ಯೆರೆಮೀಯ 50:17 - ಕನ್ನಡ ಸತ್ಯವೇದವು J.V. (BSI)17 ಇಸ್ರಾಯೇಲು ಚದರಿಹೋದ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201917 ಇಸ್ರಾಯೇಲು ಚದರಿಹೋದ ಕುರಿ ಹಿಂಡು; ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ; ಮೊಟ್ಟಮೊದಲು ಅಶ್ಶೂರದ ಅರಸನು ಅದನ್ನು ತಿಂದನು, ಕಟ್ಟಕಡೆಗೆ ಈಗ ಬಾಬೆಲಿನ ಅರಸನಾದ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)17 “ಇಸ್ರಯೇಲ್ ಚದರಿಹೋದ ಮಂದೆ. ಸಿಂಹಗಳು ಅದನ್ನು ಓಡಿಸಿಬಿಟ್ಟಿವೆ. ಮೊಟ್ಟಮೊದಲು ಅಸ್ಸೀರಿಯಾದ ಅರಸನು ಅದನ್ನು ಕಬಳಿಸಿದನು. ಕಟ್ಟಕಡೆಗೆ ಬಾಬಿಲೋನಿನ ಅರಸ ನೆಬೂಕದ್ನೆಚ್ಚರನು ಅದರ ಎಲುಬುಗಳನ್ನು ಕಡಿದುಬಿಟ್ಟನು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್17 “ಇಸ್ರೇಲು ದೇಶಗಳಲ್ಲೆಲ್ಲಾ ಚದರಿಹೋದ ಕುರಿಹಿಂಡಿನಂತಾಗಿದೆ. ಸಿಂಹಗಳಿಗೆ ಹೆದರಿ ಓಡಿಹೋದ ಕುರಿಗಳಂತಾಗಿದೆ ಇಸ್ರೇಲು. ಅದನ್ನು ತಿಂದು ಮುಗಿಸಿದ ಮೊದಲನೆ ಸಿಂಹವೆಂದರೆ ಅಶ್ಶೂರದ ರಾಜನು. ಅದರ ಎಲುಬುಗಳನ್ನು ಜಗಿದ ಕೊನೆಯ ಸಿಂಹವೆಂದರೆ ಬಾಬಿಲೋನಿನ ರಾಜನಾದ ನೆಬೂಕದ್ನೆಚ್ಚರನು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ17 “ಇಸ್ರಾಯೇಲನು ಚದರಿಹೋದ ಕುರಿಯಾಗಿದ್ದನು; ಸಿಂಹಗಳು ಅವನನ್ನು ಓಡಿಸಿಬಿಟ್ಟವು; ಮೊದಲು ಅಸ್ಸೀರಿಯನ ಅರಸನು ಅವನನ್ನು ತಿಂದುಬಿಟ್ಟನು. ಕಡೆಯಲ್ಲಿ ಬಾಬಿಲೋನಿನ ಅರಸನಾದ ಈ ನೆಬೂಕದ್ನೆಚ್ಚರನು ಅವನ ಎಲುಬುಗಳನ್ನು ಮುರಿದಿದ್ದಾನೆ.” ಅಧ್ಯಾಯವನ್ನು ನೋಡಿ |
ಆಹಾ, ಒಬ್ಬನು ಸಿಂಹದೋಪಾದಿಯಲ್ಲಿ ಯೊರ್ದನಿನ ದಟ್ಟಡವಿಯಿಂದ [ಎದೋಮ್ಯರಿಗೆ] ನಿತ್ಯನೆಲೆಯಾದ ಗೋಮಾಳಕ್ಕೆ ಏರಿಬರುವನು; ಕ್ಷಣಮಾತ್ರದಲ್ಲಿ ನಾನು ಅವರನ್ನು ಅಲ್ಲಿಂದ ಓಡಿಸಿಬಿಡುವೆನು; ನಾನು ಆರಿಸಿಕೊಂಡವನನ್ನೇ ಅದನ್ನು ಕಾಯುವದಕ್ಕೆ ನೇವಿುಸುವೆನು; ನನ್ನ ಸಮಾನನು ಯಾವನು? ನನ್ನನ್ನು ನ್ಯಾಯವಿಚಾರಣೆಗೆ ಯಾವನು ಕರೆದಾನು? ಮಂದೆಯನ್ನು ಕಾಯುವ ಯಾವನು ನನ್ನೆದುರಿಗೆ ನಿಲ್ಲಬಲ್ಲನು?