Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:17 - ಕನ್ನಡ ಸತ್ಯವೇದವು J.V. (BSI)

17 ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

17 ಎಲ್ಲರೂ ತಿಳಿವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿಮಿತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

17 ಇದರ ಮುಂದೆ ಜನರು ತಿಳುವಳಿಕೆಯಿಲ್ಲದ ಪಶುಪ್ರಾಯರು ತಾನು ಕೆತ್ತಿದ ವಿಗ್ರಹಕ್ಕಾಗಿ ಹೇಸುವನು ಪ್ರತಿಯೊಬ್ಬ ಅಕ್ಕಸಾಲಿಗನು. ಪೊಳ್ಳು, ಶ್ವಾಸವಿಲ್ಲದವುಗಳು, ಅವನು ಎರಕಹೊಯ್ದ ಪುತ್ತಳಿಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

17 ಆದರೆ ಜನರು ಬುದ್ಧಿಹೀನರಾಗಿ ದೇವರ ಕಾರ್ಯವನ್ನು ತಿಳಿಯದವರಾಗಿದ್ದಾರೆ. ಕುಶಲಕೆಲಸಗಾರರು ಸುಳ್ಳುದೇವರುಗಳ ಪ್ರತಿಮೆಗಳನ್ನು ಮಾಡುತ್ತಾರೆ. ಆ ಪ್ರತಿಮೆಗಳು ಕೇವಲ ಸುಳ್ಳುದೇವರುಗಳೇ. ಆ ಕೆಲಸಗಾರರು ಎಷ್ಟು ಮೂರ್ಖರೆಂಬುದನ್ನು ಅವು ತೋರಿಸುತ್ತವೆ. ಆ ಪ್ರತಿಮೆಗಳು ಜೀವಂತವಾಗಿರುವದಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

17 “ಪ್ರತಿ ಮನುಷ್ಯನು ತಿಳುವಳಿಕೆ ಇಲ್ಲದವನೂ ಬುದ್ಧಿಹೀನನೂ ಆಗಿದ್ದಾನೆ; ತಾನು ಕೆತ್ತಿದ ವಿಗ್ರಹಕ್ಕೋಸ್ಕರ ಪ್ರತಿಯೊಬ್ಬ ಅಕ್ಕಸಾಲಿಗನೂ ನಾಚಿಕೆಪಡುತ್ತಾನೆ; ಏಕೆಂದರೆ ಅವರ ಎರಕದ ವಿಗ್ರಹಗಳು ಸುಳ್ಳೇ; ಅವುಗಳಲ್ಲಿ ಉಸಿರೇ ಇಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:17
12 ತಿಳಿವುಗಳ ಹೋಲಿಕೆ  

ಎಲ್ಲರೂ ತಿಳುವಳಿಕೆಯಿಲ್ಲದೆ ಪಶುಪ್ರಾಯರಾಗಿದ್ದಾರೆ; ತಾನು ಕೆತ್ತಿದ ವಿಗ್ರಹದ ನಿವಿುತ್ತ ಪ್ರತಿಯೊಬ್ಬ ಅಕ್ಕಸಾಲಿಗನೂ ಅವಮಾನಕ್ಕೆ ಗುರಿಯಾಗುವನು; ಅವನು ಎರಕ ಹೊಯ್ದ ಪುತ್ತಳಿಯು ಸುಳ್ಳು, ಅವುಗಳಲ್ಲಿ ಶ್ವಾಸವೇ ಇಲ್ಲ.


ಮನುಷ್ಯರಲ್ಲಿ ತನ್ನ ಸಾನ್ನಿಧ್ಯವನ್ನು ಅಪೇಕ್ಷಿಸುವ ಬುದ್ಧಿವಂತರು ಇದ್ದಾರೋ ಎಂದು ಯೆಹೋವನು ಆಕಾಶದಿಂದ ಮನುಷ್ಯರನ್ನು ನೋಡಲಾಗಿ


ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಅವುಗಳನ್ನು ಮಾಡುವವರೂ ಅವುಗಳಲ್ಲಿ ಭರವಸವಿಡುವವರೂ ಅವುಗಳಂತೆಯೇ.


ಅವು ಬಾಯಿದ್ದರೂ ಮಾತಾಡುವದಿಲ್ಲ; ಕಣ್ಣಿದ್ದರೂ ನೋಡುವದಿಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು