Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:15 - ಕನ್ನಡ ಸತ್ಯವೇದವು J.V. (BSI)

15 ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು; ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

15 ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲುಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು. ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

15 ಆದರ ಸುತ್ತಲು ರಣಘೋಷಮಾಡಿರಿ. ಇಗೋ, ಅದು ಶರಣಾಗತವಾಯಿತು! ಅದರ ಕೋಟೆಕೊತ್ತಲಗಳು ಬಿದ್ದವು. ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಸರ್ವೇಶ್ವರನಾದ ನಾನು ಅದಕ್ಕೆ ಮುಯ್ಯಿತೀರಿಸಿದ್ದೇನೆ. ನೀವೂ ಮುಯ್ಯಿತೀರಿಸಿರಿ. ಅದು ಮಾಡಿದಂತೆಯೇ ಅದಕ್ಕೆ ಮಾಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

15 ಬಾಬಿಲೋನಿನ ಸುತ್ತಲೂ ಇರುವ ಸೈನಿಕರೇ, ಜಯಘೋಷಮಾಡಿರಿ. ಈಗ ಬಾಬಿಲೋನ್ ಶರಣಾಗತವಾಗಿದೆ. ಅದರ ಪೌಳಿಗೋಡೆಗಳನ್ನು ಮತ್ತು ಕೊತ್ತಲಗಳನ್ನು ಬೀಳಿಸಲಾಗಿದೆ. ಯೆಹೋವನು ಅವರಿಗೆ ತಕ್ಕ ಶಿಕ್ಷೆಯನ್ನು ಕೊಡುತ್ತಿದ್ದಾನೆ. ಎಲ್ಲಾ ಜನಾಂಗಗಳವರು ಬಾಬಿಲೋನಿಗೆ ತಕ್ಕ ಶಿಕ್ಷೆಯನ್ನು ಕೊಡಬೇಕು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

15 ಸುತ್ತಲೂ ಅದಕ್ಕೆ ವಿರೋಧವಾಗಿ ಆರ್ಭಟಿಸಿರಿ; ಅದರ ಬುರುಜುಗಳು ಬಿದ್ದು ಹೋದವು; ಅದರ ಪೌಳಿಗೋಡೆಯನ್ನು ಕೆಡವಲಾಯಿತು. ಅದು ಯೆಹೋವ ದೇವರ ಪ್ರತಿದಂಡನೆ; ಆದ್ದರಿಂದ ನೀವೂ ಅದಕ್ಕೆ ಮುಯ್ಯಿತೀರಿಸಿರಿ. ಅದು ಇತರರಿಗೆ ಮಾಡಿದ ಹಾಗೆಯೇ ಅದಕ್ಕೆ ಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:15
44 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ - ಬಾಬೆಲಿನ ಗಾತ್ರವಾದ ಪೌಳಿ ಗೋಡೆಯು ಸಂಪೂರ್ಣವಾಗಿ ನೆಲಸಮವಾಗುವದು, ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವದು.


ಇತರರಿಗೆ ಅವಳು ಮಾಡಿದ ಪ್ರಕಾರ ಅವಳಿಗೆ ಮಾಡಿರಿ; ಅವಳ ಕೃತ್ಯಗಳಿಗೆ ಸರಿಯಾಗಿ ಅವಳಿಗೆ ಎರಡರಷ್ಟು ಕೊಡಿರಿ; ಅವಳು ಕಲಸಿದ ಪಾತ್ರೆಯಲ್ಲಿ ಅವಳಿಗೆ ಎರಡರಷ್ಟು ಕಲಸಿಕೊಡಿರಿ.


ನೀವು ಬಾಬೆಲಿನೊಳಗಿಂದ ಓಡಿಹೋಗಿ ನಿಮ್ಮ ನಿಮ್ಮ ಪ್ರಾಣಗಳನ್ನು ಉಳಿಸಿಕೊಳ್ಳಿರಿ; ಅದಕ್ಕೆ ಉಂಟಾಗುವ ದಂಡನೆಗೆ ಒಳಗಾಗಬೇಡಿರಿ; ಯೆಹೋವನು ಮುಯ್ಯಿತೀರಿಸುವ ಕಾಲ ಬಂದಿದೆ; ಆತನು ಬಾಬೆಲಿಗೆ ಪ್ರತೀಕಾರಮಾಡುವನು.


ಆದರೆ ಆ ಯುದ್ಧದಿನವು ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ತನ್ನ ಶತ್ರುಗಳಿಗೆ ಮುಯ್ಯಿತೀರಿಸುವ ದಿನವಾಗಿದೆ; ಅದು ದಂಡನೆಯ ದಿವಸ; ಆಗ ಖಡ್ಗವು ನುಂಗಿ ನುಂಗಿ ತಣಿಯುವದು, ಅವರ ರಕ್ತವನ್ನು ತುಂಬಾ ಹೀರುವದು; ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಬಡಗಲಲ್ಲಿ ಯೂಫ್ರೇಟೀಸ್ ನದಿಯ ಹತ್ತಿರ ಬಲಿಮಾಡಬೇಕೆಂದಿದ್ದಾನಲ್ಲಾ.


ಹೇಗಾದರೂ ಹೊಟ್ಟೆ ತುಂಬ ಅನ್ನ ತಿಂಬೋಣ ಎಂದು ಐಗುಪ್ತ್ಯರಿಗೂ ಅಶ್ಶೂರ್ಯರಿಗೂ ಅಧೀನರಾದೆವು.


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹ ಪ್ರವಾಹವಾಗಿ ಬಾಬೆಲಿಗೆ ಬರುತ್ತಿದ್ದ ಸಕಲದೇಶೀಯರು ಇನ್ನು ಮೇಲೆ ಬಾರರು; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವದು.


ಸೇನಾಧೀಶ್ವರನಾದ ಯೆಹೋವನು ತನ್ನ ಮೇಲೆ ಆಣೆಯಿಟ್ಟು - ಖಂಡಿತವಾಗಿ ನಾನು ನಿನ್ನನ್ನು ವಿುಡಿತೆಗಳಷ್ಟು ಅಸಂಖ್ಯಜನರಿಂದ ತುಂಬಿಸುವೆನು, ಅವರು ನಿನ್ನ ಮೇಲೆ ಆರ್ಭಟಿಸುವರು.


ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ!


ಈಗ ನಿಮ್ಮ ಪಿತೃಗಳಂತೆ ಆಜ್ಞೆಗೆ ಮಣಿಯದವರಾಗಿರಬೇಡಿರಿ, ಯೆಹೋವನಿಗೆ ಅಧೀನರಾಗಿರಿ. ನಿಮ್ಮ ದೇವರಾದ ಯೆಹೋವನು ಸದಾಕಾಲಕ್ಕೂ ಪ್ರತಿಷ್ಠಿಸಿಕೊಂಡ ಪವಿತ್ರಾಲಯಕ್ಕೆ ಬಂದು ಆತನನ್ನು ಸೇವಿಸಿರಿ. ಆಗ ನಿಮ್ಮ ಮೇಲಿರುವ ಆತನ ಉಗ್ರಕೋಪವು ತೊಲಗಿಹೋಗುವದು.


ಎಲ್ಲಾ ಅಧಿಪತಿಗಳೂ ದಂಡಿನವರೂ ಅರಸನಾದ ದಾವೀದನ ಎಲ್ಲಾ ಮಕ್ಕಳೂ ಅವನಿಗೆ ಅಧೀನರಾದರು.


ಆತನ ನ್ಯಾಯತೀರ್ಪುಗಳು ಸತ್ಯವೂ ನ್ಯಾಯವೂ ಆಗಿವೆ, ತನ್ನ ಜಾರತ್ವದಿಂದ ಭೂಲೋಕವನ್ನು ಕೆಡಿಸುತ್ತಿದ್ದ ಆ ಮಹಾ ಜಾರಸ್ತ್ರೀಗೆ ಆತನು ನ್ಯಾಯತೀರಿಸಿ ಅವಳು ಆತನ ಸೇವಕರನ್ನು ಕೊಂದದ್ದಕ್ಕಾಗಿ ಅವಳಿಗೆ ಪ್ರತಿದಂಡನೆಯನ್ನು ಮಾಡಿದ್ದಾನೆ ಎಂದು ಹೇಳಿ ಎರಡನೆಯ ಸಾರಿ -


ಅವರು ದೇವಜನರ ಮತ್ತು ಪ್ರವಾದಿಗಳ ರಕ್ತವನ್ನು ಸುರಿಸಿದರು; ನೀನು ಅವರಿಗೆ ರಕ್ತವನ್ನೇ ಕುಡಿಯುವದಕ್ಕೆ ಕೊಟ್ಟಿದ್ದೀ; ಇದಕ್ಕೆ ಅವರು ಪಾತ್ರರು ಎಂದು ಹೇಳುವದನ್ನು ಕೇಳಿದೆನು.


ಕರುಣೆತೋರಿಸದೆ ಇರುವವನಿಗೆ ನ್ಯಾಯತೀರ್ಮಾನದಲ್ಲಿ ಕರುಣೆಯು ತೋರಿಸಲ್ಪಡುವದಿಲ್ಲ. ಕರುಣೆಯು ನ್ಯಾಯತೀರ್ಮಾನವನ್ನು ಗೆದ್ದು ಹಿಗ್ಗುತ್ತದೆ.


ಆಗ ನಮ್ಮ ಕರ್ತನಾದ ಯೇಸುವು ದೇವರನ್ನರಿಯದವರಿಗೂ ತನ್ನ ಸುವಾರ್ತೆಗೆ ಒಳಪಡದವರಿಗೂ ಪ್ರತೀಕಾರವನ್ನು ಸಲ್ಲಿಸುವನು.


ಪ್ರಿಯರೇ, ನೀವೇ ಮುಯ್ಯಿಗೆ ಮುಯ್ಯಿ ತೀರಿಸದೆ ಶಿಕ್ಷಿಸುವದನ್ನು ದೇವರಿಗೆ ಬಿಡಿರಿ. ಯಾಕಂದರೆ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ, ನಾನೇ ಪ್ರತಿಫಲವನ್ನು ಕೊಡುವೆನು ಎಂದು ಕರ್ತನು ಹೇಳುತ್ತಾನೆಂಬದಾಗಿ ಬರೆದದೆ.


ನಾವು ನೀತಿ ತಪ್ಪಿನಡೆಯುವದರಿಂದ ದೇವರಲ್ಲಿರುವ ನೀತಿ ಪ್ರಸಿದ್ಧಿಗೆ ಬರುವದಾದರೆ ನಾವು ಏನು ಹೇಳೋಣ? ಉಗ್ರದಂಡನೆಯನ್ನು ಮಾಡುವ ದೇವರು ಅನ್ಯಾಯಸ್ಥನೇನು? (ಈ ಮಾತನ್ನು ಲೋಕರೀತಿಯಾಗಿ ಆಡಿದ್ದೇನೆ.) ಎಂದಿಗೂ ಅಲ್ಲ.


ಯಾಕಂದರೆ ಬರೆದಿರುವದೆಲ್ಲಾ ನೆರವೇರುವದಕ್ಕಾಗಿ ಅವು ದಂಡನೆಯ ದಿವಸಗಳಾಗಿವೆ.


ನೀವು ಮಾಡುವ ತೀರ್ಪಿಗೆ ಸರಿಯಾಗಿ ನಿಮಗೂ ತೀರ್ಪಾಗುವದು; ನೀವು ಅಳೆಯುವ ಅಳತೆಯಿಂದಲೇ ನಿಮಗೂ ಅಳೆಯುವರು.


ಯೆಹೋವನು ಸ್ವಗೌರವವನ್ನು ಕಾಪಾಡಿಕೊಳ್ಳುವ ದೇವರು, ಆತನು ಮುಯ್ಯಿತೀರಿಸುವವನು; ಹೌದು, ಯೆಹೋವನು ಮುಯ್ಯಿತೀರಿಸುವವನು, ಕೋಪಭರಿತನು; ಯೆಹೋವನು ತನ್ನ ವಿರೋಧಿಗಳಿಗೆ ಮುಯ್ಯಿತೀರಿಸುತ್ತಾನೆ, ತನ್ನ ಶತ್ರುಗಳ ಮೇಲೆ ದೀರ್ಘರೋಷವಿಡುತ್ತಾನೆ.


ಯೆರೂಸಲೇಮ್ ಗುರುತಿನ ಬಾಣವು ಅವನ ಬಲಗೈಗೆ ಸಿಕ್ಕಿದೆ; ಭಿತ್ತಿಭೇದಕ ಯಂತ್ರಗಳನ್ನು ನಿಲ್ಲಿಸಿ ಬಾಯಿಬಿಟ್ಟು ಸಂಹಾರಧ್ವನಿಗೈದು ಕೂಗಿ ಹೌದು ಭಿತ್ತಿಭೇದಕಯಂತ್ರಗಳನ್ನು ಪುರದ್ವಾರಗಳೆದುರಿಗೆ ನಿಲ್ಲಿಸಿ ದಿಬ್ಬಹಾಕಿ ಒಡ್ಡುಕಟ್ಟಬೇಕೆಂದು ಅದರಿಂದ ಸೂಚನೆಯಾಯಿತು.


ಇವನು ಇಟ್ಟ ಆಣೆಯನ್ನು ತಿರಸ್ಕರಿಸಿ ಒಡಂಬಡಿಕೆಯನ್ನು ಮೀರಿದನಲ್ಲವೇ; [ಕೈಯ ಮೇಲೆ] ಕೈ ಇಟ್ಟರೇನು? ಇದನ್ನೆಲ್ಲಾ ಮಾಡಿಬಿಟ್ಟನಲ್ಲವೇ? ಇವನು ಪಾರಾಗನು.


ಯೆಹೋವನು ಬಾಬೆಲಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಣುಗುವದು, ಮತ್ತೆ ಏಳದು ಎಂದು ಹೇಳು. ಜನಗಳು ಆಯಾಸಗೊಂಡು ದುಡಿದದ್ದು [ಬೆಂಕಿಗೆ ತುತ್ತಾಗುವದು] ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆ.


ಆದದರಿಂದ ಯೆಹೋವನು ಇಂತೆನ್ನುತ್ತಾನೆ - ಆಹಾ, ನಾನು ನಿನ್ನ ಪಕ್ಷವಾಗಿ ವ್ಯಾಜ್ಯವಾಡಿ ನಿನ್ನನ್ನು ಹಿಂಸಿಸಿದ ರಾಜ್ಯಕ್ಕೆ ಮುಯ್ಯಿತೀರಿಸುವೆನು; ಅದರ ಸರೋವರವು ಬತ್ತುವಂತೆಯೂ ಅದರ ಪ್ರವಾಹವು ಒಣಗುವಂತೆಯೂ ಮಾಡುವೆನು.


ಯೆಹೋವನು ಇಂತೆನ್ನುತ್ತಾನೆ - ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಜರಿಯ ಮೇಲಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.


ಬಿಲ್ಲುಗಾರರೇ, ನೀವೆಲ್ಲರೂ ವ್ಯೂಹಕಟ್ಟಿ ಬಾಬೆಲಿಗೆ ಮುತ್ತಿಗೆ ಹಾಕಿರಿ, ಬಾಣಗಳನ್ನು ವಿುಗಿಸದೆ ಎಸೆಯಿರಿ; ಅದು ಯೆಹೋವನಿಗೆ ಪಾಪಮಾಡಿತಲ್ಲಾ.


ಏಕಂದರೆ ಮುಯ್ಯಿ ತೀರಿಸುವ ದಿನವು ನನ್ನ ಹೃದಯದಲ್ಲಿ ಸಿದ್ಧವಾಗಿತ್ತು, ನನ್ನ ಜನರನ್ನು ವಿಮೋಚಿಸುವ ವರುಷವು ಒದಗಿತ್ತು.


ಯೆಹೋವನು ನೇವಿುಸಿರುವ ಶುಭವರುಷ, ನಮ್ಮ ದೇವರು ಮುಯ್ಯಿ ತೀರಿಸುವ ದಿನ, ಇವುಗಳನ್ನು ಪ್ರಚುರಗೊಳಿಸುವದಕ್ಕೂ


ಧರ್ಮವನ್ನು ವಜ್ರ ಕವಚವನ್ನಾಗಿ ತೊಟ್ಟು ರಕ್ಷಣೆಯೆಂಬ ಶಿರಸ್ತ್ರಾಣವನ್ನು ಧರಿಸಿಕೊಂಡನು; ರೋಷವೆಂಬ ವಸ್ತ್ರವನ್ನು ಉಡುಪುಮಾಡಿಕೊಂಡು ಆಗ್ರಹವನ್ನು ನಿಲುವಂಗಿಯನ್ನಾಗಿ ಹಾಕಿಕೊಂಡನು.


ಅವರು ಜನಾಂಗಗಳಿಗೆ ಮುಯ್ಯಿತೀರಿಸುವರು; ಅನ್ಯಜನಗಳನ್ನು ದಂಡಿಸುವರು;


ಯೆಹೋವನೇ, ಮುಯ್ಯಿತೀರಿಸುವ ದೇವರೇ, ಮುಯ್ಯಿತೀರಿಸುವ ದೇವರೇ, ಪ್ರಕಾಶಿಸು.


ಆದರೆ ಸಮುವೇಲನು ಅವನಿಗೆ - ನಿನ್ನ ಕತ್ತಿಯು ಅನೇಕ ಸ್ತ್ರೀಯರಿಗೆ ಪುತ್ರ ಶೋಕವನ್ನುಂಟುಮಾಡಿತು; ನಿನ್ನ ತಾಯಿಯು ಎಲ್ಲರಿಗಿಂತಲೂ ಹೆಚ್ಚಾಗಿ ಪುತ್ರಶೋಕವನ್ನು ಅನುಭವಿಸಲಿ ಎಂದು ಹೇಳಿ ಅವನನ್ನು ಗಿಲ್ಗಾಲಿನಲ್ಲಿ ಯೆಹೋವನ ಸನ್ನಿಧಿಯಲ್ಲೇ ಕಡಿದು ಹಾಕಿದನು.


ಕೂಡಲೆ ಜನರ ಆರ್ಭಟವೂ ಕೊಂಬುಗಳ ಧ್ವನಿಯೂ ಉಂಟಾದವು. ಜನರು ಕೊಂಬಿನ ಧ್ವನಿಯನ್ನು ಕೇಳಿ ಮಹತ್ತರವಾಗಿ ಆರ್ಭಟಿಸಲು ಪಟ್ಟಣದ ಗೋಡೆಯು ತಾನೇ ಬಿದ್ದುಹೋಯಿತು. ಪ್ರತಿಯೊಬ್ಬನೂ ನೆಟ್ಟಗೆ ಪಟ್ಟಣದಲ್ಲಿ ನುಗ್ಗಿ ಹೋದನು. ಅದು ಅವರಿಗೆ ಸ್ವಾಧೀನವಾಯಿತು.


ಯಾಜಕರು ಕೊಂಬುಗಳನ್ನು ಊದಬೇಕು. ಅವರು ದೀರ್ಘವಾಗಿ ಊದುವ ಕೊಂಬಿನ ಧ್ವನಿಯು ಕೇಳಿಸುತ್ತಲೇ ನೀವೆಲ್ಲರೂ ಮಹತ್ತರವಾಗಿ ಆರ್ಭಟಿಸಿರಿ. ಆಗ ಪಟ್ಟಣದ ಗೋಡೆಯು ತಾನೇ ಬಿದ್ದುಹೋಗುವದು; ಪ್ರತಿಯೊಬ್ಬನೂ ನೆಟ್ಟಗೆ ಒಳನುಗ್ಗಬಹುದು ಎಂದು ಹೇಳಿದನು.


ಜನಾಂಗಗಳಿರಾ, ದೇವರ ಜನರನ್ನು ಹೊಗಳಿರಿ. ತನ್ನ ಸೇವಕರ ರಕ್ತವನ್ನು ಚೆಲ್ಲಿದ ಶತ್ರುಗಳಿಗೆ ಯೆಹೋವನು ಪ್ರತಿದಂಡನೆ ಮಾಡುತ್ತಾನೆ; ಅವರಿಗೆ ಮುಯ್ಯಿತೀರಿಸುತ್ತಾನೆ; ತನ್ನ ಜನರಿಗೋಸ್ಕರವೂ ದೇಶಕ್ಕೋಸ್ಕರವೂ ದೋಷಪರಿಹಾರಮಾಡುತ್ತಾನೆ.


ಥಳಥಳಿಸುವ ನನ್ನ ಕತ್ತಿಯನ್ನು ನಾನು ಹದಮಾಡಿ ನ್ಯಾಯವನ್ನು ಸ್ಥಾಪಿಸುವದಕ್ಕೆ ಮುಂಗೊಂಡಾಗ ನನ್ನ ಶತ್ರುಗಳಿಗೆ ಮುಯ್ಯಿತೀರಿಸುವೆನು, ನನ್ನನ್ನು ದ್ವೇಷಿಸಿದವರಿಗೆ ಪ್ರತಿದಂಡನೆ ಮಾಡುವೆನು;


ಪ್ರತೀಕಾರಮಾಡಿ ಮುಯ್ಯಿಗೆ ಮುಯ್ಯಿ ತೀರಿಸುವದು ನನ್ನ ಕೆಲಸ; ಅವರು ಜಾರಿಬೀಳುವ ಸಮಯ ಬರುವದು. ಅವರಿಗೆ ಆಪತ್ಕಾಲವು ಸಮೀಪಿಸಿತು; ಅವರಿಗೋಸ್ಕರ ಸಿದ್ಧವಾಗಿರುವ ದುರ್ಗತಿ ಬೇಗ ಬರುವದು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.


ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೋರ್ದನಿನ ದಟ್ಟಡವಿಯಿಂದ [ಕಸ್ದೀಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿ ಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?


ಆದರೆ ಬಾಬೆಲಿನವರೂ ಕಸ್ದೀಯರೂ ಚೀಯೋನಿನಲ್ಲಿ ಮಾಡಿದ ಎಲ್ಲಾ ಹಾನಿಗೆ ಪ್ರತಿಯಾಗಿ ನಾನು ಅವರೆಲ್ಲರಿಗೂ ಚೀಯೋನಿನವರ ಕಣ್ಣೆದುರಿಗೆ ಮುಯ್ಯಿತೀರಿಸುವೆನು ಎಂದು ಯೆಹೋವನು ಅನ್ನುತ್ತಾನೆ.


ಬಾಬೆಲಿನ ಶೂರರು ಯುದ್ಧಕ್ಕೆ ಹಿಂದೆಗೆದು ಹೆಂಗಸರಂತೆ ಅಬಲರಾಗಿ ತಮ್ಮ ಕೋಟೆಗಳಲ್ಲಿ ನಿಂತಿದ್ದಾರೆ; ಅದರ ಮನೆಗಳಿಗೆ ಬೆಂಕಿಯಿಕ್ಕಿದೆ, ಅದರ ಅಗುಳಿಗಳು ಮುರಿದುಹೋಗಿವೆ;


ತನ್ನ ವಿರೋಧಿಗಳಲ್ಲಿಟ್ಟ ಕ್ರೋಧವನ್ನು ಈಡೇರಿಸಿ ತನ್ನ ಶತ್ರುಗಳಿಗೆ ದಂಡನೆಯನ್ನು ವಿಧಿಸಿ ಅವರವರ ಕೃತ್ಯಗಳಿಗೆ ತಕ್ಕಂತೆ ಮುಯ್ಯಿತೀರಿಸುವನು; ಕರಾವಳಿಯವರಿಗೂ ಪ್ರತಿಕ್ರಿಯೆಮಾಡುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು