Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 5:4 - ಕನ್ನಡ ಸತ್ಯವೇದವು J.V. (BSI)

4 ಹೀಗಿರುವಲ್ಲಿ ನಾನು - ಇವರು ಬಡವರು, ಮೂಢರು, ಯೆಹೋವನ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

4 ಹೀಗಿರುವಲ್ಲಿ ನಾನು, “ಇವರು ಬಡವರು, ಮೂರ್ಖರು, ಯೆಹೋವನ ಮಾರ್ಗವನ್ನೂ ಮತ್ತು ತಮ್ಮ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು;

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

4 ಹೀಗಿರಲು ನಾನು, “ಈ ಜನರು ಬಡವರು, ಮೂಢರು, ಸರ್ವೇಶ್ವರನ ಮಾರ್ಗವನ್ನೂ ದೇವರ ನ್ಯಾಯವಿಧಿಗಳನ್ನೂ ತಿಳಿಯದವರು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

4 ಆದರೆ ನಾನು ನನ್ನೊಳಗೆ, “ಕೇವಲ ಸಾಮಾನ್ಯ ಜನರು ಇಷ್ಟು ಮೂರ್ಖರಾಗಿರಬಹುದು. ಅವರು ಯೆಹೋವನ ಮಾರ್ಗವನ್ನು ತಿಳಿದುಕೊಂಡಿಲ್ಲ. ಸಾಮಾನ್ಯ ಜನರಿಗೆ ತಮ್ಮ ದೇವರ ಉಪದೇಶ ತಿಳಿದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

4 ಆದ್ದರಿಂದ ನಾನು, “ನಿಶ್ಚಯವಾಗಿ ಇವರು ಬಡವರು ಮತ್ತು ಬುದ್ಧಿಹೀನರು. ಏಕೆಂದರೆ, ಯೆಹೋವ ದೇವರ ಮಾರ್ಗವನ್ನೂ ತಮ್ಮ ದೇವರ ನ್ಯಾಯವಿಧಿಗಳನ್ನೂ ಅರಿಯರು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 5:4
11 ತಿಳಿವುಗಳ ಹೋಲಿಕೆ  

ನನ್ನ ಜನರು ಜ್ಞಾನಹೀನರಾಗಿ ಹಾಳಾಗಿದ್ದಾರೆ; ನೀವು ಜ್ಞಾನವನ್ನು ತಳ್ಳಿಬಿಟ್ಟದರಿಂದ ಇನ್ನು ನನಗೆ ಯಾಜಕ ಸೇವೆಮಾಡದಂತೆ ನಾನು ನಿಮ್ಮನ್ನು ತಳ್ಳಿಬಿಡುವೆನು; ನೀವು ನಿಮ್ಮ ದೇವರ ಧರ್ಮೋಪದೇಶವನ್ನು ಮರೆತ ಕಾರಣ ನಾನು ನಿಮ್ಮ ಸಂತತಿಯವರನ್ನು ಮರೆಯುವೆನು.


ಆಕಾಶದಲ್ಲಿ ಹಾರುವ ಬಕವೂ ತನ್ನ ನಿಯವಿುತ ಕಾಲಗಳನ್ನು ತಿಳಿದುಕೊಂಡಿದೆ, ಬೆಳವಕ್ಕಿಯೂ ಬಾನಕ್ಕಿಯೂ ಕೊಕ್ಕರೆಯೂ ತಮ್ಮ ಗಮನಾಗಮನ ಸಮಯಗಳನ್ನು ಗಮನಿಸುತ್ತವೆ; ನನ್ನ ಜನರಾದರೋ ಯೆಹೋವನ ನಿಯಮವನ್ನು ತಿಳಿಯರು.


ಅಲ್ಲಿನ ರೆಂಬೆಗಳು ಒಣಗಿ ಮುರಿದುಹೋಗುವವು, ಹೆಂಗಸರು ಬಂದು ಬೆಂಕಿ ಹಚ್ಚಿ ಉರಿಸುವರು; ಆ ಪ್ರಜೆಯು ಬುದ್ಧಿಹೀನವಾದದ್ದೇ ಸರಿ; ಆದಕಾರಣ ಸೃಷ್ಟಿಸಿದಾತನು ಅದನ್ನು ಕರುಣಿಸನು, ನಿರ್ಮಿಸಿದಾತನು ಅದಕ್ಕೆ ದಯೆತೋರಿಸನು.


ಆಹಾ, ನೀವು ನಿಷ್ಪ್ರಯೋಜನವಾದ ಸುಳ್ಳುಮಾತುಗಳಲ್ಲಿ ಭರವಸವಿಟ್ಟಿದ್ದೀರಿ.


ನನ್ನ ಜನರು ಮೂರ್ಖರು, ನನ್ನನ್ನು ತಿಳಿಯರು; ಮೂಢಸಂತತಿಯವರು, ಅವಿವೇಕಿಗಳು; ದುಷ್ಕಾರ್ಯದಲ್ಲಿ ನಿಪುಣರು, ಸತ್ಕಾರ್ಯವನ್ನು ಮಾಡಲರಿಯರು.


ಸುಳ್ಳಾಡುವದಕ್ಕೆ ತಮ್ಮ ನಾಲಿಗೆಯನ್ನು ಬಿಲ್ಲಿನಂತೆ ಬೊಗ್ಗಿಸುತ್ತಾರೆ; ಸತ್ಯಕ್ಕೆ ಪ್ರತಿಕೂಲವಾಗಿ ದೇಶದಲ್ಲಿ ಪ್ರಬಲಿಸಿದ್ದಾರೆ; ಕೇಡಿನಿಂದ ಕೇಡಿಗೆ ಹಾರುತ್ತಾರೆ; ನನ್ನನ್ನು ಅರಿಯರು ಎಂದು ಯೆಹೋವನು ಅನ್ನುತ್ತಾನೆ.


ಅವರೆಲ್ಲರೂ ಪಶುಪ್ರಾಯರು, ಮಂದರು; ಬೊಂಬೆಗಳಿಂದಾಗುವ ಶಿಕ್ಷಣವು ಮರದಂತೆ ಮೊದ್ದು.


ಅಕ್ಷರವಿಲ್ಲದವನಿಗೆ - ದಯವಿಟ್ಟು ಓದೆಂದು ಒಪ್ಪಿಸಿದರೆ ಅವನು - ನನಗೆ ವಿದ್ಯೆಯಿಲ್ಲ ಅನ್ನುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು