ಯೆರೆಮೀಯ 50:5 - ಕನ್ನಡ ಸತ್ಯವೇದವು J.V. (BSI)5 ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ - ಬನ್ನಿರಿ, ಯೆಹೋವನನ್ನು ಆಶ್ರಯಿಸಿ ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ ಎಂದು ಹೇಳುವರು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 20195 ಚೀಯೋನಿಗೆ ಅಭಿಮುಖರಾಗಿ ಮಾರ್ಗವನ್ನು ವಿಚಾರಿಸಿ, ಬನ್ನಿರಿ, ಯೆಹೋವನನ್ನು ಆಶ್ರಯಿಸಿ, ಎಂದಿಗೂ ಮರೆಯದ ಶಾಶ್ವತವಾದ ಒಡಂಬಡಿಕೆಯನ್ನು ಆತನೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)5 ಸಿಯೋನಿಗೆ ಅಭಿಮುಖರಾಗಿ, ಮಾರ್ಗವನ್ನು ವಿಚಾರಿಸುತ್ತಾ, ‘ಬನ್ನಿ, ಸರ್ವೇಶ್ವರನನ್ನು ಆಶ್ರಯಿಸಿ, ಎಂದಿಗೂ ಮರೆಯಲಾಗದ ಶಾಶ್ವತ ಒಡಂಬಡಿಕೆಯನ್ನು ಅವರೊಂದಿಗೆ ಮಾಡಿಕೊಳ್ಳೋಣ’ ಎಂದು ಹೇಳುವರು. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್5 ಅವರು ಚೀಯೋನಿಗೆ ಹೋಗುವ ಮಾರ್ಗವನ್ನು ವಿಚಾರಿಸುವರು. ಆ ದಿಕ್ಕಿನಲ್ಲಿ ಹೋಗಲು ಪ್ರಾರಂಭಿಸುವರು. ‘ಬನ್ನಿ, ನಾವೆಲ್ಲರೂ ಯೆಹೋವನ ಆಶ್ರಯಪಡೆಯೋಣ. ಆತನೊಂದಿಗೆ ಶಾಶ್ವತವಾದ ಮತ್ತು ನಾವೆಂದೂ ಮರೆಯಲಾಗದ ಒಡಂಬಡಿಕೆಯನ್ನು ಮಾಡಿಕೊಳ್ಳೋಣ’ ಎಂದು ಅವರು ಹೇಳುವರು. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ5 ಚೀಯೋನಿನ ಕಡೆಗೆ ಅಭಿಮುಖರಾಗಿ ಅದರ ಮಾರ್ಗವನ್ನು ವಿಚಾರಿಸಿ ಬನ್ನಿ; ಮರೆತು ಹೋಗದ ನಿತ್ಯವಾದ ಒಡಂಬಡಿಕೆಯಿಂದ ಯೆಹೋವ ದೇವರನ್ನು ಸೇರಿಕೊಳ್ಳೋಣ, ಅನ್ನುವರು. ಅಧ್ಯಾಯವನ್ನು ನೋಡಿ |