ಯೆರೆಮೀಯ 51:33 - ಕನ್ನಡ ಸತ್ಯವೇದವು J.V. (BSI)33 ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವದು. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201933 ಇಸ್ರಾಯೇಲರ ದೇವರೂ, ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ, “ಬಾಬೆಲ್ ಪುರಿಯು ತುಳಿದು ತುಳಿದು ಸರಿಮಾಡುತ್ತಿರುವ ಕಣದಂತಿದೆ; ಸ್ವಲ್ಪ ಕಾಲವಾದ ಮೇಲೆ ಒಕ್ಕುವ ಸಮಯವು ಅದಕ್ಕೆ ಸಂಭವಿಸುವುದು. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)33 ಬಾಬಿಲೋನ್ ನಗರವು ತುಳಿದು ತುಳಿದು ಸರಿಮಾಡಿದ ಕಣದಂತಿದೆ. ಇಷ್ಟರಲ್ಲೆ ಕೊಯ್ಲುಕಾಲ ಅದಕ್ಕೆ ಸಂಭವಿಸಲಿದೆ; ಇದು ಇಸ್ರಯೇಲರ ದೇವರೂ ಸೇನಾಧೀಶ್ವರನೂ ಆದ ಸರ್ವೇಶ್ವರನ ನುಡಿ.” ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್33 ಇಸ್ರೇಲರ ದೇವರೂ ಸರ್ವಶಕ್ತನೂ ಆಗಿರುವ ಯೆಹೋವನು ಹೀಗೆನ್ನುವನು: “ಬಾಬಿಲೋನಿನ ನಗರವು ಒಂದು ಕಣದಂತೆ ಇದೆ. ಸುಗ್ಗಿಕಾಲದಲ್ಲಿ ಜನರು ಕಾಳನ್ನು ಹೊಟ್ಟಿನಿಂದ ಬೇರ್ಪಡಿಸುವದಕ್ಕಾಗಿ ಅದನ್ನು ಬಡಿಯುತ್ತಾರೆ. ಬಾಬಿಲೋನಿನ ಸುಗ್ಗಿಕಾಲ (ವಿನಾಶ ಕಾಲ) ಹತ್ತಿರವಾಗುತ್ತಲಿದೆ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ33 ಏಕೆಂದರೆ ಇಸ್ರಾಯೇಲಿನ ದೇವರೂ, ಸರ್ವಶಕ್ತರಾಗಿರುವ ಯೆಹೋವ ದೇವರೂ ಹೇಳುವುದೇನೆಂದರೆ: “ತುಳಿಯುವ ವೇಳೆಯಲ್ಲಿ ಕಣವು ಹೇಗೋ, ಹಾಗೆಯೇ ಬಾಬಿಲೋನಿನ ಮಗಳು ಇದ್ದಾಳೆ. ಇನ್ನು ಸ್ವಲ್ಪ ಕಾಲವಾದ ಮೇಲೆ ಅವಳಿಗೆ ಸುಗ್ಗಿಕಾಲ ಬರುವುದು.” ಅಧ್ಯಾಯವನ್ನು ನೋಡಿ |