Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:12 - ಕನ್ನಡ ಸತ್ಯವೇದವು J.V. (BSI)

12 ಬಾಬೆಲ್ ಕೋಟೆಗೆ ಎದುರಾಗಿ ಧ್ವಜವೆತ್ತಿರಿ, ಠಾಣ್ಯವನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ಚಿತ್ತಕ್ಕೆ ತಂದು ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

12 ಬಾಬೆಲ್ ಕೋಟೆಗೆ ಎದುರಾಗಿ ಧ್ವಜವನ್ನೆತ್ತಿರಿ, ಪಹರೆಯನ್ನು ಬಲಪಡಿಸಿರಿ, ಕಾವಲುಗಾರರನ್ನು ನಿಲ್ಲಿಸಿರಿ, ಹೊಂಚುಗಾರರನ್ನು ಗೊತ್ತುಮಾಡಿರಿ; ಯೆಹೋವನು ಬಾಬೆಲಿನವರ ವಿಷಯದಲ್ಲಿ ನುಡಿದದ್ದನ್ನು ನೆನಪಿಸಿಕೊಂಡು ನೆರವೇರಿಸಿದ್ದಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

12 ಬಾಬಿಲೋನಿನ ಕೋಟೆಗೆ ಎದುರಾಗಿ ಧ್ವಜವೆತ್ತಿರಿ. ಪಹರೆಯನ್ನು ಬಲಪಡಿಸಿರಿ. ಕಾವಲುಗಾರರನ್ನು ನಿಲ್ಲಿಸಿರಿ. ಹೊಂಚುಗಾರರನ್ನು ಗೊತ್ತುಮಾಡಿರಿ!’ ಸರ್ವೇಶ್ವರ ಸ್ವಾಮಿ ಬಾಬಿಲೋನಿನವರ ವಿಷಯದಲ್ಲಿ ನುಡಿದಿದ್ದನ್ನು ನೆನಪಿಗೆ ತಂದುಕೊಂಡು ನೆರವೇರಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

12 ಬಾಬಿಲೋನಿನ ಕೋಟೆಗೋಡೆಯ ವಿರುದ್ಧ ಧ್ವಜವನ್ನು ಎತ್ತಿ ಹಾರಿಸಿರಿ. ಹೆಚ್ಚಿನ ಸಂಖ್ಯೆಯಲ್ಲಿ ಕಾವಲುಗಾರರನ್ನು ಕರೆದುತನ್ನಿರಿ. ಯೋಧರನ್ನು ಅವರವರ ಸ್ಥಾನಗಳಲ್ಲಿ ನಿಲ್ಲಿಸಿರಿ. ಗುಪ್ತವಾಗಿ ಧಾಳಿ ಮಾಡುವುದಕ್ಕೆ ಸಿದ್ಧರಾಗಿರಿ. ಯೆಹೋವನು ತನ್ನ ಯೋಜನೆಗಳಂತೆ ಕಾರ್ಯ ನೆರವೇರಿಸುವನು. ಯೆಹೋವನು ಬಾಬಿಲೋನಿನ ಜನರ ವಿರುದ್ಧ ಹೇಳಿರುವಂತೆಯೇ ಮಾಡುವನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

12 ಬಾಬಿಲೋನಿನ ಗೋಡೆಯ ಮೇಲೆ ಧ್ವಜವನ್ನೆತ್ತಿರಿ; ಪಹರೆಯನ್ನು ಬಲಪಡಿಸಿರಿ; ಕಾವಲುಗಾರರನ್ನು ನಿಲ್ಲಿಸಿರಿ; ಹೊಂಚಿಕೊಳ್ಳುವವರನ್ನು ಸಿದ್ಧಮಾಡಿರಿ; ಏಕೆಂದರೆ ಯೆಹೋವ ದೇವರು ಬಾಬಿಲೋನಿನ ನಿವಾಸಿಗಳಿಗೆ ವಿರೋಧವಾಗಿ ತಾನು ಹೇಳಿದ್ದನ್ನು ಯೋಚಿಸಿದ್ದನ್ನು ಮಾಡಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:12
18 ತಿಳಿವುಗಳ ಹೋಲಿಕೆ  

ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ!


[ಶತ್ರುಗಳು] ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ ಬೋಳುಬೆಟ್ಟದ ಮೇಲೆ ಧ್ವಜವೆತ್ತಿರಿ, ಕೂಗಿ ಅವರನ್ನು ಕರೆಯಿರಿ, ಕೈಸನ್ನೆಮಾಡಿರಿ.


[ನಿನೆವೆಯೇ,] ಚದರಿಸುವವನು ನಿನಗೆ ಮುಖಾಮುಖಿಯಾಗಿ ಬಂದಿದ್ದಾನೆ; ಪೌಳಿಗೋಡೆಯನ್ನು ಕಾಯಿ, ದಾರಿಯ ಮೇಲೆ ಕಣ್ಣಿಡು, ನಿನ್ನ ಸೊಂಟವನ್ನು ಬಲಪಡಿಸಿಕೋ, ನಿನ್ನ ಶಕ್ತಿಯನ್ನು ಚೆನ್ನಾಗಿ ದೃಢಮಾಡಿಕೋ.


ದೇಶವೆಲ್ಲಾ ನೊಂದು ನಡುಗುತ್ತದೆ; ಏಕಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


ನಾನು ಸಕಲ ಜನಾಂಗಗಳನ್ನು ಕೂಡಿಸಿ ಯೆಹೋವನ ನ್ಯಾಯತೀರ್ಪಿನ ತಗ್ಗಿಗೆ ಬರಮಾಡಿ ಅಲ್ಲಿ ನನ್ನ ಜನರಿಗಾಗಿ, ನನ್ನ ಸ್ವಾಸ್ತ್ಯವಾದ ಇಸ್ರಾಯೇಲ್ ಪ್ರಜೆಗೋಸ್ಕರ ಅವುಗಳೊಂದಿಗೆ ವಿವಾದಮಾಡುವೆನು. ಅವು ನನ್ನ ಜನರನ್ನು ದೇಶದೇಶಗಳಿಗೆ ಚದರಿಸಿ ನನ್ನ ದೇಶವನ್ನು ಹಂಚಿಕೊಂಡಿವೆಯಷ್ಟೆ.


ಯೆಹೋವನು ತನ್ನ ಸಂಕಲ್ಪವನ್ನು ಸಿದ್ಧಿಗೆ ತಂದು ತಾನು ಪುರಾತನಕಾಲದಲ್ಲಿ ನುಡಿದ ಮಾತನ್ನು ಈಡೇರಿಸಿದ್ದಾನೆ; ಆತನು ಕರುಣಿಸದೆ [ನಿನ್ನನ್ನು] ಕೆಡವಿ ನಿನ್ನ ವೈರಿಗಳಿಗೆ ಆನಂದವಾಗುವಂತೆ ಮಾಡಿ ನಿನ್ನ ವಿರೋಧಿಗಳ ಕೊಂಬನ್ನು ಎತ್ತಿದ್ದಾನೆ.


ದೇಶದಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸನ್ನಾಹಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ವಿುನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಪತಿಯನ್ನು ನೇವಿುಸಿರಿ, ಅಶ್ವಬಲವನ್ನು ಬಿರುಸಾದ ವಿುಡಿತೆದಂಡಿನೋಪಾದಿಯಲ್ಲಿ ಬರಮಾಡಿರಿ.


ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಯಾವ ಜ್ಞಾನವೂ ಯಾವ ವಿವೇಕವೂ ಯಾವ ಆಲೋಚನೆಯೂ ಯೆಹೋವನೆದುರಿಗೆ ನಿಲ್ಲುವದಿಲ್ಲ.


ಆಯಿ ಎಂಬ ಊರಿನ ಅರಸನು ಬೆಳಿಗ್ಗೆ ಇದನ್ನು ತಿಳಿದು ತ್ವರೆಯಿಂದ ಜನರೆಲ್ಲರ ಸಹಿತವಾಗಿ ಇಸ್ರಾಯೇಲ್ಯರ ಸಂಗಡ ಯುದ್ಧಮಾಡುವದಕ್ಕೆ ಹೊರಟನು. ಅವನೂ ಅವನ ಜನರೂ ಅರಾಬಾ ಎಂಬ ತಗ್ಗಾದ ಪ್ರದೇಶವು ಕಾಣುವ ಸ್ಥಳಕ್ಕೆ ಬಂದರು. ಪಟ್ಟಣದ ಹಿಂಭಾಗದಲ್ಲಿ ಹೊಂಚಿನೋಡುತ್ತಿರುವದು ಅವನಿಗೆ ಗೊತ್ತಿದ್ದಿಲ್ಲ.


ಇದಕ್ಕಾಗಿ ಭೂಲೋಕವು ಪ್ರಲಾಪಿಸುವದು, ಮೇಲೆ ಆಕಾಶವು ಕಪ್ಪಾಗುವದು; ನಾನು ನುಡಿದಿದ್ದೇನೆ, ಪಶ್ಚಾತ್ತಾಪಪಡೆನು; ಉದ್ದೇಶಿಸಿದ್ದೇನೆ, ಹಿಂದೆಗೆಯೆನು.


ಯೆಹೋವನು ತನ್ನ ಹೃದಯಾಲೋಚನೆಗಳನ್ನು ನಡಿಸಿ ನೆರವೇರಿಸುವ ತನಕ ಆತನ ರೋಷವು ಹಿಂದಿರುಗದು; ಕಟ್ಟಕಡೆಯ ದಿನಗಳಲ್ಲಿ ನೀವು ಇದನ್ನು ಸ್ಪಷ್ಟವಾಗಿ ಗ್ರಹಿಸುವಿರಿ.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.


ಅವನು ಜನಾಂಗಗಳಿಗೆ ಧ್ವಜವನ್ನೆತ್ತಿ ಇಸ್ರಾಯೇಲ್ಯರಲ್ಲಿ ಸೆರೆಗೆ ಒಯ್ಯಲ್ಪಟ್ಟವರನ್ನೂ ಯೆಹೂದದಿಂದ ಚದರಿದವರನ್ನೂ ಭೂವಿುಯ ಚತುರ್ದಿಕ್ಕುಗಳಿಂದಲೂ ಕೂಡಿಸಿಕೊಳ್ಳುವನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು