Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:29 - ಕನ್ನಡ ಸತ್ಯವೇದವು J.V. (BSI)

29 ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

29 ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ? ಇದು ಯೆಹೋವನಾದ ನನ್ನ ಮಾತು ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

29 “ನಾನು ಇವುಗಳಿಗಾಗಿ ಇವರನ್ನು ದುಡಿಸಬಾರದೋ? ಇಂಥ ಜನತೆಯ ಮೇಲೆ ನನ್ನ ಕೋಪ ತೀರಿಸದೆ ಇರುವೆನೋ? ಇದು ಸರ್ವೇಶ್ವರನಾದ ನನ್ನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

29 ಇವುಗಳ ನಿಮಿತ್ತ ಯೆಹೂದದ ಜನರನ್ನು ನಾನು ಶಿಕ್ಷಿಸಬೇಕಲ್ಲವೆ?” ಯೆಹೋವನು ಹೀಗೆನ್ನುತ್ತಾನೆ: “ಇಂಥ ಜನಾಂಗವನ್ನು ನಾನು ದಂಡಿಸಬೇಕೆಂಬುದು ನಿಮಗೆ ಗೊತ್ತು. ನಾನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

29 ಇವುಗಳ ನಿಮಿತ್ತ ನಾನು ದಂಡಿಸಬಾರದೋ?” ಎಂದು ಯೆಹೋವ ದೇವರು ಹೇಳುತ್ತಾರೆ. “ಇಂಥಾ ಜನಾಂಗಕ್ಕೆ ನನ್ನ ಪ್ರಾಣವು ಮುಯ್ಯಿಗೆ ಮುಯ್ಯಿ ತೀರಿಸುವುದಿಲ್ಲವೋ?

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:29
7 ತಿಳಿವುಗಳ ಹೋಲಿಕೆ  

ನಾನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?


ನಾನು ನ್ಯಾಯತೀರಿಸುವದಕ್ಕೆ ನಿಮ್ಮ ಬಳಿಗೆ ಬರುವೆನು; ಮಾಟಗಾರ, ಸೂಳೆಗಾರ, ಸುಳ್ಳುಸಾಕ್ಷಿ, ಕೂಲಿಹಿಡಿದು ಕೂಲಿಯವನನ್ನು ಮೋಸಪಡಿಸುವವನು, ವಿಧವೆಯರನ್ನೂ ಅನಾಥರನ್ನೂ ಬಾಧಿಸುವವನು, ವಿದೇಶಿಯ ನ್ಯಾಯತಪ್ಪಿಸುವವನು, ಅಂತು ನನಗಂಜದಿರುವ ಇವರೆಲ್ಲರಿಗೆ ವಿರುದ್ಧವಾಗಿ ನಾನು ಶೀಘ್ರಸಾಕ್ಷಿಯಾಗಿರುವೆನು; ಇದು ಸೇನಾಧೀಶ್ವರ ಯೆಹೋವನ ನುಡಿ.


ನಿಮ್ಮ ಹೊಲಗಳನ್ನು ಕೊಯಿದವರ ಕೂಲಿಯನ್ನು ನೀವು ಅನ್ಯಾಯವಾಗಿ ಹಿಡಿದುಕೊಂಡಿದ್ದೀರಿ. ಅಗೋ, ಆ ಕೂಲಿ ನಿಮ್ಮ ಮೇಲೆ ಕೂಗಿಕೊಳ್ಳುತ್ತದೆ; ಮತ್ತು ಕೊಯಿದವರ ಕೂಗು ಸಕಲಸೇನಾಧಿಪತಿಯಾಗಿರುವ ಕರ್ತನ ಕಿವಿಗಳಲ್ಲಿ ಬಿದ್ದಿದೆ.


ನಾನು ಅವರನ್ನು ಇವುಗಳಿಗಾಗಿ ದಂಡಿಸಬಾರದೋ? ಇಂಥಾ ಜನಾಂಗದ ಮೇಲೆ ನನ್ನ ರೋಷವನ್ನು ತೀರಿಸದಿರುವೆನೋ?


[ಕೆಟ್ಟ ಸಂತಾನವೇ] ಹೊಳೆಯ ಗುಂಡುಗಳು ನಿನಗೆ ಗತಿ, ಅವುಗಳೇ ನಿನ್ನ ಪಾಲು; ಅವುಗಳಿಗೇ ನೀನು ಪಾನದ್ರವ್ಯವನ್ನು ನೈವೇದ್ಯವಾಗಿ ಸುರಿದು ಧಾನ್ಯದ್ರವ್ಯವನ್ನು ಅರ್ಪಿಸಿದ್ದೀ. ನಾನು ಇದನ್ನೆಲ್ಲಾ ನೋಡಿ ಕೋಪವನ್ನು ಅಣಗಿಸಿಕೊಳ್ಳಲಾದೀತೇ?


ಇವರೂ ಇವರ ಪಿತೃಗಳೂ ಬೆಟ್ಟಗುಡ್ಡಗಳಲ್ಲಿ ಧೂಪಹಾಕಿ ನನ್ನನ್ನು ಹೀನೈಸಿ ನಡಿಸಿದ ಅಪರಾಧಗಳ ಪ್ರತಿಫಲವನ್ನು ಇವರ ಮಡಲಿಗೆ ಹಾಕುವೆನು; ಹೌದು, ಇವರ ಕಾರ್ಯದ ಫಲವನ್ನು ಅಳತೆಗೆ ಸರಿಯಾಗಿ ಮೊಟ್ಟಮೊದಲೇ ಇವರ ಮಡಲಿಗೆ ಸುರಿಯುವೆನು ಎಂದು ಯೆಹೋವನು ಹೇಳುತ್ತಾನೆ.


ಸೇನಾಧೀಶ್ವರನಾದ ಯೆಹೋವನು ಹೀಗೆ ಹೇಳಿದ್ದಾನೆ - ಸುತ್ತಣ ಮರಗಳನ್ನು ಕಡಿದುಬಿಡಿರಿ, ಯೆರೂಸಲೇವಿುನೆದುರಿಗೆ ದಿಬ್ಬ ಹಾಕಿರಿ; ಇದೇ ನೀವು ದಂಡಿಸತಕ್ಕ ಪಟ್ಟಣ; ಅದರೊಳಗೆ ಬರೀ ದೋಚಾಟವೇ ತುಂಬಿದೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು