Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 50:40 - ಕನ್ನಡ ಸತ್ಯವೇದವು J.V. (BSI)

40 ದೇವರು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ಇಳಕೊಳ್ಳನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

40 ದೇವರು ಕೆಡವಿದ ಸೊದೋಮ್, ಗೊಮೋರ ಪಟ್ಟಣಗಳಲ್ಲಿಯೂ ಮತ್ತು ಸುತ್ತಣ ಊರುಗಳಲ್ಲಿಯೂ ಹೇಗೋ, ಹಾಗೆಯೇ ಬಾಬೆಲಿನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ನೆಲೆ ನಿಲ್ಲುವುದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

40 ಯಾರೂ ನೆಲಸಲಾಗಲಿಲ್ಲ ನಾನು ಕೆಡವಿದಾ ಸೊದೋಮ್ ಗೊಮೋರ ನಗರಗಳಲ್ಲಿ ಅದರ ಸುತ್ತಮುತ್ತಣ ಊರುಗಳಲ್ಲಿ ಯಾರೂ ವಾಸಿಸರು ಯಾವ ನರಪ್ರಾಣಿಯೂ ನೆಲಸದು, ಬಾಬಿಲೋನಿನಲ್ಲಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

40 ದೇವರು ಸೊದೋಮ್ ಗೊಮೋರ ನಗರಗಳನ್ನೂ ಅವುಗಳ ಸುತ್ತಮುತ್ತಲಿನ ಪಟ್ಟಣಗಳನ್ನೂ ಸಂಪೂರ್ಣವಾಗಿ ನಾಶಮಾಡಿದನು. ಈಗ ಅಲ್ಲಿ ಯಾರೂ ವಾಸಿಸುವದಿಲ್ಲ. ಅದೇ ರೀತಿ ಬಾಬಿಲೋನಿನಲ್ಲಿ ಯಾರೂ ವಾಸಮಾಡುವದಿಲ್ಲ. ವಾಸಮಾಡಲು ಅಲ್ಲಿಗೆ ಯಾರೂ ಹೋಗುವದಿಲ್ಲ.”

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

40 ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಅವುಗಳ ಸುತ್ತಣ ಪಟ್ಟಣಗಳಲ್ಲಿಯೂ ಹೇಗೋ ಹಾಗೆಯೇ, ಎದೋಮಿನಲ್ಲಿಯೂ ಯಾರೂ ವಾಸಮಾಡುವುದಿಲ್ಲ; ಅದರಲ್ಲಿ ಯಾವ ನರಪ್ರಾಣಿಯೂ ತಂಗುವುದಿಲ್ಲ” ಎಂದು ಯೆಹೋವ ದೇವರು ಅನ್ನುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 50:40
15 ತಿಳಿವುಗಳ ಹೋಲಿಕೆ  

ಸೊದೋಮ ಗೊಮೋರ ಪಟ್ಟಣಗಳವರೂ ಅವುಗಳ ಸುತ್ತುಮುತ್ತಣ ಪಟ್ಟಣಗಳವರೂ ಆ ದೂತರಂತೆ ನಡೆದುಕೊಂಡು ತಮ್ಮನ್ನು ಜಾರತ್ವಕ್ಕೆ ಒಪ್ಪಿಸಿಬಿಟ್ಟು ಸ್ವಭಾವವಿರುದ್ಧವಾದ ಭೋಗವನ್ನನುಸರಿಸಿದ್ದರಿಂದ ಅವರು ನಿತ್ಯವಾದ ಅಗ್ನಿಯಲ್ಲಿ ದಂಡನೆಯನ್ನು ಅನುಭವಿಸುತ್ತಾ [ದುರ್ಮಾರ್ಗಿಗಳಿಗೆ ಆಗುವ ದುರ್ಗತಿಗೆ] ಉದಾಹರಣೆಯಾಗಿ ಇಡಲ್ಪಟ್ಟಿದ್ದಾರೆ.


ಆತನು ಸೊದೋಮ್‍ಗೊಮೋರ ಪಟ್ಟಣಗಳನ್ನು ಸುಟ್ಟು ಬೂದಿಮಾಡಿ ಮುಂದೆ ಭಕ್ತಿಹೀನರಾಗಿ ಬದುಕುವವರ ಗತಿ ಇಂಥದೆಂದು ಸೂಚಿಸುವದಕ್ಕಾಗಿ ಅವುಗಳಿಗೆ ನಾಶನವನ್ನು ವಿಧಿಸಿದನು.


ನಾನು ಕೆಡವಿದ ಸೊದೋಮ್ ಗೊಮೋರ ಪಟ್ಟಣಗಳಲ್ಲಿಯೂ ಸುತ್ತಣ ಊರುಗಳಲ್ಲಿಯೂ ಹೇಗೋ ಹಾಗೆಯೇ ಎದೋವಿುನಲ್ಲಿಯೂ ಯಾರೂ ವಾಸಿಸರು, ಯಾವ ನರಪ್ರಾಣಿಯೂ ಇಳುಕೊಳ್ಳನು.


ಈ ಸಾಕ್ಷಿಗಳ ಶವಗಳು ಮಹಾ ಪಟ್ಟಣದ ಬೀದಿಯಲ್ಲಿ ಬಿದ್ದಿರುವವು. ಆ ಪಟ್ಟಣಕ್ಕೆ ಗೂಢಾರ್ಥವಾಗಿ ಸೊದೋಮ್ ಎಂತಲೂ ಐಗುಪ್ತ ಎಂತಲೂ ಹೆಸರುಗಳುಂಟು; ಇವರ ಒಡೆಯನು ಸಹ ಅಲ್ಲಿಯೇ ಶಿಲುಬೆಗೆ ಹಾಕಲ್ಪಟ್ಟನು.


ಇಸ್ರಾಯೇಲ್ಯರ ದೇವರಾದ ಸೇನಾಧೀಶ್ವರ ಯೆಹೋವನು ಇಂತೆನ್ನುತ್ತಾನೆ - ಹೀಗಿರಲು, ನನ್ನ ಜೀವದಾಣೆ, ಸೊದೋವಿುನ ಗತಿಯೇ ಮೋವಾಬಿಗೂ ಆಗುವದು. ಗೊಮೋರದ ದುರ್ದಶೆಯೇ ಅಮ್ಮೋನ್ಯರಿಗೆ ಸಂಭವಿಸುವದು; ಆ ಪ್ರಾಂತಗಳು ಮುಳ್ಳುಗಿಡಗಳಿಂದಲೂ ಸೌಳುಗುಂಡಿಗಳಿಂದಲೂ ತುಂಬಿಕೊಂಡು ನಿತ್ಯನಾಶನಕ್ಕೆ ಈಡಾಗುವವು; ನನ್ನ ಪ್ರಜೆಯಲ್ಲಿ ಉಳಿದವರು ಅವುಗಳನ್ನು ಸೂರೆಮಾಡುವರು, ಅವು ನನ್ನ ಜನಶೇಷದವರಿಗೆ ಸ್ವಾಸ್ತ್ಯವಾಗುವವು.


ಸೊದೋಮ್‍ಗೊಮೋರಗಳನ್ನು ಕೆಡವಿದಂತೆ ನಾನು ನಿಮ್ಮ ಅನೇಕ ಪಟ್ಟಣಗಳನ್ನು ಕೆಡವಲು ಉರಿಯಿಂದ ಎಳೆದ ಕೊಳ್ಳಿಯ ಹಾಗಿದ್ದಿರಿ; ಹೀಗೂ ನೀವು ನನ್ನ ಕಡೆಗೆ ಹಿಂದಿರುಗಲಿಲ್ಲ ಎಂದು ಯೆಹೋವನು ನುಡಿಯುತ್ತಾನೆ.


ಮೂಲೆಗಲ್ಲಿಗಾಗಲಿ ಅಸ್ತಿವಾರಕ್ಕಾಗಲಿ ಯಾರೂ ನಿನ್ನಿಂದ ಕಲ್ಲನ್ನು ತೆಗೆಯರು, ನೀನು ನಿತ್ಯನಾಶನಕ್ಕೆ ಗುರಿಯಾಗುವಿ. ಇದು ಯೆಹೋವನ ನುಡಿ.


ಸೇನಾಧೀಶ್ವರನಾದ ಯೆಹೋವನು ನಮಗೆ ಕೊಂಚ ಜನವನ್ನೂ ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು. ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು.


ಎಲ್ಲಾ ಜನಾಂಗಗಳವರೂ ನಿಮ್ಮ ಆ ದೇಶವು ಯಾವ ವ್ಯವಸಾಯವಾದರೂ ಇಲ್ಲದೆ ಹುಲ್ಲಾದರೂ ಬೆಳೆಯದೆ ಹಾಳುಬಿದ್ದು ಯೆಹೋವನು ಮಹಾ ಕೋಪದಿಂದ ಕೆಡವಿದ ಸೊದೋಮ್ ಗೊಮೋರ ಅದ್ಮಾ ಚೆಬೋಯೀಮ್ ಎಂಬ ಪಟ್ಟಣಗಳ ಪ್ರದೇಶದಂತೆ ಸುಟ್ಟುಹೋದದ್ದಾಗಿ ಎಲ್ಲಾ ಕಡೆಗಳಲ್ಲಿಯೂ ಗಂಧಕ ಉಪ್ಪುಗಳಿಂದ ತುಂಬಿರುವದನ್ನು ಕಂಡು -


ಸೇನಾಧೀಶ್ವರನಾದ ಕರ್ತನು ನಮಗೆ ಸಂತಾನವನ್ನು ಉಳಿಸದೆ ಹೋಗಿದ್ದರೆ ಸೊದೋವಿುನ ಗತಿಯೇ ನಮಗಾಗುತ್ತಿತ್ತು, ಗೊಮೋರದ ದುರ್ದಶೆಯೇ ಸಂಭವಿಸುತ್ತಿತ್ತು ಎಂದು ಹೇಳುತ್ತಾನೆ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು