Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:31 - ಕನ್ನಡ ಸತ್ಯವೇದವು J.V. (BSI)

31 ಓಡಾಳುಗಳೂ ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ ಅರಸನನ್ನು ಸೇರಿ ಅವನಿಗೆ - ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರವಿುಸಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

31 ಮುಂದೂತನು ಮತ್ತು ದೂತರೂ ಓಡಿ ಓಡಿ ಒಬ್ಬರಿಗೊಬ್ಬರು ಎದುರುಬದುರಾಗಿ, ಅರಸನ ಬಳಿ ಬಂದು, ‘ರಾಜಧಾನಿಯನ್ನು ಎಲ್ಲಾ ಕಡೆಯಲ್ಲಿಯೂ ಆಕ್ರಮಿಸಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

31 ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನತ್ತ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನತ್ತ ದೌಡಾಯಿಸುತ್ತಾನೆ. ‘ರಾಜಧಾನಿಯನ್ನು ಎಲ್ಲಾ ಕಡೆಯಿಂದಲೂ ಆಕ್ರಮಿಸಿದ್ದಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

31 ಒಬ್ಬ ಸಂದೇಶಕನ ನಂತರ ಇನ್ನೊಬ್ಬ ಸಂದೇಶಕನು ಬರುವನು. ಸಂದೇಶಕರ ಮೇಲೆ ಸಂದೇಶಕರು ಬಂದು, ಇಡೀ ನಗರವನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಬಾಬಿಲೋನಿನ ರಾಜನಿಗೆ ತಿಳಿಸುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

31 ಒಬ್ಬ ಸುದ್ದಿಗಾರ ಇನ್ನೊಬ್ಬ ಸುದ್ದಿಗಾರನ ಕಡೆ ಓಡುತ್ತಾನೆ. ಒಬ್ಬ ದೂತ ಇನ್ನೊಬ್ಬ ದೂತನ ಕಡೆಗೆ ಓಡಿಹೋಗಿ, ಬಾಬಿಲೋನಿನ ಅರಸನಿಗೆ ಈ ಸಮಾಚಾರವನ್ನು ತಿಳಿಸುತ್ತಾನೆ, ನಿನ್ನ ರಾಜಧಾನಿಯನ್ನು ಎಲ್ಲಾ ಕಡೆಯಿಂದ ಆಕ್ರಮಿಸಿದ್ದಾರೆ,

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:31
16 ತಿಳಿವುಗಳ ಹೋಲಿಕೆ  

ಅರಸನ ಮತ್ತು ಅವನ ಸರದಾರರ ಪತ್ರಗಳನ್ನು ತೆಗೆದುಕೊಂಡುಹೋದ ದೂತರು ಇಸ್ರಾಯೇಲ್ ಯೆಹೂದದೇಶಗಳಲ್ಲೆಲ್ಲಾ ಸಂಚರಿಸಿ ರಾಜಾಜ್ಞೆಯಂತೆ ಪ್ರಕಟಿಸಿದ್ದೇನಂದರೆ - ಇಸ್ರಾಯೇಲ್ಯರೇ, ಅಬ್ರಹಾಮ್ ಇಸಾಕ್ ಇಸ್ರಾಯೇಲರ ದೇವರಾದ ಯೆಹೋವನ ಕಡೆಗೆ ತಿರುಗಿಕೊಳ್ಳಿರಿ. ಆಗ ಆತನೂ ನಿಮ್ಮಲ್ಲಿ ಅಶ್ಶೂರದ ಅರಸನ ಕೈಗೆ ಸಿಕ್ಕದಂತೆ ತಪ್ಪಿಸಿಕೊಂಡು ಉಳಿದವರ ಕಡೆಗೆ ತಿರುಗಿಕೊಳ್ಳುವನು.


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಬಾಬೆಲಿನ ಅರಸನು ಅದರ ಸುದ್ದಿಯನ್ನು ಕೇಳಿದನು, ಅವನ ಕೈಗಳು ಜೋಲುಬಿದ್ದವು, ಪ್ರಸವವೇದನೆಯಂತಿರುವ ಯಾತನೆಯು ಅವನನ್ನು ಹಿಡಿದಿದೆ.


ಬಾಬೆಲೇ, ನಾನು ನಿನಗೆ ಉರುಲೊಡ್ಡಿದೆನು; ನೀನು ತಿಳಿಯದೆ ಸಿಕ್ಕಿಕೊಂಡಿ; ನೀನು ಯೆಹೋವನೊಂದಿಗೆ ಹೋರಾಡಿದ್ದರಿಂದ ಬೋನಿಗೆ ಬಿದ್ದು ವಶವಾದಿ.


ನಾಶನದ ಮೇಲೆ ನಾಶನವು, ಒಂದರ ಮೇಲೊಂದು ನಾಶನದ ಸುದ್ದಿಬರುತ್ತಿದೆ; ದೇಶವೆಲ್ಲಾ ಹಾಳಾಯಿತು; ತಟ್ಟನೆ ನಮ್ಮ ಗುಡಾರಗಳು, ಕ್ಷಣಮಾತ್ರದಲ್ಲಿ ನಮ್ಮ ಡೇರೆಗಳು ಭಗ್ನವಾದವು;


ನನ್ನ ದಿನಗಳು ಅಂಚೆಯವನಿಗಿಂತ ಶೀಘ್ರವಾಗಿರುತ್ತವೆ. ಯಾವ ಸುಖವನ್ನೂ ಕಾಣದೆ ಓಡಿ ಹೋಗುತ್ತವೆ.


ಈ ರಾಜಾಜ್ಞೆಯು ಶೂಷನ್ ಕೋಟೆಯಲ್ಲಿ ಪ್ರಕಟವಾದಾಗಲೇ ಅರಮನೆಯ ಸವಾರಿ ಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರು ಅರಸನ ಅಪ್ಪಣೆಯಿಂದ ಪ್ರೇರಿತರಾಗಿ ಅತಿಶೀಘ್ರವಾಗಿ ಹೊರಟರು.


ಮೊರ್ದೆಕೈಯು ಅರಸನ ಹೆಸರಿನಲ್ಲಿ ಬರೆಯಲ್ಪಟ್ಟ ಅವುಗಳಿಗೆ ರಾಜಮುದ್ರೆಯನ್ನು ಹಾಕಿ ಅರಮನೆಯ ಅಶ್ವಾಲಯಗಳಲ್ಲಿ ಹುಟ್ಟಿ ಬೆಳೆದ ಸವಾರಿಕುದುರೆಗಳನ್ನು ಹತ್ತಿಕೊಂಡಿದ್ದ ಅಂಚೆಯವರ ಮುಖಾಂತರ ಕಳುಹಿಸಿದನು.


ಜನಾಂಗಗಳಲ್ಲಿ ಪ್ರಚುರಪಡಿಸಿರಿ, ಧ್ವಜವೆತ್ತಿ ಪ್ರಕಟಿಸಿರಿ, ಮರೆಮಾಜದೆ ಹೀಗೆ ಸಾರಿರಿ - ಬಾಬೆಲ್ ಶತ್ರುವಾಯಿತು, ಬೇಲ್ ದೇವತೆಯು ನಾಚಿಕೆಗೊಂಡಿದೆ, ಮೆರೋದಾಕ್ ದೇವತೆಯು ಬೆಚ್ಚಿಬಿದ್ದಿದೆ, ಅದರ ಮೂರ್ತಿಗಳು ಅವಮಾನಕ್ಕೆ ಗುರಿಯಾಗಿವೆ, ಅದರ ಬೊಂಬೆಗಳು ಚೂರುಚೂರಾಗಿವೆ.


ಹಾಯ್ಗಡಗಳನ್ನು ಹಿಡಿದಿದ್ದಾರೆ, ಜೊಂಡುಹುಲ್ಲನ್ನು ಸುಟ್ಟುಬಿಟ್ಟಿದ್ದಾರೆ, ರಣವೀರರು ಬೆಚ್ಚಿಬಿದ್ದಿದ್ದಾರೆ ಎಂದು ತಿಳಿಸುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು