ಯೆರೆಮೀಯ 50:45 - ಕನ್ನಡ ಸತ್ಯವೇದವು J.V. (BSI)45 ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ; [ಮೃಗಗಳು] ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶನಕ್ಕೆ ಬೆದರುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201945 ಹೀಗಿರಲು ಯೆಹೋವನು ಬಾಬೆಲಿನ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನೂ, ಆತನು ಕಸ್ದೀಯರ ದೇಶವನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನೂ ಆಲಿಸಿರಿ, ಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವವು; ನಿಶ್ಚಯವಾಗಿ ಅವುಗಳ ಹುಲ್ಗಾವಲು ಅವುಗಳ ನಾಶಕ್ಕೆ ಬೆದರುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)45 ಹೀಗಿರಲು, ಸರ್ವೇಶ್ವರನು ಬಾಬಿಲೋನಿಯರ ವಿಷಯವಾಗಿ ಮಾಡಿಕೊಂಡಿರುವ ಆಲೋಚನೆಯನ್ನು, ಅದರ ಕಸ್ದೀಯರನ್ನು ಕುರಿತು ಸಂಕಲ್ಪಿಸಿರುವ ಉದ್ದೇಶವನ್ನು ಆಲಿಸಿರಿ: ಕಾಡುಮೃಗಗಳು ಹಿಂಡಿನ ಮರಿಗಳನ್ನು ಖಂಡಿತವಾಗಿ ಎಳೆದುಕೊಂಡು ಹೋಗುವುವು. ಅವುಗಳ ನಾಶಕ್ಕಾಗಿ ಹುಲ್ಲುಗಾವಲು ನಿಶ್ಚಯವಾಗಿ ಕಳವಳಪಡುವುದು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್45 ಯೆಹೋವನು ಬಾಬಿಲೋನಿನ ವಿರುದ್ಧ ಮಾಡಬೇಕೆಂದಿರುವುದನ್ನು ಕೇಳಿರಿ. “ಬಾಬಿಲೋನಿನ ಜನರ ವಿರುದ್ಧ ಯೆಹೋವನು ನಿಶ್ಚಯಿಸಿರುವುದನ್ನು ಕೇಳಿರಿ. ಶತ್ರುವು ಬಾಬಿಲೋನಿನ ಕುರಿಮರಿಗಳನ್ನು (ಜನರನ್ನು) ಕೊಂಡೊಯ್ಯುವನು. ಬಾಬಿಲೋನಿನ ಹುಲ್ಲುಗಾವಲುಗಳು ಸಂಭವಿಸಿದ ನಾಶನಕ್ಕೆ ಬೆದರುವವು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ45 ಆದ್ದರಿಂದ ಯೆಹೋವ ದೇವರು ಬಾಬಿಲೋನಿಗೆ ವಿರೋಧವಾಗಿ ಮಾಡಿದ ಆಲೋಚನೆಯನ್ನೂ, ಅವರು ಬಾಬಿಲೋನಿಯರ ದೇಶಕ್ಕೆ ವಿರೋಧವಾಗಿ ಮಾಡಿದ ಯೋಜನೆಗಳನ್ನೂ ಕೇಳಿರಿ; ಕಾಡುಮೃಗಗಳು ನಿಶ್ಚಯವಾಗಿ, ಹಿಂಡಿನ ಮರಿಗಳನ್ನು ಎಳೆದುಕೊಂಡು ಹೋಗುವವು; ಖಂಡಿತವಾಗಿ, ಅವುಗಳ ಹುಲ್ಲುಗಾವಲು ಅವುಗಳ ನಾಶನಕ್ಕಾಗಿ ಬೆದರುವುದು. ಅಧ್ಯಾಯವನ್ನು ನೋಡಿ |