Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:24 - ಕನ್ನಡ ಸತ್ಯವೇದವು J.V. (BSI)

24 ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

24 ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

24 ಬಾಬಿಲೋನೇ, ನಿನಗೆ ನಾನು ಉರುಲೊಡ್ಡಿದ್ದೆ. ನೀನು ತಿಳಿಯದೆ ಅದರಲ್ಲಿ ಸಿಕ್ಕಿಕೊಂಡೆ. ನೀನು ಸರ್ವೇಶ್ವರನೊಂದಿಗೆ ಹೋರಾಡಿದ್ದರಿಂದ ಬೋನಿನ ವಶವಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

24 ಬಾಬಿಲೋನೇ, ನಾನು ನಿನಗಾಗಿ ಒಂದು ಬಲೆಯನ್ನು ಒಡ್ಡಿದೆ. ನೀನು ತಿಳಿಯದೆ ಸಿಕ್ಕಿಹಾಕಿಕೊಂಡೆ. ನೀನು ಯೆಹೋವನ ವಿರುದ್ಧ ಹೋರಾಡಿದೆ. ಆದ್ದರಿಂದ ನಿನ್ನನ್ನು ಹುಡುಕಿ ವಶಪಡಿಸಿಕೊಳ್ಳಲಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

24 ನಾನು ಬೋನನ್ನು ಇಟ್ಟೆನು; ಹೌದು, ಬಾಬಿಲೋನೇ ನೀನು ಸಿಕ್ಕಿಕೊಂಡೆ. ಆದರೆ ನಿನಗೆ ತಿಳಿಯದೆ ಇತ್ತು. ನೀನು ಯೆಹೋವ ದೇವರಿಗೆ ವಿರೋಧವಾಗಿ ಜಗಳವಾಡಿದ್ದರಿಂದಲೇ ಸಿಕ್ಕಿಕೊಂಡೆ ಮತ್ತು ವಶವಾದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:24
17 ತಿಳಿವುಗಳ ಹೋಲಿಕೆ  

ದೇವರ ಹೃದಯವು ವಿವೇಕವುಳ್ಳದ್ದು, ಆತನ ಶಕ್ತಿಯು ಪ್ರಬಲವಾದದ್ದು; ಆತನಿಗೆ ವಿರುದ್ಧವಾಗಿ ಮನಸ್ಸು ಕಠಿಣಮಾಡಿಕೊಂಡವನು ಸಾರ್ಥಕನಾದದ್ದುಂಟೇ?


ನಿನ್ನ ಕೈಯೂ ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ಆಕ್ಷೇಪಕನು ಸರ್ವಶಕ್ತನ ಸಂಗಡಲೂ ವ್ಯಾಜ್ಯವಾಡುವನೋ? ದೇವರೊಂದಿಗೆ ವಿವಾದಮಾಡುವವನು ಇದಕ್ಕೆಲ್ಲಾ ಉತ್ತರಕೊಡಲಿ ಎಂದು ಹೇಳಿದನು.


ಯಾವದು ದೇವರೆನಿಸಿಕೊಳ್ಳುತ್ತದೋ ಯಾವದು ಪೂಜೆ ಹೊಂದುತ್ತದೋ ಅದನ್ನೆಲ್ಲಾ ನಾಶನಕ್ಕೆ ಅಧೀನನಾದ ಆ ಪುರುಷನು ಎದುರಿಸಿ ಅದಕ್ಕಿಂತ ಮೇಲಾಗಿ ತನ್ನನ್ನು ತಾನೇ ಹೆಚ್ಚಿಸಿಕೊಂಡು ತಾನು ದೇವರೆಂದು ಹೇಳಿಕೊಂಡು ದೇವರ ಗರ್ಭಗುಡಿಯಲ್ಲೇ ಕೂತುಕೊಳ್ಳುತ್ತಾನೆ.


ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನಾಮಧೇಯದ ರಾಜಾಧಿರಾಜನು ಅನ್ನುತ್ತಾನೆ.


ಬಾಬೆಲ್ ತಟ್ಟನೆ ಬಿದ್ದು ಹಾಳಾಯಿತು! ಅದಕ್ಕಾಗಿ ಅರಿಚಿರಿ; ಅದರ ನೋವನ್ನು ನೀಗಿಸುವದಕ್ಕೆ ಔಷಧವನ್ನು ಸಂಪಾದಿಸಿರಿ, ಗುಣವಾದೀತು.


ಅಯ್ಯೋ, ತನ್ನನ್ನು ರೂಪಿಸಿದಾತನ ಸಂಗಡ ವ್ಯಾಜ್ಯವಾಡುವವನ ಗತಿ ಏನು! ಮಣ್ಣು ಮಡಕೆಗಳಲ್ಲಿ ಅವನೂ ಒಂದು ಮಡಕೆಯಲ್ಲವೆ. ಮಣ್ಣು - ಏನು ಮಾಡುತ್ತೀ ಎಂದು ರೂಪಿಸುವವನನ್ನು ಕೇಳುವದುಂಟೇ? ನಿನ್ನ ಕಾರ್ಯವು [ನಿನ್ನ ವಿಷಯವಾಗಿ] ಅವನಿಗೆ ಕೈಯಿಲ್ಲ ಅಂದೀತೇ?


ನಾನು ಲೋಕದವರಿಗೆ ಅವರ ಪಾಪದ ಫಲವನ್ನೂ ದುಷ್ಟರಿಗೆ ಅವರ ದುಷ್ಕೃತ್ಯಗಳ ಫಲವನ್ನೂ ತಿನ್ನಿಸಿ ಸೊಕ್ಕಿದವರ ಸೊಕ್ಕನ್ನು ಅಡಗಿಸಿ ಭಯಂಕರರ ಹೆಮ್ಮೆಯನ್ನು ತಗ್ಗಿಸಿ


ಮನುಷ್ಯನೋ ತನ್ನ ಕಾಲಗತಿಯನ್ನು ತಿಳಿಯನಷ್ಟೆ; ಮೀನುಗಳು ಕೆಟ್ಟ ಬಲೆಗೂ ಪಕ್ಷಿಗಳು ಜಾಲಕ್ಕೂ ಸಿಕ್ಕಿಬೀಳುವ ಹಾಗೆ ನರಜನ್ಮದವರು ತಮ್ಮ ಮೇಲೆ ತಟ್ಟನೆ ಬೀಳುವ ಕೆಟ್ಟ ಕಾಲಪಾಶಕ್ಕೆ ಸಿಕ್ಕಿಕೊಳ್ಳುವರು.


ಮೋಶೆ ಆರೋನರು ಫರೋಹನ ಬಳಿಗೆ ಹೋಗಿ ಅವನಿಗೆ - ಇಬ್ರಿಯರ ದೇವರಾಗಿರುವ ಯೆಹೋವನು ಆಜ್ಞಾಪಿಸುವದೇನಂದರೆ - ನೀನು ನನ್ನ ಮುಂದೆ ತಗ್ಗಿಸಿಕೊಳ್ಳದೆ ಇರುವದು ಇನ್ನು ಎಲ್ಲಿಯವರೆಗೋ? ನನ್ನನ್ನು ಆರಾಧಿಸುವಂತೆ ನನ್ನ ಜನರಿಗೆ ಅಪ್ಪಣೆ ಕೊಡು.


ಯೆಹೋವನು ಇಂತೆನ್ನುತ್ತಾನೆ - ಮೋವಾಬಿನ ನಿವಾಸಿಯೇ, ಭಯವೂ, ಗುಂಡಿಯೂ, ಬಲೆಯೂ ನಿನಗೆ ಕಾದಿವೆ;


ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು, ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರುಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.


ಅವನು ದೇವರಿಗೆ ವಿರುದ್ಧವಾಗಿ ಕೈಚಾಚಿ ಸರ್ವಶಕ್ತನಿಗೆ ಎದುರು ನಿಂತು ಶೂರನಂತೆ ಮೆರೆದನಲ್ಲಾ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು