Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:39 - ಕನ್ನಡ ಸತ್ಯವೇದವು J.V. (BSI)

39 ಅವರು ಉರಿಗೊಂಡಿರುವಾಗ ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರ ಕುಡಿಸುವೆನು. ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

39 ಅವರು ಹೊಟ್ಟೆಬಾಕರು, ನಾನು ಅವರಿಗೆ ಔತಣವನ್ನು ಸಿದ್ಧಪಡಿಸುವೇನು, ಅವರು ಅದರಿಂದ ಸಂಭ್ರಮಪಟ್ಟು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವಂತೆ ತಲೆಗೇರುವ ಮಟ್ಟಿಗೆ ಕುಡಿಸುವೆನು. ಇದು ಯೆಹೋವನ ನುಡಿ” ಎಂಬುದೇ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

39 ಅವರು ಹೊಟ್ಟೆಬಾಕರೇ ಸರಿ. ಅವರಿಗೆ ಔತಣವನ್ನು ಸಿದ್ಧಮಾಡುವೆನು. ತಿಂದು ಸಂಭ್ರಮಪಡುವಂತೆ ಮಾಡುವೆನು. ತಲೆಗೇರುವತನಕ ಕುಡಿಸಿ ಎಂದಿಗೂ ಎಚ್ಚರಗೊಳ್ಳದೆ ಚಿರನಿದ್ರೆಯಲ್ಲಿರುವಂತೆ ಮಾಡುವೆನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

39 ಆ ಜನರು ಬಲಶಾಲಿಗಳಾದ ಸಿಂಹಗಳಂತೆ ವರ್ತಿಸುತ್ತಿದ್ದಾರೆ. ನಾನು ಅವರಿಗೊಂದು ಔತಣವನ್ನೇರ್ಪಡಿಸುವೆನು. ಅವರಿಗೆ ಮತ್ತೇರುವಂತೆ ಕುಡಿಸುವೆನು. ಅವರು ನಗುನಗುತ್ತಾ ಸಂತೋಷದಿಂದ ಕಾಲ ಕಳೆಯುವರು. ಆಮೇಲೆ ಅವರು ಶಾಶ್ವತವಾಗಿ ಮಲಗುವರು. ಅವರು ಮತ್ತೆ ಏಳಲಾರರು.” ಇದು ಯೆಹೋವನ ನುಡಿ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

39 ಅವರು ಉರಿಗೊಂಡಿರುವಾಗ, ನಾನು ಅವರಿಗೆ ಔತಣವನ್ನು ಸಿದ್ಧಪಡಿಸಿ, ಅವರು ಅದರಿಂದ ಸಂಭ್ರಮಪಟ್ಟು, ಎಂದಿಗೂ ಎಚ್ಚರಗೊಳ್ಳದೆ, ದೀರ್ಘ ನಿದ್ರೆ ಮಾಡುವಂತೆ ತಲೆಗೇರುವತನಕ ಕುಡಿಸುವೆನು,” ಎಂದು ಯೆಹೋವ ದೇವರು ಹೇಳುತ್ತಾರೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:39
12 ತಿಳಿವುಗಳ ಹೋಲಿಕೆ  

ನಾನು ಅದರ ಪ್ರಧಾನರು, ಮಂತ್ರಿಗಳು, ಅಧಿಪತಿಗಳು, ಅಧಿಕಾರಿಗಳು, ಬಲಿಷ್ಠರು, ಇವರೆಲ್ಲರಿಗೂ ತಲೆಗೇರ ಕುಡಿಸುವೆನು; ಅವರು ಎಂದಿಗೂ ಎಚ್ಚರಗೊಳ್ಳದೆ ದೀರ್ಘನಿದ್ರೆಮಾಡುವರು ಎಂದು ಸೇನಾಧೀಶ್ವರನಾದ ಯೆಹೋವನಾಮಧೇಯದ ರಾಜಾಧಿರಾಜನು ಅನ್ನುತ್ತಾನೆ.


[ಇದಲ್ಲದೆ ಈ ಅಪ್ಪಣೆಯಾಯಿತು] - ನೀನು ಅವರಿಗೆ ನುಡಿಯತಕ್ಕದ್ದೇನಂದರೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; [ಆ ನನ್ನ ರೋಷವನ್ನು] ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.


ನೀನೂ ಓಲಾಡುವಿ, ಬಳಲಿಹೋಗುವಿ; ನೀನೂ ಶತ್ರುವಿನ ನಿವಿುತ್ತ ಆಶ್ರಯವನ್ನು ಹುಡುಕುವಿ.


ಆತನ ವೈರಿಗಳು ಮುಳ್ಳುಗಳಂತೆ ಹೆಣೆದುಕೊಂಡಿದ್ದರೂ ತಮ್ಮ ಮದ್ಯದಲ್ಲಿ ಮುಳುಗಿದ್ದರೂ ತುಂಬಾ ಒಣಗಿದ ಕೂಳೆಯಂತೆ ಬೆಂಕಿಗೆ ತುತ್ತಾಗುವರು.


ಅದೇ ರಾತ್ರಿಯಲ್ಲಿ ಕಸ್ದೀಯ ರಾಜನಾದ ಬೇಲ್ಶಚ್ಚರನು ಕೊಲ್ಲಲ್ಪಟ್ಟನು.


ಮೋವಾಬಿಗೆ ತಲೆಗೇರಕುಡಿಸಿರಿ, ಅದು ಯೆಹೋವನನ್ನು ತಿರಸ್ಕರಿಸಿ ಉಬ್ಬಿಕೊಂಡಿತಲ್ಲಾ; ಅದು ತನ್ನ ವಾಂತಿಯಲ್ಲಿ ದೊಪ್ಪನೆ ಬಿದ್ದು ಗೇಲಿಗೆ ಗುರಿಯಾಗುವದು.


ಯೆಹೋವನೇ, ನನ್ನ ದೇವರೇ, ನನ್ನಲ್ಲಿ ದೃಷ್ಟಿಯಿಟ್ಟು ಸದುತ್ತರವನ್ನು ದಯಪಾಲಿಸು; ನನಗೆ ಮರಣನಿದ್ರೆಯು ಉಂಟಾಗದಂತೆ ನನ್ನ ಕಣ್ಣುಗಳನ್ನು ಕಳೆಗೊಳಿಸು.


ಅಶ್ಶೂರದ ಅರಸನೇ, ನಿನ್ನ ದೇಶಪಾಲಕರು ದೀರ್ಘನಿದ್ರೆಮಾಡುತ್ತಿದ್ದಾರೆ; ನಿನ್ನ ಮಹನೀಯರು ಒರಗಿಹೋಗಿದ್ದಾರೆ; ನಿನ್ನ ಪ್ರಜೆಗಳು ಬೆಟ್ಟಗಳಲ್ಲಿ ಚದರಿದ್ದಾರೆ, ಅವರನ್ನು ಕೂಡಿಸತಕ್ಕವರು ಯಾರೂ ಇಲ್ಲ.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು