Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:16 - ಕನ್ನಡ ಸತ್ಯವೇದವು J.V. (BSI)

16 ಆತನ ಗರ್ಜನೆಗೆ ಆಕಾಶದಲ್ಲಿ ನೀರು ಮೊರೋ ಎನ್ನುತ್ತದೆ; ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

16 ಆತನ ಗರ್ಜನೆಗೆ ಆಕಾಶದಿಂದ ನೀರು ಬೋರ್ಗರೆದು ಸುರಿಯುತ್ತದೆ; ಆತನು ಭೂಮಿಯ ಕಟ್ಟಕಡೆಯಿಂದ ಮೋಡಗಳನ್ನು ಮೇಲೇರುವಂತೆ ಮಾಡುತ್ತಾನೆ; ಮಳೆಗೋಸ್ಕರ ಮಿಂಚನ್ನು ಹೊಳೆಯಮಾಡುತ್ತಾನೆ; ತನ್ನ ಭಂಡಾರದಿಂದ ಗಾಳಿಯನ್ನು ಬೀಸುವಂತೆ ಮಾಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

16 ಆತನ ಘರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ ಭುವಿಯ ಕಟ್ಟಕಡೆಯಿಂದ ಮೋಡ ಮೇಲೇರುತ್ತದೆ ಮಳೆಗೋಸ್ಕರ ಮಿಂಚು ಹೊಳೆಯುತ್ತದೆ ಆತನ ಭಂಡಾರದಿಂದ ಗಾಳಿ ಬೀಸುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

16 ಆತನು ಗರ್ಜಿಸಿದಾಗ ಸಮುದ್ರದ ನೀರು ಭೋರ್ಗರೆಯುತ್ತದೆ. ಆತನು ಇಡೀ ಭೂಮಂಡಲದಿಂದ ಮೋಡಗಳು ಮೇಲೆ ಹೋಗುವಂತೆ ಮಾಡುತ್ತಾನೆ. ಆತನು ಮಳೆಯ ಜೊತೆ ಮಿಂಚನ್ನು ಕಳುಹಿಸುತ್ತಾನೆ. ತನ್ನ ಭಂಡಾರದಿಂದ ಗಾಳಿಯನ್ನು ಹೊರಗೆ ಬಿಡುತ್ತಾನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

16 ಅವರ ಗರ್ಜನೆಗೆ ಆಕಾಶದಲ್ಲಿನ ನೀರು ಭೋರ್ಗರೆಯುತ್ತದೆ, ಅವರು ಭೂಮಿಯ ಕಟ್ಟಕಡೆಗಳಿಂದ ಮೋಡಗಳನ್ನು ಏಳುವಂತೆ ಮಾಡುತ್ತಾರೆ. ಮಳೆಗೋಸ್ಕರ ಮಿಂಚನ್ನು ಉಂಟುಮಾಡುತ್ತಾರೆ; ತಮ್ಮ ಭಂಡಾರದಿಂದ ಗಾಳಿಯನ್ನು ಬೀಸಮಾಡುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:16
24 ತಿಳಿವುಗಳ ಹೋಲಿಕೆ  

ಆತನು ಭೂವಿುಯ ಕಟ್ಟಕಡೆಯಿಂದ ಮೋಡಗಳನ್ನು ಏರಮಾಡುತ್ತಾನೆ; ಮಳೆಗೋಸ್ಕರ ವಿುಂಚನ್ನು ಹೊಳೆಯಮಾಡುತ್ತಾನೆ; ತನ್ನ ಉಗ್ರಾಣದಿಂದ ಗಾಳಿಯನ್ನು ಬೀಸಮಾಡುತ್ತಾನೆ.


ಬಳಿಕ ಯೆಹೋವನು ಬಿರುಗಾಳಿಯನ್ನು ಸಮುದ್ರದ ಮೇಲೆ ಬಲವಾಗಿ ಬೀಸಲು ಸಮುದ್ರದಲ್ಲಿ ದೊಡ್ಡ ತುಫಾನು ಎದ್ದು ಹಡಗು ಒಡೆದುಹೋಗುವ ಹಾಗಾಯಿತು.


ಯೆಹೋವನು ಆಕಾಶದಲ್ಲಿ ಗುಡುಗಿದನು; ಪರಾತ್ಪರನು ಧ್ವನಿಕೊಟ್ಟನು. ಇಗೋ, ಕಲ್ಮಳೆಯೂ ಉರಿಗೆಂಡಗಳೂ.


ಸೂರ್ಯನು ಹುಟ್ಟಿದಾಗ ದೇವರು ಬಿಸಿಯಾದ ಮೂಡಣ ಗಾಳಿಯನ್ನು ಏರ್ಪಡಿಸಿದನು; ಬಿಸಿಲು ಯೋನನ ತಲೆಗೆ ಹೊಡೆಯಲು ಅವನು ಮೂರ್ಛೆ ಹೋಗುವವನಾಗಿ ನಾನು ಬದುಕುವದಕ್ಕಿಂತ ಸಾಯುವದೇ ಲೇಸು ಎಂದು ಮರಣವನ್ನು ಕೇಳಿಕೊಂಡನು.


ಯೆಹೋವನು ಇಂತೆನ್ನುತ್ತಾನೆ - ಇಸ್ರಾಯೇಲ್ಯರೇ, ನೀವು ನನ್ನ ಗಣನೆಯಲ್ಲಿ ಕೂಷ್ಯರ ಹಾಗಿದ್ದೀರಲ್ಲವೋ; ನಾನು ಇಸ್ರಾಯೇಲ್ಯರನ್ನು ಐಗುಪ್ತದೇಶದಿಂದ, ಫಿಲಿಷ್ಟಿಯರನ್ನು ಕಫ್ತೋರಿನಿಂದ, ಅರಾಮ್ಯರನ್ನು ಕೀರಿನಿಂದ [ಏಕ ರೀತಿಯಾಗಿ] ಬರಮಾಡಲಿಲ್ಲವೇ?


ಆಗ ಕೆರೂಬಿಗಳ ರೆಕ್ಕೆಗಳ ಶಬ್ದವು ಸರ್ವಶಕ್ತನಾದ ದೇವರು ಮಾತಾಡುವ ಧ್ವನಿಯಷ್ಟು ಗಂಭೀರವಾಗಿ ಹೊರಗಣ ಪ್ರಾಕಾರದ ಪರ್ಯಂತವೂ ಕೇಳಿಸಿತು.


ಆತನು ಅಪ್ಪಣೆಕೊಡಲು ಅವು ಕರಗುತ್ತವೆ; ತನ್ನ ಗಾಳಿಯನ್ನು ಬೀಸಮಾಡಲು ನೀರು ಹರಿಯುತ್ತದೆ.


ನೀನು ಗದರಿಸಲು ಅದು ಓಡಿಹೋಯಿತು; ನಿನ್ನ ಗರ್ಜನೆಗೆ ಹೆದರಿ ನೀನು ನೇವಿುಸಿದ ಸ್ಥಳಕ್ಕೆ ಹೋಗಲು


ಆತನು ಗಗನಮಂಡಲದಲ್ಲಿ ಮೂಡಣ ಗಾಳಿಯನ್ನುಂಟುಮಾಡಿ ಪ್ರತಾಪದಿಂದ ತೆಂಕಣ ಗಾಳಿಯನ್ನೂ ಹೊಡೆದುಕೊಂಡು ಬಂದು


ಅನಾದಿಕಾಲದಿಂದಿರುವ ಮಹೋನ್ನತಾಕಾಶದಲ್ಲಿ ವಾಹನಾರೂಢನಾಗಿರುವಾತನನ್ನು ಸ್ತುತಿಸಿರಿ. ಕೇಳಿರಿ; ಆತನ ಗರ್ಜನೆಯು ಮಹಾಘೋರವಾದದ್ದು.


ಜನಾಂಗಗಳು ಕಳವಳಗೊಂಡವು; ರಾಜ್ಯಗಳು ತತ್ತರಿಸಿದವು. ಆತನು ಗರ್ಜಿಸಲು ಭೂಲೋಕವೆಲ್ಲಾ ಕರಗಿಹೋಯಿತು.


ನಿನ್ನ ಕೈಯೂ ದೇವರ ಕೈಯೂ ಸಮವೋ? ದೇವರ ಧ್ವನಿಯಂತೆ ಗುಡುಗಬಲ್ಲಿಯಾ?


ನಾನು ಇಕ್ಕಟ್ಟಿನ ಕಾಲಕ್ಕಾಗಿಯೂ ಯುದ್ಧಕದನಗಳ ದಿನಕ್ಕಾಗಿಯೂ ಇಟ್ಟುಕೊಂಡಿರುವ


ಆತನು ದಂಡನೆಗಾಗಲಿ ತನ್ನ ಭೂವಿುಯ ಹಿತಕ್ಕಾಗಲಿ ಕೃಪೆದೋರುವದಕ್ಕಾಗಲಿ ಆ ಮೇಘಗಳನ್ನು ಬರಮಾಡುವನು.


ಮೋಶೆ ಸಮುದ್ರದ ಮೇಲೆ ಕೈಚಾಚಿದಾಗ ಯೆಹೋವನು ಆ ರಾತ್ರಿಯೆಲ್ಲಾ ಮೂಡಣ ದಿಕ್ಕಿನಿಂದ ಬಲವಾದ ಬಿರುಗಾಳಿಯನ್ನು ಬೀಸುವಂತೆ ಮಾಡಿ ಸಮುದ್ರದ ನೀರನ್ನು ಒಂದು ಕಡೆಗೆ ನೂಕಿ ಅದರ ತಳದಲ್ಲಿ ಒಣನೆಲವು ಕಾಣಿಸುವಂತೆ ಮಾಡಿದನು. ನೀರು ವಿಭಾಗವಾಯಿತು.


ಯೆಹೋವನು ಪಶ್ಚಿಮದಿಂದ ಬಿರುಗಾಳಿ ಬೀಸುವಂತೆ ಮಾಡಿದನು; ಅದು ಆ ವಿುಡಿತೆಗಳನ್ನು ಎತ್ತಿಕೊಂಡು ಹೋಗಿ ಕೆಂಪುಸಮುದ್ರದೊಳಗೆ ಹಾಕಿಬಿಟ್ಟಿತು. ಐಗುಪ್ತದೇಶದ ಮೇರೆಗಳೊಳಗೆ ಒಂದು ವಿುಡಿತೆಯೂ ನಿಲ್ಲಲಿಲ್ಲ.


ಮೋಶೆ ತನ್ನ ಕೋಲನ್ನು ಐಗುಪ್ತದೇಶದ ಮೇಲೆ ಚಾಚಿದಾಗ ಯೆಹೋವನು ಆ ಹಗಲಿರುಳು ಮೂಡಣದಿಕ್ಕಿನಿಂದ ಗಾಳಿಯನ್ನು ಬೀಸಮಾಡಿದನು. ಹೊತ್ತಾರೆ ಆ ಗಾಳಿಯ ದೆಸೆಯಿಂದ ವಿುಡಿತೆಗಳು ಬಂದಿದ್ದವು.


ತರುವಾಯ ದೇವರು ನೋಹನನ್ನೂ ಅವನ ಸಂಗಡ ನಾವೆಯಲ್ಲಿದ್ದ ಎಲ್ಲಾ ಮೃಗಪಶುಗಳನ್ನೂ ನೆನಪಿಗೆ ತಂದುಕೊಂಡು ಭೂಲೋಕದ ಮೇಲೆ ಗಾಳಿ ಬೀಸುವಂತೆ ಮಾಡಲಾಗಿ ನೀರು ತಗ್ಗಿತು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು