ಯೆರೆಮೀಯ 50:21 - ಕನ್ನಡ ಸತ್ಯವೇದವು J.V. (BSI)21 ಯೆಹೋವನು ಇಂತೆನ್ನುತ್ತಾನೆ - ಮೆರಾಥಯಿಮ್ ದೇಶಕ್ಕೂ ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ ಅವರನ್ನು ಸಂಹರಿಸಿ ಅನಂತರ ದೇಶವನ್ನು ತೀರಾ ಹಾಳುಮಾಡಿ ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201921 ಯೆಹೋವನು ಇಂತೆನ್ನುತ್ತಾನೆ, “ಮೆರಾಥಯಿಮ್ ದೇಶಕ್ಕೂ ಮತ್ತು ಪೆಕೋದಿನ ನಿವಾಸಿಗಳಿಗೂ ವಿರುದ್ಧವಾಗಿ ದಂಡೆತ್ತಿ ಹೋಗಿ, ಅವರನ್ನು ಸಂಹರಿಸಿ, ಅನಂತರ ದೇಶವನ್ನು ತೀರಾ ಹಾಳುಮಾಡಿ, ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)21 ಸರ್ವೇಶ್ವರ ಹೀಗೆನ್ನುತ್ತಾರೆ: “ಮೆರಾಥಯಿಮ್ ನಾಡಿಗೂ ಪಕೋದಿನ ನಿವಾಸಿಗಳಿಗೂ ವಿರುದ್ಧ ದಂಡೆತ್ತಿಹೋಗಿ ಅವರನ್ನು ಸಂಹರಿಸು. ಆ ನಾಡನ್ನು ಪೂರ್ತಿಯಾಗಿ ಹಾಳುಮಾಡು. ನಾನು ನಿನಗೆ ಆಜ್ಞಾಪಿಸಿದ್ದನ್ನೆಲ್ಲಾ ನೆರವೇರಿಸು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್21 ಯೆಹೋವನು ಹೀಗೆನ್ನುತ್ತಾನೆ: “ಮೆರಾಥಯಿಮ್ ದೇಶದ ಮೇಲೆ ಧಾಳಿ ಮಾಡಿರಿ. ಪೆಕೋದ ಪ್ರದೇಶದಲ್ಲಿ ವಾಸಮಾಡುವ ಜನಗಳ ಮೇಲೆ ಧಾಳಿ ಮಾಡಿರಿ. ಅವರ ಮೇಲೆ ಧಾಳಿ ಮಾಡಿ ಅವರನ್ನು ಕೊಂದು ಸಂಪೂರ್ಣವಾಗಿ ನಾಶಮಾಡಿರಿ. ನಾನು ನಿಮಗೆ ಆಜ್ಞಾಪಿಸಿದ್ದೆಲ್ಲವನ್ನು ಮಾಡಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ21 “ಮೆರಾಥಯಿಮ್ ದೇಶಕ್ಕೆ ವಿರೋಧವಾಗಿ, ಪೆಕೋದಿನ ನಿವಾಸಿಗಳಿಗೆ ವಿರೋಧವಾಗಿಯೂ ದಂಡೆತ್ತಿ ಹೋಗು; ಅವರನ್ನು ಹಿಂದಟ್ಟಿ ಸಂಹರಿಸು. ಸಂಪೂರ್ಣ ನಾಶಮಾಡು.” “ನಾನು ನಿನಗೆ ಆಜ್ಞಾಪಿಸಿದ್ದೆಲ್ಲದರ ಪ್ರಕಾರ ಮಾಡು, ಎಂದು ಯೆಹೋವ ದೇವರು ಹೇಳುತ್ತಾರೆ. ಅಧ್ಯಾಯವನ್ನು ನೋಡಿ |