Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:25 - ಕನ್ನಡ ಸತ್ಯವೇದವು J.V. (BSI)

25 ಯೆಹೋವನು ಇಂತೆನ್ನುತ್ತಾನೆ - ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಜರಿಯ ಮೇಲಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

25 ಯೆಹೋವನು ಇಂತೆನ್ನುತ್ತಾನೆ, “ಆಹಾ, ಲೋಕವನ್ನೆಲ್ಲಾ ಹಾಳುಮಾಡುವ ನಾಶಕರ ಪರ್ವತವೇ, ನಾನು ನಿನ್ನ ವಿರುದ್ಧನಾಗಿದ್ದೇನೆ; ನಾನು ನಿನ್ನ ಮೇಲೆ ಕೈಮಾಡಿ ನಿನ್ನನ್ನು ಮೇಲಿನಿಂದ ಕೆಳಕ್ಕೆ ಉರುಳಿಸುವೆನು, ಸುಟ್ಟ ಬೆಟ್ಟವನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

25 “ಲೋಕವನ್ನೆಲ್ಲಾ ನಾಶಮಾಡುವ ಎಲೈ ನಾಶಕ ಪರ್ವತವೇ, ನಾನು ನಿನಗೆ ವಿರುದ್ಧನಾಗಿದ್ದೇನೆ. ನಿನ್ನ ಮೇಲೆ ಕೈಮಾಡಿ, ನಿನ್ನನ್ನು ಬಂಡೆಯ ಮೇಲಿಂದ ಕೆಳಕ್ಕೆ ಉರುಳಿಸುವೆನು. ಸುಟ್ಟ ಬೆಟ್ಟವನ್ನಾಗಿಸುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

25 ಯೆಹೋವನು ಹೀಗೆನ್ನುತ್ತಾನೆ: “ಬಾಬಿಲೋನೇ, ನೀನು ಇಡೀ ದೇಶವನ್ನು ನಾಶಪಡಿಸುವ ಜ್ವಾಲಾಮುಖಿಯಂತಿರುವೆ. ಆದರೆ ನಾನು ನಿನಗೆ ವಿರುದ್ಧವಾಗಿ ತಿರುಗಿದ್ದೇನೆ. ನಾನು ನಿನ್ನನ್ನು ಸುಟ್ಟುಹೋದ ಪರ್ವತವನ್ನಾಗಿ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

25 “ಲೋಕವನ್ನೆಲ್ಲಾ ನಾಶಮಾಡುವ ನಾಶಕ ಪರ್ವತವೇ, ಇಗೋ, ನಾನು ನಿನಗೆ ವಿರೋಧವಾಗಿದ್ದೇನೆ” ಎಂದು ಯೆಹೋವ ದೇವರು ಹೇಳುತ್ತಾರೆ. “ನಿನ್ನ ಮೇಲೆ ನನ್ನ ಕೈಯನ್ನು ಚಾಚಿ, ಬಂಡೆಗಳ ಮೇಲಿನಿಂದ ನಿನ್ನನ್ನು ಹೊರಳಿಸಿ, ನಿನ್ನನ್ನು ಸುಟ್ಟ ಬೆಟ್ಟವಾಗಿ ಮಾಡುತ್ತೇನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:25
18 ತಿಳಿವುಗಳ ಹೋಲಿಕೆ  

ಎರಡನೆಯ ದೇವದೂತನು ತುತೂರಿಯನ್ನೂದಿದಾಗ ಬೆಂಕಿಹತ್ತಿ ಉರಿಯುವ ದೊಡ್ಡ ಬೆಟ್ಟವೋ ಎಂಬಂತಿರುವ ಒಂದು ವಸ್ತು ಸಮುದ್ರದಲ್ಲಿ ಹಾಕಲ್ಪಟ್ಟಿತು. ಆಗ ಸಮುದ್ರದೊಳಗೆ ಮೂರರಲ್ಲಿ ಒಂದು ಭಾಗ ರಕ್ತವಾಯಿತು;


ಎಂಬೀ ಮಾತನ್ನು ಯೆಹೋವನು ಜೆರುಬ್ಬಾಬೆಲನಿಗೆ ದಯಪಾಲಿಸಿದ್ದಾನೆ. ದೊಡ್ಡ ಬೆಟ್ಟವೇ, ನೀನು ಯಾರು? ಜೆರುಬ್ಬಾಬೆಲನ ಮುಂದೆ ನೆಲಸಮವಾಗುವಿ; ಅವನು ಕಲಶದ ಕಲ್ಲನ್ನು ಕೋಲಾಹಲದೊಡನೆ ಮೆರವಣಿಗೆಮಾಡುವನು; ಇದರ ಮೇಲೆ ದೇವರ ದಯೆಯಿರಲಿ, ದೇವರ ದಯೆಯಿರಲಿ ಎಂಬ ಜನಘೋಷವಾಗುವದು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಇಂತೆನ್ನುತ್ತಾನೆ - ಆಹಾ, ಸೊಕ್ಕಿನ ರಾಜ್ಯವೇ! ನಾನು ನಿನಗೆ ವಿರುದ್ಧನು; ನಿನಗೆ ಹೊತ್ತು ಬಂದಿದೆ, ನಿನ್ನನ್ನು ದಂಡಿಸತಕ್ಕ ಕಾಲ ಸಂಭವಿಸಿದೆ.


ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ - ಬಾಬೆಲಿನ ಗಾತ್ರವಾದ ಪೌಳಿ ಗೋಡೆಯು ಸಂಪೂರ್ಣವಾಗಿ ನೆಲಸಮವಾಗುವದು, ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವದು.


ಬಾಬೆಲು ಆಕಾಶದ ತನಕ ಬೆಳೆದು ಎತ್ತರವಾಗಿಯೂ ಬಲವಾಗಿಯೂ ಇರುವ ತನ್ನ ಕೋಟೆಕೊತ್ತಲಗಳನ್ನು ಭದ್ರಪಡಿಸಿದರೂ ಹಾಳುಮಾಡುವವರು ನನ್ನ ಅಪ್ಪಣೆಯಿಂದ ಅದರ ಮೇಲೆ ಬೀಳುವರು. ಇದು ಯೆಹೋವನ ನುಡಿ.


[ಶತ್ರುಗಳು] ಬಂದು ಪ್ರಭುಗಳ ಪುರದ್ವಾರಗಳಲ್ಲಿ ನುಗ್ಗುವಂತೆ ಬೋಳುಬೆಟ್ಟದ ಮೇಲೆ ಧ್ವಜವೆತ್ತಿರಿ, ಕೂಗಿ ಅವರನ್ನು ಕರೆಯಿರಿ, ಕೈಸನ್ನೆಮಾಡಿರಿ.


ನನ್ನ ಮಹಿಮೆಯು ಪ್ರಸಿದ್ಧಿಗೆ ಬರುವಂತೆ ನನ್ನ ಸಾಮರ್ಥ್ಯಬಲದಿಂದ ರಾಜನಿವಾಸಕ್ಕಾಗಿ ನಾನು ಕಟ್ಟಿಸಿಕೊಂಡಿರುವದು ಇಗೋ, ಮಹಾಪಟ್ಟಣವಾದ ಈ ಬಾಬೆಲ್ ಎಂದು ಕೊಚ್ಚಿಕೊಂಡನು.


ಬಾಬೆಲು ಯೆಹೋವನ ಕೈಯಲ್ಲಿನ ಹೊನ್ನಿನ ಪಾತ್ರೆ; ಲೋಕದವರೆಲ್ಲರೂ ಅದರಲ್ಲಿ ಕುಡಿದು ಮತ್ತರಾದರು; ಜನಾಂಗಗಳು ಅದರಲ್ಲಿನ ದ್ರಾಕ್ಷಾರಸವನ್ನು ಕುಡಿದು ಹುಚ್ಚಾದವು.


ಇಗೋ, ನಾನು ಬಡಗಣ ಜನಾಂಗಗಳನ್ನೆಲ್ಲಾ ಕರೆಯಿಸಿ ಬಾಬೆಲಿನ ಅರಸನೂ ನನ್ನ ಸೇವಕನೂ ಆದ ನೆಬೂಕದ್ನೆಚ್ಚರನನ್ನು ಬರಮಾಡಿ ಇವರೆಲ್ಲರನ್ನು ಈ ದೇಶದ ಮೇಲೂ ಇದರ ನಿವಾಸಿಗಳ ಮೇಲೂ ಸುತ್ತಲಿನ ಸಕಲ ಜನಾಂಗಗಳ ಮೇಲೂ ಬೀಳಿಸಿ ಅವುಗಳನ್ನು ತುಂಬಾ ಹಾಳುಗೈದು ಬೆರಗಿನ ಸಿಳ್ಳಿಗೆ ಗುರಿಪಡಿಸಿ ನಿತ್ಯನಾಶನಕ್ಕೆ ಈಡುಮಾಡುವೆನು.


ಒಂದು ಪಟ್ಟಣವನ್ನೂ ಆಕಾಶವನ್ನು ಮುಟ್ಟುವ ಗೋಪುರವನ್ನೂ ಕಟ್ಟಿ ದೊಡ್ಡ ಹೆಸರನ್ನು ಪಡೆಯೋಣ; ಹೀಗೆ ಮಾಡಿದರೆ ಭೂವಿುಯ ಮೇಲೆಲ್ಲಾ ಚದರುವದಕ್ಕೆ ಆಸ್ಪದವಾಗುವದಿಲ್ಲ ಅಂದುಕೊಂಡರು. ಕಟ್ಟುವಾಗ ಕಲ್ಲಿಗೆ ಬದಲಾಗಿ ಇಟ್ಟಿಗೆಯನ್ನೂ ಸುಣ್ಣಕ್ಕೆ ಬದಲಾಗಿ ಕಲ್ಲರಗನ್ನೂ ಉಪಯೋಗಿಸಿದರು.


ಆದರೂ ಕರ್ತನ ದಿನವು ಕಳ್ಳನು ಬರುವಂತೆ ಬರುತ್ತದೆ. ಆ ದಿನದಲ್ಲಿ ಆಕಾಶಮಂಡಲವು ಮಹಾಘೋಷದಿಂದ ಇಲ್ಲದೆ ಹೋಗುವದು, ಸೂರ್ಯಚಂದ್ರ ನಕ್ಷತ್ರಗಳು ಉರಿದು ಲಯವಾಗಿ ಹೋಗುವವು, ಭೂವಿುಯೂ ಅದರಲ್ಲಿರುವ ಕೆಲಸಗಳೂ ಸುಟ್ಟುಹೋಗುವವು.


ನಾನು ಇಕ್ಕಟ್ಟಿನ ದಾರಿಯಲ್ಲಿ ನಡೆಯುವಾಗ ನನ್ನನ್ನು ಚೈತನ್ಯಗೊಳಿಸುವಿ; ನನ್ನ ಶತ್ರುಗಳ ಕೋಪಕ್ಕೆ ವಿರೋಧವಾಗಿ ನಿನ್ನ ಕೈ ಚಾಚುವಿ; ನಿನ್ನ ಬಲಗೈ ನನ್ನನ್ನು ರಕ್ಷಿಸುವದು.


ಸೇನಾಧೀಶ್ವರನಾದ ಯೆಹೋವನೆಂಬ ಕರ್ತನು ಕಸ್ದೀಯರ ದೇಶದಲ್ಲಿ ನಿರ್ವಹಿಸಬೇಕಾದ ಕಾರ್ಯವೊಂದುಂಟು; ಅದಕ್ಕಾಗಿ ಯೆಹೋವನು ತನ್ನ ಆಯುಧ ಶಾಲೆಯನ್ನು ತೆರೆದು ತನ್ನ ರೋಷದ ಅಸ್ತ್ರಶಸ್ತ್ರಗಳನ್ನು ಹೊರಗೆ ತೆಗೆದಿದ್ದಾನೆ.


ಎಪ್ಪತ್ತು ವರುಷಗಳ ತರುವಾಯ ನಾನು ಬಾಬೆಲಿನ ಅರಸನನ್ನೂ ಕಸ್ದೀಯರ ದೇಶವನ್ನೂ ಆ ಜನಾಂಗದವರನ್ನೂ ಅವರ ದ್ರೋಹಕ್ಕಾಗಿ ದಂಡಿಸಿ ಆ ದೇಶವನ್ನು ನಿತ್ಯನಾಶನಕ್ಕೆ ಗುರಿಮಾಡುವೆನು. ಇದು ಯೆಹೋವನ ನುಡಿ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು