್ಲಿನ ಸರದಾರರನ್ನೂ ನೀಚಸ್ಥಿತಿಗೆ ತಂದಿದ್ದಾನೆ.


ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು.


ಕಂಡಕಂಡವರೆಲ್ಲರೂ ಅವರನ್ನು ನುಂಗಿಬಿಟ್ಟಿದ್ದಾರೆ; ಅವರ ವಿರೋಧಿಗಳು - ನಾವು ಅವರನ್ನು ನುಂಗಿದ್ದು ದೋಷವಲ್ಲ, ಅವರು ನ್ಯಾಯನಿವಾಸವೆನಿಸಿಕೊಂಡ ಯೆಹೋವನಿಗೆ, ಹೌದು, ತಮ್ಮ ಪಿತೃಗಳ ನಿರೀಕ್ಷೆಯಾದ ಯೆಹೋವನಿಗೆ ಪಾಪಮಾಡಿದರಲ್ಲಾ ಅಂದುಕೊಂಡರು.


ವೈರಿಯ ಕುದುರೆಗಳ ಬುಸುಗಾಟವು ದಾನಿನಿಂದ ಕೇಳಬರುತ್ತದೆ; ತುರಂಗಗಳ ಕೆನೆತದ ಶಬ್ದಕ್ಕೆ ದೇಶವೆಲ್ಲಾ ಕಂಪಿಸುತ್ತದೆ; ಶತ್ರುಗಳು ಬಂದರು, ಸೀಮೆಯನ್ನೂ ಅದರಲ್ಲಿರುವ ಸಮಸ್ತವನ್ನೂ ಪಟ್ಟಣವನ್ನೂ ಪಟ್ಟಣದ ನಿವಾಸಿಗಳನ್ನೂ ನುಂಗಿಬಿಟ್ಟರು.


ನಾನು ನೋಡಲಾಗಿ ಫಲವತ್ತಾದ ಭೂವಿುಯು ಕಾಡಾಗಿತ್ತು. ಅಕಟಾ! ಅಲ್ಲಿನ ಊರುಗಳೆಲ್ಲಾ ರೋಷಾಗ್ನಿಯುಕ್ತನಾದ ಯೆಹೋವನ ಪ್ರತ್ಯಕ್ಷತೆಯಿಂದ ಬಿದ್ದು ಹೋಗಿದ್ದವು.


ಜನಾಂಗಘಾತುಕವಾದ ಒಂದು ಸಿಂಹವು ತನ್ನ ಪೊದೆಯೊಳಗಿಂದ ಎದ್ದಿದೆ; ಹೊರಟಿದೆ, ಸ್ಥಳದಿಂದ ತೆರಳಿದೆ; ನಿನ್ನ ದೇಶವನ್ನು ಹಾಳುಮಾಡುವದು, ನಿನ್ನ ಪಟ್ಟಣಗಳು ಪಾಳುಬಿದ್ದು ನಿರ್ನಿವಾಸಿಗಳಾಗುವವು.


ಇಗೋ, ನಾನು ಬಡಗಣ ರಾಜ್ಯಗಳ ಜನಾಂಗಗಳನ್ನೆಲ್ಲಾ ಕರೆಯುವೆನು; ಅವರು ಬಂದು ಯೆರೂಸಲೇವಿುನ ಊರು ಬಾಗಲುಗಳ ಎದುರಿನಲ್ಲಿಯೂ ಅದರ ಎಲ್ಲಾ ಪೌಳಿಗೋಡೆಗಳ ಸುತ್ತಲೂ ಯೆಹೂದದ ಸಕಲ ಪಟ್ಟಣಗಳ ಮುಂದೆಯೂ ತಮ್ಮ ತಮ್ಮ ನ್ಯಾಯಾಸನಗಳನ್ನು ಹಾಕಿಕೊಳ್ಳುವರು.


ಒಬ್ಬನು ಕಟ್ಟಿದ ಮನೆಯಲ್ಲಿ ಬೇರೊಬ್ಬನು ವಾಸಿಸನು; ಒಬ್ಬನು ಮಾಡಿದ ತೋಟದ ಫಲವು ಇನ್ನೊಬ್ಬನಿಗೆ ವಶವಾಗದು; ನನ್ನ ಜನರ ಆಯುಸ್ಸು ವೃಕ್ಷದ ಆಯುಸ್ಸಿನಂತಿರುವದು; ನನ್ನ ಆಪ್ತರು ತಮ್ಮ ಕೈಕೆಲಸದ ಆದಾಯವನ್ನು ಪೂರಾ ಅನುಭವಿಸುವರು.


ನಿನ್ನ ಬೆಳೆಯನ್ನು ಕೊಯ್ದು ಕುಪ್ಪೆ ಹಾಕಿದವರೇ ಅದನ್ನು ಉಂಡು ಯೆಹೋವನನ್ನು ಸ್ತುತಿಸುವರು. ನಿನ್ನ ದ್ರಾಕ್ಷೆಯನ್ನು ಕಿತ್ತು ತಂದವರೇ ಅದರ ರಸವನ್ನು ನನ್ನ ಪವಿತ್ರಾಲಯದ ಪ್ರಾಕಾರಗಳಲ್ಲಿ ಕುಡಿಯುವರು ಎಂದು ಹೇಳಿದ್ದಾನೆ.


ಯೆಹೋವನು ತನ್ನ ಬಲಗೈ ಮೇಲೆ, ತನ್ನ ಭುಜಬಲದ ಮೇಲೆ, ಆಣೆಯಿಟ್ಟು - ನಿನ್ನ ದವಸವನ್ನು ನಿನ್ನ ಶತ್ರುಗಳ ಆಹಾರಕ್ಕೆ ಇನ್ನು ಕೊಡಲೇ ಕೊಡೆನು. ನೀನು ದುಡಿದ ದ್ರಾಕ್ಷಾರಸವನ್ನು ಅನ್ಯರು ಕುಡಿಯುವದೇ ಇಲ್ಲ;


ಆದರೆ ಆ ದಿನಗಳಲ್ಲಿಯೂ ನಾನು ನಿಮ್ಮನ್ನು ಸಂಪೂರ್ಣವಾಗಿ ನಿರ್ಮೂಲಮಾಡೆನು; ಇದು ಯೆಹೋವನೆಂಬ ನನ್ನ ನುಡಿ.


ನಾನು ಇವರನ್ನು ನಿರ್ಮೂಲಮಾಡಿ ಕೊಚ್ಚಿಬಿಡುವೆನು; ದ್ರಾಕ್ಷೆಯ ಬಳ್ಳಿಯಲ್ಲಿಯೂ ಅಂಜೂರದ ಮರದಲ್ಲಿಯೂ ಹಣ್ಣಿರುವದಿಲ್ಲ, ಎಲೆಯು ಬಾಡುವದು; ನಾನು ಹಾಳು ಮಾಡುವವರನ್ನು ಅವರಿಗೆ ನೇವಿುಸುವೆನು. ಇದು ಯೆಹೋವನ ನುಡಿ.


ನೆಮ್ಮದಿಯ ಗೋಮಾಳಗಳು ಯೆಹೋವನ ರೋಷಾಗ್ನಿಯಿಂದ ನಿಶ್ಶಬ್ದವಾಗಿವೆ.


ಮಕ್ಕಳು ಗಾಯಪಟ್ಟವರಂತೆ ಪಟ್ಟಣದ ಚೌಕಗಳಲ್ಲಿ ಮೂರ್ಛೆಹೋಗಿ ತಾಯಿಯ ಎದೆಯ ಮೇಲೆ ಬಿದ್ದು ಅಸುರುಸುರಾಗಿ ಅಮ್ಮಾ ತಿನ್ನಲಿಕ್ಕೆ ಇಲ್ಲವೋ, ಕುಡಿಯಲಿಕ್ಕೆ ಇಲ್ಲವೋ ಎಂದು ಗೋಳಿಡುತ್ತವೆ.


ಅವಳು ಯಾವ ಅಂಜೂರ ದ್ರಾಕ್ಷೆಗಳನ್ನು ಇವು ನನ್ನ ವಿುಂಡರಿಂದಾದ ಪ್ರತಿಫಲ ಅಂದುಕೊಂಡಳೋ ಅವುಗಳನ್ನು ನಾನು ಹಾಳುಮಾಡಿ ಕಾಡುಗಿಡಗಳ ಗತಿಗೆ ತರುವೆನು; ಅವು ಭೂಜಂತುಗಳಿಗೆ ಆಹಾರವಾಗುವವು.


ಹೀಗಿರಲು ಎದೋಮ್ಯರು - ನಾವು ಹಾಳಾದೆವು, ಆದರೆ ಹಾಳುಪ್ರದೇಶಗಳನ್ನು ಮತ್ತೆ ಕಟ್ಟುವೆವು ಅಂದುಕೊಂಡರೆ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಅವರು ಕಟ್ಟಿದರೂ ನಾನು ಕೆಡವಿ ಹಾಕುವೆನು; ಅವರು ದುಷ್ಟ ಪ್ರಾಂತದವರೂ, ಯೆಹೋವನ ನಿತ್ಯಕೋಪಕ್ಕೆ ಈಡಾದ ಜನರೂ ಅನ್ನಿಸಿಕೊಳ್ಳುವರು.


ಅದರ ಮುಂಗಡೆ ಬೆಂಕಿಯು ನುಂಗಿಕೊಂಡು ಬರುತ್ತದೆ, ಹಿಂಗಡೆ ಜ್ವಾಲೆಯು ಧಗಧಗಿಸುತ್ತದೆ; ಅದು ಬರುವದಕ್ಕೆ ಮುಂಚೆ ದೇಶವು ಏದೆನ್ ಉದ್ಯಾನದಂತೆ ಕಂಗೊಳಿಸುತ್ತದೆ; ದಾಟಿಹೋದ ಮೇಲೆ ಬೆಗ್ಗಾಡಾಗಿದೆ; ಅದಕ್ಕೆ ಯಾವದೂ ತಪ್ಪಿಸಿಕೊಳ್ಳಲಾರದು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು