Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:30 - ಕನ್ನಡ ಸತ್ಯವೇದವು J.V. (BSI)

30 ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

30 ಆದಕಾರಣ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು; ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

30 ಆದಕಾರಣ ಆ ದಿನದಂದು ಅಲ್ಲಿ ಯುವಕರು ಬೀದಿ ಚೌಕಗಳಲ್ಲಿ ಬಿದ್ದು ಸಾಯುವರು. ಯುದ್ಧವೀರರೆಲ್ಲರು ಸತ್ತು ಸ್ತಬ್ದರಾಗುವರು. ಇದು ಸರ್ವೇಶ್ವರನಾದ ನನ್ನ ನುಡಿ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

30 ಬಾಬಿಲೋನಿನ ತರುಣರನ್ನು ಬೀದಿಗಳಲ್ಲಿ ಕೊಲ್ಲಲಾಗುವುದು. ಅದರ ಎಲ್ಲಾ ಸೈನಿಕರು ಅಂದು ಸಾಯುವರು.” ಯೆಹೋವನು ಹೀಗೆನ್ನುತ್ತಾನೆ:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

30 ಆದ್ದರಿಂದ ಅದರ ಯೌವನಸ್ಥರು ಬೀದಿಗಳಲ್ಲಿ ಬೀಳುವರು; ಅದರ ಸೈನಿಕರೆಲ್ಲಾ ಆ ದಿವಸದಲ್ಲಿ ಸುಮ್ಮನಾಗುವರು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:30
10 ತಿಳಿವುಗಳ ಹೋಲಿಕೆ  

ಅದರ ದುರ್ಗತಿಯಿಂದ ಆ ದಿನದಲ್ಲಿ ಅಲ್ಲಿನ ಯೌವನಸ್ಥರು ಚೌಕಗಳಲ್ಲಿ ಬಿದ್ದುಬಿಡುವರು, ಯುದ್ಧವೀರರೆಲ್ಲಾ ಸುಮ್ಮನಾಗುವರು.


ಆದಕಾರಣ ಅವರ ಮಕ್ಕಳನ್ನು ಕ್ಷಾಮಕ್ಕೆ ಗುರಿಮಾಡಿ ಕತ್ತಿಯ ಬಾಯಿಗೆ ಒಪ್ಪಿಸು; ಅವರ ಹೆಂಡಿರು ಮಕ್ಕಳನ್ನು ನೀಗಿಕೊಂಡು ವಿಧವೆಯರಾಗಲಿ; ಮೃತ್ಯುವು ಅವರ ಗಂಡಂದಿರನ್ನು ಸಂಹರಿಸಲಿ;


ಏಕಂದರೆ ಬೀದಿಗಳಲ್ಲಿ ಮಕ್ಕಳೂ ಚೌಕಗಳಲ್ಲಿ ಯುವಕರೂ ಇಲ್ಲದ ಹಾಗೆ ಮೃತ್ಯುವು ನಮ್ಮ ಕಿಟಕಿಗಳ ಮೇಲೆ ಹತ್ತಿ ನಮ್ಮ ಉಪ್ಪರಿಗೆಗಳೊಳಗೆ ನುಗ್ಗಿದೆ.


ರಾಜರ ಮಾಂಸವನ್ನೂ ಸಹಸ್ರಾಧಿಪತಿಗಳ ಮಾಂಸವನ್ನೂ ಪರಾಕ್ರಮಶಾಲಿಗಳ ಮಾಂಸವನ್ನೂ ಕುದುರೆಗಳ ಮಾಂಸವನ್ನೂ ರಾಹುತರ ಮಾಂಸವನ್ನೂ, ಸ್ವತಂತ್ರರೂ ದಾಸರೂ ದೊಡ್ಡವರೂ ಚಿಕ್ಕವರೂ ಇವರೆಲ್ಲರ ಮಾಂಸವನ್ನೂ ತಿನ್ನುವದಕ್ಕೆ ಬನ್ನಿರಿ ಎಂದು ಹೇಳಿದನು.


ಇದಲ್ಲದೆ ಭೂರಾಜರೂ ಪ್ರಭುಗಳೂ ಸಹಸ್ರಾಧಿಪತಿಗಳೂ ಐಶ್ವರ್ಯವಂತರೂ ಪರಾಕ್ರಮಶಾಲಿಗಳೂ ಎಲ್ಲಾ ದಾಸರೂ ಸ್ವತಂತ್ರರೂ ಬೆಟ್ಟಗಳ ಗವಿಗಳಿಗೂ ಬಂಡೆಗಳ ಸಂದುಗಳಿಗೂ ಓಡಿಹೋಗಿ ತಮ್ಮನ್ನು ಮರೆಮಾಡಿಕೊಂಡು


ಖಡ್ಗವು ಕೊಚ್ಚಿಕೊಳ್ಳುವವರನ್ನು ಇರಿಯಲಿ! ಅವರ ಬುದ್ಧಿಹೀನತೆಯು ಬೈಲಿಗೆ ಬರುವದು. ಖಡ್ಗವು ಬಾಬೆಲಿನ ಶೂರರನ್ನು ಸಂಹರಿಸಲಿ!


ಸುಟ್ಟುಹೋದ ಅದರ ಪಟ್ಟಣಗಳಿಂದ ಹೊಗೆ ಎದ್ದಿದೆ; ಅದರ ಯುವಕ ಶ್ರೇಷ್ಠರು ಹತರಾಗುವದಕ್ಕೆ ಇಳಿದುಹೋಗಿದ್ದಾರೆ. ಇದು ಸೇನಾಧೀಶ್ವರನಾದ ಯೆಹೋವನೆಂಬ ನಾಮವುಳ್ಳ ರಾಜಾಧಿರಾಜನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು