ಯೆರೆಮೀಯ 50:20 - ಕನ್ನಡ ಸತ್ಯವೇದವು J.V. (BSI)20 ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201920 ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವುದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ಹುಡುಕಿದರೂ ಸಿಕ್ಕುವುದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷಮಿಸುವೆನಲ್ಲವೆ. ಇದು ಯೆಹೋವನ ನುಡಿ.” ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)20 ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಸಿಗದು. ಜುದೇಯದ ಪಾಪವನ್ನು ತಡಕಿದರೂ ಸಿಗದು. ಏಕೆಂದರೆ ನಾನು ಉಳಿಸಿದ ಜನಶೇಷವನ್ನು ಕ್ಷಮಿಸಿಬಿಡುವೆನು. ಇದು ಸರ್ವೇಶ್ವರನಾದ ನನ್ನ ನುಡಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್20 ಇದು ಯೆಹೋವನ ನುಡಿ. “ಆ ಸಮಯದಲ್ಲಿ ಜನರು ಇಸ್ರೇಲಿನ ದೋಷವನ್ನು ಕಂಡುಹಿಡಿಯಲು ಪ್ರಯತ್ನಿಸುವರು. ಆದರೆ ಯಾವ ದೋಷಗಳೂ ಇರುವದಿಲ್ಲ. ಜನರು ಯೆಹೂದದ ಪಾಪಗಳನ್ನು ಹುಡುಕುವ ಪ್ರಯತ್ನ ಮಾಡುವರು. ಆದರೆ ಯಾವ ಪಾಪಗಳೂ ಸಿಕ್ಕುವದಿಲ್ಲ. ಏಕೆಂದರೆ ಇಸ್ರೇಲಿನ ಮತ್ತು ಯೆಹೂದದ ಜನರಲ್ಲಿ ಅಳಿದುಳಿದ ಕೆಲವು ಜನರನ್ನು ನಾನು ರಕ್ಷಿಸುತ್ತೇನೆ. ಅವರ ಪಾಪಗಳನ್ನೆಲ್ಲ ಕ್ಷಮಿಸಿದ್ದೇನೆ.” ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ20 ಯೆಹೋವ ದೇವರು ಹೇಳುತ್ತಾರೆ, “ಆ ದಿವಸಗಳಲ್ಲಿಯೂ, ಆ ಕಾಲದಲ್ಲಿಯೂ ಇಸ್ರಾಯೇಲಿನ ಅಕ್ರಮವನ್ನು ಹುಡುಕಿದರೂ, ಅಲ್ಲಿ ಏನೂ ಇರದು; ಯೆಹೂದದ ಪಾಪಗಳನ್ನು ಹುಡುಕಿದರೂ ಅವು ಸಿಕ್ಕುವುದಿಲ್ಲ. ಏಕೆಂದರೆ ನಾನು ಉಳಿಸುವವರನ್ನು ಮನ್ನಿಸುತ್ತೇನೆ. ಅಧ್ಯಾಯವನ್ನು ನೋಡಿ |