Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:28 - ಕನ್ನಡ ಸತ್ಯವೇದವು J.V. (BSI)

28 ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದಕ್ಕೆ ವಿರುದ್ಧವಾಗಿ ಸನ್ನಾಹಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

28 ಜನಾಂಗಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಅಧೀನದಲ್ಲಿರುವ ಸಂಪೂರ್ಣ ದೇಶದವರು, ಇವರೆಲ್ಲರನ್ನೂ ಅದರ ವಿರುದ್ಧವಾಗಿ ಎಬ್ಬಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

28 ರಾಷ್ಟ್ರಗಳು, ಮೇದ್ಯರ ಅರಸರು, ಅಧಿಪತಿಗಳು, ಅಧಿಕಾರಿಗಳು, ಅವರ ಕೈಕೆಳಗಿರುವ ಎಲ್ಲ ನಾಡಿನವರು, ಇವರೆಲ್ಲರನ್ನು ಬಾಬಿಲೋನಿಗೆ ವಿರುದ್ಧ ಸಜ್ಜುಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

28 ಅದರ ವಿರುದ್ಧ ಯುದ್ಧಕ್ಕಾಗಿ ಜನಾಂಗಗಳನ್ನು ಸಿದ್ಧಮಾಡಿರಿ. ಮೇದ್ಯರ ರಾಜರನ್ನು ಸಿದ್ಧಮಾಡಿರಿ. ಅವರ ಅಧಿಪತಿಗಳನ್ನು ಮತ್ತು ಎಲ್ಲಾ ಮುಖ್ಯ ಅಧಿಕಾರಿಗಳನ್ನು ಸಿದ್ಧಗೊಳಿಸಿರಿ. ಬಾಬಿಲೋನಿನ ವಿರುದ್ಧ ಯುದ್ಧಮಾಡಲು ಅವರು ಆಳುವ ಎಲ್ಲಾ ದೇಶಗಳನ್ನು ಸನ್ನದ್ಧಗೊಳಿಸಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

28 ಅದಕ್ಕೆ ವಿರೋಧವಾಗಿ ಜನಾಂಗಗಳನ್ನೂ, ಮೇದ್ಯರ ಅರಸರನ್ನೂ, ಅದರ ಅಧಿಪತಿಗಳನ್ನೂ, ಅಧಿಕಾರಿಗಳನ್ನೂ, ಅವನ ರಾಜ್ಯದ ದೇಶವನ್ನೆಲ್ಲಾ ಸಿದ್ಧಮಾಡಿರಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:28
18 ತಿಳಿವುಗಳ ಹೋಲಿಕೆ  

ಯೆಹೋವನು ಬಾಬೆಲನ್ನು ಹಾಳುಮಾಡಬೇಕೆಂದು ಉದ್ದೇಶಿಸಿ ಮೇದ್ಯರ ಅರಸರು ಅದನ್ನು ನಾಶಮಾಡುವಂತೆ ಅವರ ಮನಸ್ಸನ್ನು ಪ್ರೇರಿಸಿದ್ದಾನೆ; ಆ ನಾಶನವು ಯೆಹೋವನು ತನ್ನ ಆಲಯವನ್ನು ಕೆಡವಿದವರಿಗೆ ಮಾಡಬೇಕೆಂದಿದ್ದ ಪ್ರತೀಕಾರವೇ; [ಮೇದ್ಯರೇ,] ಬಾಣಗಳನ್ನು ಮಸೆಯಿರಿ, ಸನ್ನದ್ಧರಾಗಿರಿ!


ಅಹಷ್ವೇರೋಷನ ಮಗನೂ ಮೇದ್ಯಯ ವಂಶದವನೂ ಕಸ್ದೀಯ ರಾಜ್ಯದ ದೊರೆತನವನ್ನು ಹೊಂದಿದವನೂ ಆದ ದಾರ್ಯಾವೆಷನ ಆಳಿಕೆಯ ಮೊದಲನೆಯ ವರುಷದಲ್ಲಿ


ನೀನು ನೋಡಿದ ಎರಡು ಕೊಂಬಿನ ಟಗರು ಮೇದ್ಯಯ ಮತ್ತು ಪಾರಸಿಯ ರಾಜ್ಯ.


ರಾಜನೇ, ಈಗ ನೀನು ಈ ನಿಬಂಧನೆಯನ್ನು ವಿಧಿಸಿ ಇದು ನಿಂತುಹೋಗದೆ ಮೇದ್ಯಯರ ಮತ್ತು ಪಾರಸಿಯರ ಎಂದಿಗೂ ರದ್ದಾಗದ ಧರ್ಮವಿಧಿಗಳ ಪ್ರಕಾರ ಊರ್ಜಿತವಾಗುವಂತೆ ಶಾಸನಕ್ಕೆ ಹಸ್ತಾಕ್ಷರಮಾಡು ಎಂದು ಬಿನ್ನವಿಸಲು


ದೇಶದಲ್ಲಿ ಧ್ವಜವೆತ್ತಿರಿ, ರಾಜ್ಯಗಳಲ್ಲೆಲ್ಲಾ ಕೊಂಬೂದಿರಿ, ಜನಾಂಗಗಳನ್ನು ಸನ್ನಾಹಮಾಡಿರಿ, ಬಾಬೆಲಿನ ಮೇಲೆ ಬೀಳಲಿಕ್ಕೆ ಅರರಾಟ್, ವಿುನ್ನಿ, ಅಷ್ಕೆನಜ್ ಎಂಬ ರಾಷ್ಟ್ರಗಳನ್ನು ಕರೆದುಕೊಳ್ಳಿರಿ, ಸೋಲಿಸಲು ಸೇನಾಪತಿಯನ್ನು ನೇವಿುಸಿರಿ, ಅಶ್ವಬಲವನ್ನು ಬಿರುಸಾದ ವಿುಡಿತೆದಂಡಿನೋಪಾದಿಯಲ್ಲಿ ಬರಮಾಡಿರಿ.


ಜಿಮ್ರಿಯ ಎಲ್ಲಾ ಅರಸರು, ಏಲಾವಿುನ ಎಲ್ಲಾ ಅರಸರು,


ಘೋರದರ್ಶನವು ನನಗೆ ತಿಳಿಯ ಬಂದಿದೆ; ಬಾಧಕನು ಬಾಧಿಸುತ್ತಿದ್ದಾನೆ; ಸೂರೆಗಾರನು ಸೂರೆಮಾಡುತ್ತಿದ್ದಾನೆ. ಏಲಾಮೇ, ಏಳು! ಮೇದ್ಯವೇ, ಮುತ್ತು! ನಿಮ್ಮ ನಿಟ್ಟುಸುರನ್ನು ನಿಲ್ಲಿಸಿಬಿಟ್ಟಿದ್ದೇನೆ.


ಇಗೋ, ಅವರಿಗೆ ವಿರುದ್ಧವಾಗಿ ಮೇದ್ಯರನ್ನು ಎಬ್ಬಿಸುವೆನು; ಇವರು ಬೆಳ್ಳಿಯನ್ನು ಲಕ್ಷಿಸರು, ಬಂಗಾರವನ್ನು ಪ್ರೀತಿಸರು.


ಅವನ ಬಲ ಪ್ರತಾಪಯುಕ್ತವಾದ ಕೃತ್ಯಗಳೂ ಅವನ ಅನುಗ್ರಹದಿಂದ ಮೊರ್ದೆಕೈಗೆ ಪ್ರಾಪ್ತವಾದ ದೊಡ್ಡಸ್ತಿಕೆಯ ವಿವರವೂ ಮೇದ್ಯ ಮತ್ತು ಪಾರಸಿಯ ರಾಜಕಾಲ ವೃತ್ತಾಂತಗ್ರಂಥದಲ್ಲಿ ಬರೆದಿರುತ್ತವೆ.


ಎಲ್ಲಾ ಸರದಾರರಿಗೋಸ್ಕರವೂ ಪರಿವಾರದವರಿಗೋಸ್ಕರವೂ ಔತಣಮಾಡಿಸಿದನು. ಪಾರಸಿಯ ಮತ್ತು ಮೇದ್ಯ ಸೇನಾಧಿಪತಿಗಳೂ ಪ್ರಧಾನರೂ ಸಂಸ್ಥಾನಾಧಿಕಾರಿಗಳೂ ಅವನ ಸನ್ನಿಧಿಗೆ ಬಂದಿದ್ದರು.


ಯೆಫೆತನ ಸಂತಾನದವರು ಯಾರಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರೇ.


ಯೆಫೆತನ ಸಂತಾನದವರು ಯಾರಂದರೆ - ಗೋಮೆರ್, ಮಾಗೋಗ್, ಮಾದಯ್, ಯಾವಾನ್, ತೂಬಲ್, ಮೆಷೆಕ್, ತೀರಾಸ್ ಎಂಬವರೇ.


ಅನೇಕ ಜನಾಂಗಗಳೂ ಮಹಾರಾಜರೂ ಅವರನ್ನೇ ಅಡಿಯಾಳಾಗಿ ಮಾಡಿಕೊಳ್ಳುವರು; ಅವರ ಕೃತ್ಯಗಳಿಗೂ ಕೈಕೆಲಸಗಳಿಗೂ ತಕ್ಕಂತೆ ಅವರಿಗೆ ಮುಯ್ಯಿತೀರಿಸುವೆನು.


ಆಹಾ, ಬಡಗಲಿಂದ ಒಂದು ಜನಾಂಗವು ಬರುತ್ತದೆ, ಮಹಾ ಜನವೂ ಬಹುಮಂದಿ ಅರಸರೂ ಎಬ್ಬಿಸಲ್ಪಟ್ಟು ಲೋಕದ ಕಟ್ಟಕಡೆಯಿಂದ ಬರುತ್ತಾರೆ.


ದೇಶವೆಲ್ಲಾ ನೊಂದು ನಡುಗುತ್ತದೆ; ಏಕಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


ದಾರ್ಯಾವೆಷನು ತನ್ನ ರಾಜ್ಯಭಾರವನ್ನು ನಿರ್ವಹಿಸುವದಕ್ಕೋಸ್ಕರ ರಾಜ್ಯದ ಆಯಾ ಭಾಗಗಳ ಮೇಲೆ ನೂರಿಪ್ಪತ್ತು ಮಂದಿ ದೇಶಾಧಿಪತಿಗಳನ್ನೂ


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು