Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:3 - ಕನ್ನಡ ಸತ್ಯವೇದವು J.V. (BSI)

3 ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ಪಶ್ಚಾತ್ತಾಪಪಡಲಿಲ್ಲ, ಸಂಹರಿಸಿದರೂ ಶಿಕ್ಷಣಕ್ಕೆ ಒಪ್ಪಲಿಲ್ಲ; ತಮ್ಮ ಮುಖವನ್ನು ಕಲ್ಲಿಗಿಂತ ಕಠಿಣಮಾಡಿಕೊಂಡು ತಿರುಗಿಕೊಳ್ಳಲೊಲ್ಲದೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

3 ಯೆಹೋವನೇ, ನಿನ್ನ ಕಣ್ಣುಗಳು ಸತ್ಯದ ಮೇಲೆ ಇರುತ್ತವಲ್ಲಾ; ನೀನು ಹೊಡೆದರೂ ಅವರು ದುಃಖಪಡಲ್ಲಿಲ್ಲ, ಸಂಹರಿಸಿದರೂ ನೀತಿ ಶಿಕ್ಷೆಗೆ ಒಳಪಡಲಿಲ್ಲ. ತಮ್ಮ ಮುಖವನ್ನು ಕಲ್ಲಿಗಿಂತ ಕಠಿನಮಾಡಿಕೊಂಡು ಪಶ್ಚಾತ್ತಾಪಪಡದೆ ಹೋಗಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

3 ಸ್ವಾಮಿ ಸರ್ವೇಶ್ವರನ ಕಣ್ಣು ನಾಟಿಸುವುದು ಸತ್ಯದ ಮೇಲೆ. ಅವರು ದಂಡಿಸಿದರೂ ನೀವು ಪಶ್ಚಾತ್ತಾಪಪಡಲಿಲ್ಲ. ಅವರು ನಸುಕಿದರೂ ನೀವು ತಿದ್ದುಕೊಳ್ಳಲು ಒಪ್ಪಲಿಲ್ಲ. ನಿಮ್ಮ ಮುಖವನ್ನು ಕಲ್ಲಿಗಿಂತ ಕಠಿಣ ಮಾಡಿಕೊಂಡಿರಿ. ಅವರಿಗೆ ಅಭಿಮುಖರಾಗಲು ಸಮ್ಮತಿಸದೆಹೋದಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

3 ಯೆಹೋವನೇ, ನೀನು ನಂಬಿಗಸ್ತರಾದ ಜನರನ್ನು ಹುಡುಕುವೆ. ನೀನು ಯೆಹೂದದ ಜನರಿಗೆ ಹೊಡೆದೆ, ಆದರೆ ಅವರಿಗೆ ಅದರಿಂದ ನೋವಾಗಲಿಲ್ಲ. ನೀನು ಅವರನ್ನು ಹಾಳುಮಾಡಿದೆ, ಆದರೆ ಅದರಿಂದ ಅವರು ಪಾಠವನ್ನೂ ಕಲಿಯಲಿಲ್ಲ. ಅವರು ತಮ್ಮ ದುಷ್ಕೃತ್ಯಗಳಿಗಾಗಿ ಪಶ್ಚಾತ್ತಾಪಪಡಲಿಲ್ಲ. ಅವರು ಬಹಳ ಹಟಮಾರಿಗಳಾದರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

3 ಓ ಯೆಹೋವ ದೇವರೇ, ನಿಮ್ಮ ಕಣ್ಣುಗಳು ಸತ್ಯದ ಮೇಲೆ ಇವೆಯಲ್ಲವೋ? ಅವರನ್ನು ಹೊಡೆದಿರಿ, ಆದರೆ ಅವರಿಗೆ ದುಃಖವಾಗಲಿಲ್ಲ; ಅವರನ್ನು ತುಳಿದಿರಿ, ಆದರೆ ತಿದ್ದುಕೊಳ್ಳಲು ಒಪ್ಪಲಿಲ್ಲ. ತಮ್ಮ ಮುಖಗಳನ್ನು ಬಂಡೆಗಿಂತ ಕಠಿಣ ಮಾಡಿಕೊಂಡಿದ್ದಾರೆ. ಅವರು ಪಶ್ಚಾತ್ತಾಪಕ್ಕೆ ನಿರಾಕರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:3
45 ತಿಳಿವುಗಳ ಹೋಲಿಕೆ  

ಆದಕಾರಣ ನೀನು ಅವರಿಗೆ - ತಮ್ಮ ದೇವರಾದ ಯೆಹೋವನ ಧ್ವನಿಗೆ ಕಿವಿಗೊಡದೆ ಶಿಕ್ಷಿತರಾಗದೆ ಇರುವ ಜನವು ಇದೇ, ಸತ್ಯವು ಅವರ ಬಾಯಿಂದ ನಿರ್ಮೂಲವಾಗಿ ಅಳಿದುಹೋಗಿದೆ ಎಂದು ಹೇಳು.


ನಾನು ನಿಮ್ಮ ವಂಶದವರನ್ನು ಹೊಡೆದದ್ದು ವ್ಯರ್ಥ, ತಿದ್ದುಪಾಟಾಗಲಿಲ್ಲ; ಸಂಹರಿಸುವ ಸಿಂಹದಂತೆ ನಿಮ್ಮ ಕೈಯ ಕತ್ತಿಯೇ ನಿಮ್ಮ ಪ್ರವಾದಿಗಳನ್ನು ನುಂಗಿಬಿಟ್ಟಿದೆ.


[ಇದರಿಂದ, ಯೆರೂಸಲೇಮೇ,] ನೀನು ನನಗೆ ನಿಶ್ಚಯವಾಗಿ ಭಯಪಡುವಿ, ಶಿಕ್ಷಣೆಗೆ ಒಳಪಡುವಿ, ನಿನ್ನ ನಿವಾಸವು ನಾಶವಾಗದು, ನಾನು ನಿನಗೆ ವಿಧಿಸಿದ್ದೊಂದೂ [ತಗಲದು] ಎಂದು ಅಂದುಕೊಂಡೆನು; ಅವರಾದರೋ ಆತುರಗೊಂಡು ತಮ್ಮ ನಡತೆಯನ್ನೆಲ್ಲಾ ಕೆಡಿಸಿಕೊಂಡರು.


ಹೀಗಿದ್ದರೂ ಆ ಜನರು ತಮ್ಮನ್ನು ಹೊಡೆದಾತನ ಕಡೆಗೆ ತಿರುಗಿಕೊಳ್ಳಲೂ ಇಲ್ಲ, ಸೇನಾಧೀಶ್ವರನಾದ ಯೆಹೋವನನ್ನು ಸೇವಿಸಲೂ ಇಲ್ಲ.


ಯೆಹೋವನು ಭೂಲೋಕದ ಎಲ್ಲಾ ಕಡೆಗಳಲ್ಲಿಯೂ ದೃಷ್ಟಿಯನ್ನು ಪ್ರಸರಿಸುತ್ತಾ ತನ್ನ ಕಡೆಗೆ ಯಥಾರ್ಥಮನಸ್ಸುಳ್ಳವರ ರಕ್ಷಣೆಗಾಗಿ ತನ್ನ ಪ್ರತಾಪವನ್ನು ತೋರ್ಪಡಿಸುತ್ತಾನೆ. ನೀನು ಈ ಕಾರ್ಯದಲ್ಲಿ ಬುದ್ಧಿಹೀನನಾಗಿ ನಡೆದುಕೊಂಡಿದ್ದೀ; ಇಂದಿನಿಂದ ನಿನಗೆ ಯುದ್ಧಗಳು ಇದ್ದೇ ಇರುವವು ಎಂದು ಹೇಳಿದನು.


ಆಗ ಆತನು ಅವರ ಮೇಲೆ ತನ್ನ ರೋಷಾಗ್ನಿಯನ್ನೂ ಯುದ್ಧದ ರೌದ್ರವನ್ನೂ ಸುರಿಸಿದನು. ಎಲ್ಲಾ ಕಡೆಯಿಂದಲೂ ಅವರಿಗೆ ಉರಿಹತ್ತಿತು, ಆದರೆ ಅವರು ತಿಳಿಯಲಿಲ್ಲ; ದಹಿಸಿತು, ಲಕ್ಷ್ಯಕ್ಕೆ ತರಲಿಲ್ಲ.


ಇದು ಮಾತ್ರವಲ್ಲದೆ ನಮ್ಮನ್ನು ಶಿಕ್ಷಿಸಿದಂಥ ಶರೀರ ಸಂಬಂಧವಾದ ತಂದೆಗಳನ್ನು ಸನ್ಮಾನಿಸಿದೆವಷ್ಟೆ; ನಮ್ಮ ಆತ್ಮಗಳಿಗೆ ತಂದೆಯಾಗಿರುವಾತನಿಗೆ ನಾವು ಇನ್ನೂ ಹೆಚ್ಚಾಗಿ ಒಳಪಟ್ಟು ಜೀವಿಸಬೇಕಲ್ಲವೇ.


ಆದರೆ ಅಂಥವುಗಳನ್ನು ನಡಿಸುವವರ ವಿಷಯದಲ್ಲಿ ದೇವರು ಮಾಡುವ ತೀರ್ಪು ಸತ್ಯಕ್ಕನುಸಾರವಾಗಿಯೇ ಇರುವದೆಂದು ಬಲ್ಲೆವು.


ನಿನ್ನ ಪುಂಡಾಟವು ಅಸಹ್ಯವಾಗಿರುವದರಿಂದಲೂ ನಾನು ನಿನ್ನನ್ನು ಎಷ್ಟು ಶುದ್ಧಿಮಾಡಿದರೂ ನೀನು ಶುದ್ಧಿಯಾಗದೆ ಹೋದದರಿಂದಲೂ ನಾನು ನನ್ನ ರೋಷವನ್ನು ನಿನ್ನಲ್ಲಿ ತೀರಿಸಿ ಶಾಂತನಾಗುವವರೆಗೂ ನೀನು ನಿನ್ನ ಕೊಳೆಯನ್ನು ಇನ್ನು ಕಳೆದುಕೊಳ್ಳದೆ ಶುದ್ಧಿಯಾಗದೆ ಇರುವಿ.


ನೀನು ಆಲೋಚನೆಯಲ್ಲಿ ಶ್ರೇಷ್ಠನು, ಕಾರ್ಯದಲ್ಲಿ ಸಮರ್ಥನು; ನೀನು ಪ್ರತಿಯೊಬ್ಬನಿಗೂ ಅವನವನ ಕರ್ಮಕ್ಕೂ ನಡತೆಗೂ ತಕ್ಕ ಫಲವನ್ನು ಕೊಡಬೇಕೆಂದು ನರಜನ್ಮದವರ ಮಾರ್ಗಗಳನ್ನೆಲ್ಲಾ ಕಣ್ಣಾರೆ ನೋಡುತ್ತೀ;


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಆಹಾ, ಈ ಪಟ್ಟಣದವರೂ ಇದರ ಸುತ್ತಣ ಎಲ್ಲಾ ಊರುಗಳವರೂ ನನ್ನ ಮಾತುಗಳನ್ನು ಕೇಳಲೊಲ್ಲದೆ ತಮ್ಮ ಮನಸ್ಸನ್ನು ಕಠಿಣಮಾಡಿಕೊಂಡ ಕಾರಣ ನಾನು ಈ ಪಟ್ಟಣಕ್ಕೆ ಕೊಟ್ಟ ಶಾಪದ ಕೇಡನ್ನೆಲ್ಲಾ ಇವರಿಗೆ ಬರಮಾಡುವೆನು ಎಂದು ಸಮಸ್ತ ಜನರಿಗೆ ಸಾರಿದನು.


ನಿಮ್ಮವರಾದರೋ ನನ್ನ ಮಾತನ್ನು ಕೇಳಲಿಲ್ಲ, ಕಿವಿಗೊಡಲಿಲ್ಲ, ನನ್ನ ಆಜ್ಞೆಗೆ ಮಣಿಯಲಿಲ್ಲ; ತಮ್ಮ ಪಿತೃಗಳಿಗಿಂತಲೂ ಕೆಟ್ಟವರಾಗಿ ನಡೆದರು.


ನೀನು ಹಟಗಾರ, ನಿನ್ನ ಕತ್ತಿನ ನರವು ಕಬ್ಬಿಣ, ನಿನ್ನ ಹಣೆ ತಾಮ್ರ ಎಂದು ನಾನು ತಿಳಿದುಕೊಂಡೆನು;


ಗೋದಿರವೆಯ ಸಂಗಡ ಮೂರ್ಖನನ್ನು ಒರಳಿನಲ್ಲಿ ಒನಕೆಯಿಂದ ಕುಟ್ಟಿದರೂ ಮೂರ್ಖತನವು ಅವನಿಂದ ತೊಲಗದು.


ಜನರು ನನ್ನನ್ನು ಹೊಡೆದರೂ ನೋವಾಗಲಿಲ್ಲ, ಬಡಿದರೂ ತಿಳಿಯಲಿಲ್ಲ; ಯಾವಾಗ ಎಚ್ಚೆತ್ತೇನು? ಪುನಃ ಅದನ್ನೇ ಹುಡುಕೇನು ಎಂದುಕೊಳ್ಳುವಿ.


ಯೆಹೋವನ ಕಣ್ಣು ತಿಳುವಳಿಕೆಗೆ ಕಾವಲು; ಆತನು ವಂಚಕನ ಮಾತುಗಳನ್ನು ಕೆಡವಿಬಿಡುವನು.


ದುಷ್ಟನ ಮುಖದಲ್ಲಿ ಲಜ್ಜೆಯಿಲ್ಲ; ಸತ್ಯವಂತನು ತನ್ನ ನಡತೆಯನ್ನು ಸರಿಪಡಿಸಿಕೊಳ್ಳುತ್ತಿರುವನು.


ಯಥಾರ್ಥಚಿತ್ತವೇ ನಿನಗೆ ಸಂತೋಷ; ಸುಜ್ಞಾನದ ರಹಸ್ಯಗಳನ್ನು ನನಗೆ ತಿಳಿಯಪಡಿಸು.


ಕಷ್ಟ ಬಂದಾಗ ಅರಸನಾದ ಆಹಾಜನು ಯೆಹೋವನಿಗೆ ಮತ್ತಷ್ಟು ದ್ರೋಹಿಯಾದನು.


ಇಷ್ಟು ಶಿಕ್ಷೆಗಳಿಂದಲೂ ನೀವು ನನ್ನ ಆಜ್ಞೆಗೆ ಒಳಗಾಗದೆ ನನಗೆ ವಿರೋಧವಾಗಿ ನಡೆದರೆ


ಅರಸನು ಮತ್ತೊಬ್ಬ ಪಂಚದಶಾಧಿಪತಿಯನ್ನು ಅವನ ಐವತ್ತು ಮಂದಿ ಸಿಪಾಯಿಗಳೊಡನೆ ಕಳುಹಿಸಿದನು. ಇವನು ಬಂದು ಎಲೀಯನ ಮುಂದೆ ಮೊಣಕಾಲೂರಿ ಅವನನ್ನು - ದೇವರ ಮನುಷ್ಯನೇ, ನನ್ನ ಮತ್ತು ನಿನ್ನ ಸೇವಕರಾದ ಈ ಐವತ್ತು ಮಂದಿಯ ಪ್ರಾಣವು ನಿನ್ನ ದೃಷ್ಟಿಯಲ್ಲಿ ಬೆಲೆಯುಳ್ಳದ್ದಾಗಿರಲಿ.


ಈ ಯೆರೂಸಲೇವಿುನವರು ಎಂದಿಗೂ ಹಿಂದಿರುಗದಂತೆ ಬಿಟ್ಟುಹೋದದ್ದೇಕೆ? ಮೋಸವನ್ನೇ ಪಟ್ಟಾಗಿ ಹಿಡಿದಿದ್ದಾರೆ, ತಿರಿಗಿ ಬರಲೊಲ್ಲರು.


ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನೀನು ಹೋಗಿ ಯೆಹೂದ್ಯರಿಗೂ ಯೆರೂಸಲೇವಿುನ ನಿವಾಸಿಗಳಿಗೂ ಹೀಗೆ ಹೇಳು - [ಇದರಿಂದ] ನೀವು ಬುದ್ಧಿ ತಂದುಕೊಂಡು ನನ್ನ ಮಾತುಗಳನ್ನು ಕೇಳುವದಿಲ್ಲವೋ ಎಂದು ಯೆಹೋವನು ಅನ್ನುತ್ತಾನೆ.


ನಾನು ಯಾವ ಸಂತಾನದವರ ಬಳಿಗೆ ನಿನ್ನನ್ನು ಕಳುಹಿಸುತ್ತೇನೋ ಆ ಸಂತಾನದವರು ನಾಚಿಕೆಗೆಟ್ಟವರೂ ಹಟಗಾರರೂ ಆಗಿರುತ್ತಾರೆ; ನೀನು ಅವರಿಗೆ - ಕರ್ತನಾದ ಯೆಹೋವನು ಇಂತೆನ್ನುತ್ತಾನೆ ಎಂದು ನುಡಿ.


ಮೋಶೆಯ ಧರ್ಮಶಾಸ್ತ್ರದಲ್ಲಿ ಬರೆದಂತೆಯೇ ಈ ವಿಪತ್ತೆಲ್ಲಾ ನಮ್ಮ ಮೇಲೆ ಬಂದಿದೆ; ಆದರೂ ನಾವು ನಮ್ಮ ದುರ್ಮಾರ್ಗಗಳನ್ನು ತೊರೆದುಬಿಟ್ಟು ನಿನ್ನ ಸತ್ಯೋಪದೇಶವನ್ನು ಗ್ರಹಿಸಿ ನಡೆಯುವಂತೆ ನಮ್ಮ ದೇವರಾದ ಯೆಹೋವನೆಂಬ ನಿನ್ನ ದಯೆಯನ್ನು ಬೇಡಿಕೊಳ್ಳಲಿಲ್ಲ.


ನಿಮ್ಮ ಊರುಗಳಲ್ಲೆಲ್ಲಾ ನಿಮ್ಮ ಹಲ್ಲಿಗೆ ಏನೂ ಸಿಕ್ಕದಂತೆಯೂ ನಿಮ್ಮ ಸಕಲ ನಿವಾಸಗಳಲ್ಲಿ ಅನ್ನದ ಕೊರತೆಯಾಗುವ ಹಾಗೂ ಮಾಡಿದೆನು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಮಾರಣೇ ದಿನ ಹಿರಿಯವಳು ಕಿರಿಯವಳಿಗೆ - ನಿನ್ನೆಯ ರಾತ್ರಿ ನಾನೇ ಅಪ್ಪನ ಸಂಗಡ ಮಲಗಿಕೊಂಡೆನು; ಈ ರಾತ್ರಿಯೂ ಅವನಿಗೆ ದ್ರಾಕ್ಷಾರಸವನ್ನು ಕುಡಿಸೋಣ; ಆಮೇಲೆ ನೀನು ಅವನ ಸಂಗಡ ಮಲಗಿಕೋ; ಹೀಗೆ ನಮ್ಮ ತಂದೆಯಿಂದ ಸಂತಾನವನ್ನು ಪಡೆದುಕೊಳ್ಳೋಣ ಎಂದು ಹೇಳಿದಳು.


ಇಷ್ಟಾದರೂ ಯಾರೊಬ್ಬಾಮನು ತನ್ನ ದುರ್ಮಾರ್ಗವನ್ನು ಬಿಡದೆ ತಿರಿಗಿ ತಿರಿಗಿ ಕನಿಷ್ಠರಾದ ಜನರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ನೇವಿುಸಿದನು; ಮನಸ್ಸಿಗೆ ಬಂದವರನ್ನು ಪೂಜಾಸ್ಥಳಗಳ ಯಾಜಕರನ್ನಾಗಿ ಪ್ರತಿಷ್ಠಿಸಿದನು.


ನನ್ನಲ್ಲಿ ಸಂಭ್ರಮೋತ್ಸವದ ಧ್ವನಿ ಉಂಟಾಗುವಂತೆ ಮಾಡು; ಆಗ ನೀನು ಜಜ್ಜಿದ ಎಲುಬುಗಳು ಆನಂದ ಪಡುವವು.


ಆ ದ್ರೋಹಿಯಾದರೋ ತನ್ನೊಡನೆ ಸಮಾಧಾನದಿಂದಿದ್ದವರ ಮೇಲೆ ವಿರೋಧವಾಗಿ ಕೈಯೆತ್ತಿ ತಾನು ಮಾಡಿಕೊಂಡ ಒಡಂಬಡಿಕೆಯನ್ನು ಭಂಗಪಡಿಸಿದ್ದಾನೆ.


ಯೆಹೋವನೇ, ನೀನು ಕೈಯೆತ್ತಿದ್ದರೂ ಅವರು ಲಕ್ಷಿಸರು. ಆದರೆ ನಿನ್ನ ಸ್ವಜನಾಭಿಮಾನವನ್ನು ನೋಡಿ ನಾಚಿಕೆಪಡುವರು; ಹೌದು, ಆ ನಿನ್ನ ವಿರೋಧಿಗಳನ್ನು ಅಗ್ನಿಯು ದಹಿಸಿಬಿಡುವದು.


ಆದಕಾರಣ ಹದಮಳೆಗೆ ಅಡ್ಡಿಯಾಯಿತು, ಹಿಂಗಾರೂ ಆಗಲಿಲ್ಲ; ಆದರೂ ನೀನು ಸೂಳೆಯ ಮುಖವುಳ್ಳವಳಾಗಿ ನಾಚಿಕೆಗೆಟ್ಟಿದ್ದೀ.


ನನ್ನ ಜನರನ್ನು ದೇಶದ ಉಕ್ಕಡಗಳಲ್ಲಿ ಕವೆಗೋಲಿನಿಂದ ಹಾರಿಸಿ ತೂರುವೆನು; ಅವರನ್ನು ಪುತ್ರಶೋಕಕ್ಕೆ ಈಡುಮಾಡಿ ನಾಶಪಡಿಸುವೆನು; ಅವರು ಹೋದ ದಾರಿಯಿಂದ ಹಿಂದಿರುಗರು.


ಅವರಾದರೋ ಕಿವಿಗೊಟ್ಟು ಕೇಳಲಿಲ್ಲ, ಕೇಳಲಿಕ್ಕೂ ಉಪದೇಶ ಹೊಂದಲಿಕ್ಕೂ ಒಪ್ಪಲಿಲ್ಲ.


ಅವರು ಇಂದಿನವರೆಗೂ ತಗ್ಗಲಿಲ್ಲ, ನನಗೆ ಭಯಪಡಲಿಲ್ಲ; ನಾನು ನಿಮಗೂ ನಿಮ್ಮ ಪಿತೃಗಳಿಗೂ ನೇವಿುಸಿದ ನಿಯಮನಿಷ್ಠೆಗಳನ್ನು ಅನುಸರಿಸಿ ನಡೆಯಲೂ ಇಲ್ಲ.


ಎರಡು ಮೂರು ಊರಿನವರು ನೀರು ಕುಡಿಯುವದಕ್ಕೆ ಮತ್ತೊಂದು ಊರಿಗೆ ಬಳಲುತ್ತಾ ಹೋಗುತ್ತಿದ್ದರು; ಬಾಯಾರಿಕೆ ತೀರಲಿಲ್ಲ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ನಿಮ್ಮನ್ನು ಬೂದಿಯಿಂದಲೂ ಬಿಸಿಗಾಳಿಯಿಂದಲೂ ಬಾಧಿಸಿದೆನು; ನಿಮ್ಮ ಲೆಕ್ಕವಿಲ್ಲದ ವನ, ದ್ರಾಕ್ಷೆಯ ತೋಟ, ಅಂಜೂರದ ಗಿಡ, ಎಣ್ಣೆಯ ಮರ, ಇವುಗಳನ್ನು ವಿುಡತೆಯು ತಿಂದುಬಿಟ್ಟಿತು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಐಗುಪ್ತದ ವ್ಯಾಧಿಗಳಂಥ ವ್ಯಾಧಿಯನ್ನು ನಿಮಗೆ ಕಳುಹಿಸಿದೆನು; ನಿಮ್ಮ ಯುವಕರನ್ನು ಖಡ್ಗದಿಂದ ಹತಿಸಿದೆನು, ನಿಮ್ಮ ಅಶ್ವಗಳನ್ನು ಸೂರೆಮಾಡಿಸಿದೆನು; ನಿಮ್ಮ ದಂಡಿನ ಗಬ್ಬು ನಿಮ್ಮ ಮೂಗಿಗೆ ಬಡಿಯುವಂತೆ ಮಾಡಿದೆನು; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಸೊದೋಮ್‍ಗೊಮೋರಗಳನ್ನು ಕೆಡವಿದಂತೆ ನಾನು ನಿಮ್ಮ ಅನೇಕ ಪಟ್ಟಣಗಳನ್ನು ಕೆಡವಲು ಉರಿಯಿಂದ ಎಳೆದ ಕೊಳ್ಳಿಯ ಹಾಗಿದ್ದಿರಿ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು