Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:26 - ಕನ್ನಡ ಸತ್ಯವೇದವು J.V. (BSI)

26 ಲೋಕದ ಕಟ್ಟಕಡೆಯಿಂದ ಬಾಬೆಲಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

26 ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿರಿ, ಅದರ ಕಣಜಗಳನ್ನು ತೆರೆಯಿರಿ; ಪಟ್ಟಣವನ್ನು ಹಾಳುದಿಬ್ಬಗಳಾಗಿ ಮಾಡಿ ಪೂರ್ಣವಾಗಿ ನಾಶಪಡಿಸಿರಿ; ಏನೂ ಉಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

26 ಲೋಕದ ಕಟ್ಟಕಡೆಯಿಂದ ಬಾಬಿಲೋನಿಗೆ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಆ ನಗರವನ್ನು ಹಾಳುದಿಬ್ಬವನ್ನಾಗಿ ಮಾಡಿ ಪೂರ್ತಿಯಾಗಿ ನಾಶಪಡಿಸಿರಿ. ಅದರಲ್ಲಿ ಏನೂ ಉಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

26 “ಅತಿ ದೂರದಿಂದ ಬಾಬಿಲೋನಿನ ಮೇಲೆ ಬೀಳಲು ಬನ್ನಿ. ಅದರ ಧಾನ್ಯದ ಕಣಜಗಳನ್ನು ತೆರೆಯಿರಿ. ಬಾಬಿಲೋನನ್ನು ಸಂಪೂರ್ಣವಾಗಿ ನಾಶಮಾಡಿರಿ; ಯಾರನ್ನೂ ಜೀವಂತ ಉಳಿಸಬೇಡಿ. ಧಾನ್ಯಗಳ ಗುಡ್ಡೆಗಳ ಹಾಗೆ ಶವಗಳ ದೊಡ್ಡದೊಡ್ಡ ಗುಡ್ಡೆಗಳನ್ನು ಹಾಕಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

26 ಕಟ್ಟಕಡೆಯ ಮೇರೆಯಿಂದ ಅದಕ್ಕೆ ವಿರೋಧವಾಗಿ ಬನ್ನಿ. ಅದರ ಕಣಜಗಳನ್ನು ತೆರೆಯಿರಿ. ಅದನ್ನು ದಿಬ್ಬಗಳಂತೆ ತುಳಿಯಿರಿ. ಸಂಪೂರ್ಣವಾಗಿ ನಾಶಮಾಡಿರಿ. ಅದಕ್ಕೆ ಒಂದೂ ಉಳಿಯದಿರಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:26
19 ತಿಳಿವುಗಳ ಹೋಲಿಕೆ  

ಮತ್ತು ಆ ಪ್ರದೇಶವನ್ನು ಜವುಗುನೆಲವನ್ನಾಗಿಯೂ ಮುಳ್ಳುಹಂದಿಗೆ ಸೊತ್ತನ್ನಾಗಿಯೂ ಮಾಡಿ ನಾಶನವೆಂಬ ಬರಲಿನಿಂದ ಗುಡಿಸಿಬಿಡುವೆನು ಎಂದು ಸೇನಾಧೀಶ್ವರನಾದ ಯೆಹೋವನು ಹೇಳಿದ್ದಾನೆ.


ಕಸ್ದೀಯ ರಾಜ್ಯವು ಸೂರೆಯಾಗುವದು; ಸೂರೆಗಾರರೆಲ್ಲರೂ ತೃಪ್ತಿಗೊಳ್ಳುವರು. ಇದು ಯೆಹೋವನ ನುಡಿ.


ನಿನ್ನ ಹೆಸರುಹಿಡಿದು ಕರೆಯುವ ನಾನು ಯೆಹೋವನು, ಇಸ್ರಾಯೇಲ್ಯರ ದೇವರು ಎಂದು ನೀನು ತಿಳಿದುಕೊಳ್ಳುವ ಹಾಗೆ ಕತ್ತಲಲ್ಲಿ ಬಚ್ಚಿಟ್ಟಿರುವ ಆಸ್ತಿಪಾಸ್ತಿಯನ್ನೂ ಗುಪ್ತಸ್ಥಳಗಳಲ್ಲಿ ಮರೆಮಾಡಿದ ನಿಧಿನಿಕ್ಷೇಪವನ್ನೂ ನಿನಗೆ ಕೊಡುವೆನು.


ಜನಾಂಗಗಳನ್ನು ಹೊಡೆಯುವದಕ್ಕಾಗಿ ಹದವಾದ ಕತ್ತಿಯು ಆತನ ಬಾಯಿಂದ ಬರುತ್ತದೆ. ಆತನು ಅವರನ್ನು ಕಬ್ಬಿಣದ ಕೋಲಿನಿಂದ ಆಳುವನು. ಆತನು ಸರ್ವಶಕ್ತನಾದ ದೇವರ ಉಗ್ರಕೋಪವೆಂಬ ದ್ರಾಕ್ಷೆಯ ತೊಟ್ಟಿಯಲ್ಲಿರುವದನ್ನು ತುಳಿಯುತ್ತಾನೆ.


ಆಗ ಆ ದೂತನು ತನ್ನ ಕುಡುಗೋಲನ್ನು ಭೂವಿುಗೆ ಹಾಕಿ ಭೂವಿುಯ ದ್ರಾಕ್ಷೇಬಳ್ಳಿಯ ಹಣ್ಣನ್ನು ಕೊಯಿದು ದೇವರ ರೌದ್ರವೆಂಬ ದೊಡ್ಡ ತೊಟ್ಟಿಯಲ್ಲಿ ಹಾಕಿದನು.


ನಿನ್ನ ದೇವರಾದ ಯೆಹೋವನು ಎಲ್ಲಿ ಎಂದು ನನ್ನನ್ನು ಜರೆದ ಶತ್ರುಗಳು ಇದನ್ನು ನೋಡುವಾಗ ನಾಚಿಕೆಯು ಅವರನ್ನು ಕವಿದುಕೊಳ್ಳುವದು; ನಾನು ಅವರನ್ನು ಕಣ್ಣಾರೆ ನೋಡುವೆನು. ಈಗಲೇ ಬೀದಿಗಳ ಕೆಸರಂತೆ ತುಳಿತಕ್ಕೀಡಾಗುವರು.


ಯೆಹೋವನು ಬಾಬೆಲಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಣುಗುವದು, ಮತ್ತೆ ಏಳದು ಎಂದು ಹೇಳು. ಜನಗಳು ಆಯಾಸಗೊಂಡು ದುಡಿದದ್ದು [ಬೆಂಕಿಗೆ ತುತ್ತಾಗುವದು] ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆ.


ನಾನು ಬಾಬೆಲಿನಲ್ಲಿ ಬೇಲ್ ದೇವತೆಯನ್ನು ದಂಡಿಸಿ ಅದು ನುಂಗಿದ್ದನ್ನು ಅದರ ಬಾಯೊಳಗಿಂದ ಕಕ್ಕಿಸುವೆನು; ಪ್ರವಾಹ ಪ್ರವಾಹವಾಗಿ ಬಾಬೆಲಿಗೆ ಬರುತ್ತಿದ್ದ ಸಕಲದೇಶೀಯರು ಇನ್ನು ಮೇಲೆ ಬಾರರು; ಇದಲ್ಲದೆ ಬಾಬೆಲಿನ ಪೌಳಿಗೋಡೆಯು ಬಿದ್ದುಹೋಗುವದು.


ಆಹಾ, ಬಡಗಲಿಂದ ಒಂದು ಜನಾಂಗವು ಬರುತ್ತದೆ, ಮಹಾ ಜನವೂ ಬಹುಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.


ಆಹಾ, ಲೋಕವನ್ನೆಲ್ಲಾ ಹೊಡೆದ ಚಮಟಿಗೆಯು ಮುರಿದು ತುಂಡುತುಂಡಾಯಿತು! ಬಾಬೆಲ್‍ರಾಜ್ಯವು ಜನಾಂಗಗಳ ನಡುವೆ ಹಾಳಾಯಿತಲ್ಲಾ!


ಅದರ ಸುತ್ತಲು ಜಯಘೋಷಮಾಡಿರಿ, ಅಧೀನವಾಯಿತು, ಅದರ ಕೊತ್ತಲಗಳು ಬಿದ್ದವು, ಅದರ ಪೌಳಿಗೋಡೆಯು ಕೆಡವಲ್ಪಟ್ಟಿತು; ಯೆಹೋವನು ಅದಕ್ಕೆ ಮುಯ್ಯಿತೀರಿಸಿದ್ದಾನೆ; ಮುಯ್ಯಿತೀರಿಸಿರಿ; ಅದು ಮಾಡಿದಂತೆಯೇ ಅದಕ್ಕೆ ಮಾಡಿರಿ.


ಯೆಹೋವನ ರೋಷದ ದೆಸೆಯಿಂದ ಅದು ನಿರ್ಜನವಾಗಿ ತೀರಾ ಹಾಳುಬೀಳುವದು; ಬಾಬೆಲನ್ನು ಹಾದುಹೋಗುವವರೆಲ್ಲರೂ ಅದಕ್ಕೆ ಸಂಭವಿಸಿದ ವಿಪತ್ತುಗಳನ್ನು ಕಂಡು ಬೆರಗಾಗಿ ಸಿಳ್ಳುಹಾಕುವರು.


ಏಕೆಂದರೆ ಯೆಹೋವನ ಹಸ್ತವು ಈ ಪರ್ವತದಲ್ಲಿ ನೆಲೆಯಾಗಿರುವದು; ಮೋವಾಬಾದರೋ ತಿಪ್ಪೆಗುಂಡಿಯ ರೊಚ್ಚಿನಲ್ಲಿ ಒಣಹುಲ್ಲು ತುಳಿಯಲ್ಪಡುವ ಹಾಗೆ ತಾನಿದ್ದಲ್ಲೇ ತುಳಿಯಲ್ಪಡುವದು.


ನಾನು ಅದನ್ನು ಭ್ರಷ್ಟ ಜನರಿಗೆ ವಿರುದ್ಧವಾಗಿ ಕಳುಹಿಸಿ ನನ್ನ ಕೋಪಕ್ಕೆ ಗುರಿಯಾದ [ನನ್ನ] ಪ್ರಜೆಯನ್ನು ಸೂರೆಮಾಡಿ ಕೊಳ್ಳೆಹೊಡೆದು ಬೀದಿಯ ಕೆಸರನ್ನೋ ಎಂಬಂತೆ ತುಳಿದುಹಾಕಬೇಕೆಂದು ಅದಕ್ಕೆ ಅಪ್ಪಣೆಕೊಡುವೆನು.


ಆತನು ದೂರದ ಜನಾಂಗದವರಿಗೆ ಗುರುತಾಗಿ ಧ್ವಜವೆತ್ತಿ ಅವರನ್ನು ಭೂಲೋಕದ ಅಂಚಿನಲ್ಲಿಂದ ಸಿಳ್ಳುಹಾಕಿ ಕರೆಯುವನು; ಇಗೋ, ತ್ವರೆಪಟ್ಟು ವೇಗವಾಗಿ ಬರುತ್ತಾರೆ!


ಆಕಾಶದಲ್ಲಿ ಹಾರಾಡುವ ಹಕ್ಕಿಗಳನ್ನು ನೋಡಿರಿ; ಅವು ಬಿತ್ತುವದಿಲ್ಲ, ಕೊಯ್ಯುವದಿಲ್ಲ, ಕಣಜಗಳಲ್ಲಿ ತುಂಬಿಟ್ಟುಕೊಳ್ಳುವದಿಲ್ಲ; ಆದಾಗ್ಯೂ ಪರಲೋಕದಲ್ಲಿರುವ ನಿಮ್ಮ ತಂದೆಯು ಅವುಗಳನ್ನು ಸಾಕಿ ಸಲಹುತ್ತಾನೆ; ಅವುಗಳಿಗಿಂತ ನೀವು ಹೆಚ್ಚಿನವರಲ್ಲವೋ?


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು