Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:27 - ಕನ್ನಡ ಸತ್ಯವೇದವು J.V. (BSI)

27 ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

27 ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ; ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

27 ಅದರ ಗೂಳಿಗಳನ್ನೆಲ್ಲ ಕೊಲ್ಲಿರಿ. ಹೋಗಲಿ ಅವು ವಧ್ಯಸ್ಥಾನಕ್ಕೆ. ಅವುಗಳಿಗೆ ಧಿಕ್ಕಾರ. ಅವುಗಳಿಗೆ ಬಂದಿದೆ ವಿಪತ್ಕಾಲ! ಸಮೀಪಿಸಿದೆ ದಂಡನೆಯ ದಿನ!

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

27 ಬಾಬಿಲೋನಿನ ಎಲ್ಲಾ ತರುಣರನ್ನು ಕೊಂದುಹಾಕಿರಿ. ಅವರನ್ನು ಕತ್ತರಿಸಿಬಿಡಿ. ಅವರನ್ನು ಸೋಲಿಸುವ ಸಮಯ ಬಂದಿದೆ. ಇದು ಅವರಿಗೆ ಕೇಡಿನ ಕಾಲ. ಇದು ಅವರನ್ನು ದಂಡಿಸುವ ಸಮಯ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

27 ಅದರ ಹೋರಿಗಳನ್ನೆಲ್ಲಾ ಕೊಲ್ಲಿರಿ, ಅವು ವಧ್ಯಸ್ಥಾನಕ್ಕೆ ಹೋಗಲಿ, ಅವುಗಳ ಗತಿಯನ್ನು ಏನೆಂದು ಹೇಳಲಿ! ಅವುಗಳಿಗೆ ವಿಪತ್ಕಾಲವು ಒದಗಿದೆ. ದಂಡನೆಯ ದಿನವು ಸಂಭವಿಸಿದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:27
22 ತಿಳಿವುಗಳ ಹೋಲಿಕೆ  

ಸಂಬಳಕ್ಕಾಗಿ ಐಗುಪ್ತವನ್ನು ಸೇರಿರುವ ದಂಡಾಳುಗಳು ಕೊಬ್ಬಿದ ಕರುಗಳಂತಿದ್ದಾರೆ; ಅವರೂ ಬೆನ್ನುಕೊಟ್ಟು ಓಡಿಹೋಗಿದ್ದಾರೆ; ನಿಲ್ಲಲೇ ಇಲ್ಲ; ಅವರಿಗೆ ವಿಪತ್ಕಾಲವು ಒದಗಿದೆ, ದಂಡನೆಯ ದಿನವು ಸಂಭವಿಸಿದೆ.


ಈ ಯಜ್ಞಪಶುಗಳೊಂದಿಗೆ ಕಾಡುಕೋಣಗಳೂ ಹೋರಿಗೂಳಿಗಳೂ ಬರುವವು; ಆ ದೇಶವು ರಕ್ತದಿಂದ ನೆನೆಯುವದು, ಅಲ್ಲಿನ ದೂಳು ಕೊಬ್ಬಿನಿಂದ ಜಿಡ್ಡಾಗುವದು.


ಭಯಕ್ಕೆ ಓಡುವವನು ಗುಂಡಿಯಲ್ಲಿ ಬೀಳುವನು, ಗುಂಡಿಯಿಂದ ಹತ್ತಿ ಬರುವವನು ಬಲೆಗೆ ಸಿಕ್ಕುವನು; ನಾನು ದಂಡನೆಯ ವರುಷವನ್ನು ಮೋವಾಬಿಗೆ ಬರಮಾಡುವೆನಷ್ಟೆ. ಇದು ಯೆಹೋವನ ನುಡಿ.


ಆದರೆ ಕರ್ತನು ಅವನಿಗೆ ಶಿಕ್ಷಾಕಾಲ ಬರುತ್ತದೆಂದು ನಗುತ್ತಾನೆ.


ಬಹಳ ಗೂಳಿಗಳು ನನ್ನನ್ನು ಸುತ್ತಿಕೊಂಡಿವೆ; ಬಾಷಾನಿನ ಬಲವುಳ್ಳ ಹೋರಿಗಳು ನನ್ನನ್ನು ಮುತ್ತಿಕೊಂಡಿವೆ.


ಆಮೇಲೆ ಒಬ್ಬ ದೇವದೂತನು ಸೂರ್ಯನಲ್ಲಿ ನಿಂತಿರುವದನ್ನು ಕಂಡೆನು. ಅವನು ಮಹಾ ಶಬ್ದದಿಂದ ಕೂಗುತ್ತಾ ಆಕಾಶದಲ್ಲಿ ಹಾರಾಡುವ ಎಲ್ಲಾ ಪಕ್ಷಿಗಳಿಗೆ - ಬನ್ನಿರಿ, ದೇವರು ಮಾಡಿಸುವ ಮಹಾಭೋಜನಕ್ಕೆ ಕೂಡಿಬನ್ನಿರಿ,


ಅಯ್ಯೋ, ಅಯ್ಯೋ, ಮಹಾಪಟ್ಟಣವೇ, ಬಾಬೆಲೇ, ಬಲಿಷ್ಠವಾದ ನಗರಿಯೇ, ನಿನಗೆ ವಿಧಿಸಲ್ಪಟ್ಟ ದಂಡನೆಯು ಒಂದೇ ಗಳಿಗೆಯಲ್ಲಿ ಬಂತಲ್ಲಾ ಎಂದು ಹೇಳುವರು.


ಯಾರೂ ನನ್ನನ್ನು ಸಂತೈಸರು; ನನ್ನ ನರಳಾಟದ ಸುದ್ದಿಯು ನನ್ನ ವೈರಿಗಳ ಕಿವಿಗೆ ಬಿದ್ದಿದೆ; ನನ್ನ ಶತ್ರುಗಳೆಲ್ಲಾ ನನಗಾದ ಕೇಡಿನ ಸಮಾಚಾರವನ್ನು ಕೇಳಿ ಅದನ್ನು ಮಾಡಿದವನು ನೀನೇ ಎಂದು ಉಲ್ಲಾಸಪಡುತ್ತಾರೆ. ನೀನು ಮುಂತಿಳಿಸಿದ ದಿನವನ್ನು ಬರಮಾಡುವಾಗ ನನಗಾದ ಗತಿಯು ಅವರಿಗೂ ಆಗಲಿ!


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ - ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನಗೆ ವಿರುದ್ಧನು; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.


ನನ್ನ ಸ್ವಾಸ್ತ್ಯವನ್ನು ಕೊಳ್ಳೆಹೊಡೆಯುವವರೇ, ನೀವು ಹರ್ಷಿಸಿ ಉಲ್ಲಾಸಿಸುವವರೂ ಕಣತುಳಿಯುವ ಕಡಸಿನ ಹಾಗೆ ಕುಣಿದಾಡುವವರೂ ಕೊಬ್ಬಿದ ಕುದುರೆಗಳಂತೆ ಹೇಕರಿಸುವವರೂ ಆಗಿರುವದರಿಂದ


ಅವನ ದೇಶಕ್ಕೆ ಕಾಲವು ಹತ್ತರಿಸುವ ತನಕ ಸಕಲ ಜನಾಂಗಗಳು ಅವನಿಗೂ ಅವನ ಮಗನಿಗೂ ಮೊಮ್ಮಗನಿಗೂ ಅಡಿಯಾಳಾಗಿ ಬಿದ್ದಿರುವವು; ಆಮೇಲೆ ಅನೇಕ ಜನಾಂಗಗಳೂ ಮಹಾರಾಜರೂ ಅವನನ್ನೇ ಅಡಿಯಾಳನ್ನಾಗಿ ಮಾಡಿಕೊಳ್ಳುವರು.


ಹಿಂದಿನವರು ಅವನ [ನಾಶನ] ದಿನವನ್ನು ನೋಡಿ ಹೇಗೆ ಬೆರಗಾದರೋ ಹಾಗೆಯೇ ಮುಂದಿನವರೂ ಅದಕ್ಕೆ ವಿಸ್ಮಯಪಡುವರು.


ಯೆಹೋವನೇ, ನೀನು ನನ್ನನ್ನು ತಿಳಿದಿದ್ದೀ, ನನ್ನನ್ನು ನೋಡುತ್ತಾ ನಿನ್ನೊಂದಿಗೆ ಅನ್ಯೋನ್ಯವಾಗಿರುವ ನನ್ನ ಹೃದಯವನ್ನು ಪರೀಕ್ಷಿಸುತ್ತೀ, ಅವರನ್ನು ಕುರಿಗಳನ್ನೋ ಎಂಬಂತೆ ಕೊಲೆಗೆ ಎಳೆದು ವಧೆಯ ದಿನಕ್ಕೆ ಗೊತ್ತುಮಾಡು.


ಕುರುಬರೇ, ಅರಚಿ ಗೋಳಾಡಿರಿ! ಮಂದೆಯಲ್ಲಿನ ಹಿರಿಯ ಮಣಿಗಳೇ, [ಬೂದಿಯಲ್ಲಿ] ಬಿದ್ದು ಹೊರಳಾಡಿರಿ! ನಿಮ್ಮನ್ನು ವಧಿಸುವ ಕಾಲವು ತುಂಬಿದೆ; ನಾನು ನಿಮ್ಮನ್ನು ಭಂಗಪಡಿಸುವೆನು; ನೀವು ಬಿದ್ದುಹೋದ ಅಂದವಾದ ಪಾತ್ರೆಯಂತೆ ಚೂರುಚೂರಾಗುವಿರಿ.


ಯೆಹೋವನು ನೇವಿುಸಿದ ಕೆಲಸದಲ್ಲಿ ಆಲಸ್ಯಗಾರನು ಶಾಪಗ್ರಸ್ತನಾಗಲಿ; ತನ್ನ ಕತ್ತಿಯನ್ನು ರಕ್ತಸುರಿಸದಂತೆ ತಡೆಯುವವನಿಗೆ ಶಾಪತಗಲಲಿ.


ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದೆ; ಅದರ ಯುವಕ ಶ್ರೇಷ್ಠರು ಹತರಾಗುವದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.


ನಾನು ಅವರನ್ನು ಕುರಿ ಟಗರು ಹೋತಗಳ ಹಾಗೆ ವಧ್ಯಸ್ಥಾನಕ್ಕೆ ಬರಮಾಡುವೆನು.


ಉದಯವು ಬರುತ್ತದೆ, ರಾತ್ರಿಯೂ ಬರುತ್ತದೆ; ವಿಚಾರಿಸಬೇಕಾದರೆ ವಿಚಾರಿಸಿರಿ, ತಿರಿಗಿ ಬನ್ನಿರಿ ಎಂದು ಕಾವಲುಗಾರನು ಹೇಳಿದನು.


ಯೆಹೋವನ ಖಡ್ಗವು ರಕ್ತಮಯವಾಗಿದೆ; ಅದು ವಪೆಯಿಂದಲೂ ಕುರಿ ಹೋತಗಳ ರಕ್ತದಿಂದಲೂ ಟಗರುಗಳ ಹುರುಳಿಕಾಯಿಗಳ ಕೊಬ್ಬಿನಿಂದಲೂ ಭರಿತವಾಗಿದೆ; ಯೆಹೋವನು ಬೊಚ್ರದಲ್ಲಿ ಬಲಿಯನ್ನೂ ಎದೋಮ್ ಸೀಮೆಯಲ್ಲಿ ದೊಡ್ಡ ಕೊಲೆಯನ್ನೂ ಮಾಡಬೇಕೆಂದಿದ್ದಾನಷ್ಟೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು