Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:43 - ಕನ್ನಡ ಸತ್ಯವೇದವು J.V. (BSI)

43 ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ, ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದುಹೋಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

43 ಅದರ ಪಟ್ಟಣಗಳು ಕಾಡು, ಕಗ್ಗಾಡು, ಬೆಗ್ಗಾಡೂ ಆಗಿವೆ. ಆ ದೇಶದಲ್ಲಿ ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

43 ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ನರಪ್ರಾಣಿಯೂ ಹಾದುಹೋಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

43 ಬಾಬಿಲೋನಿನ ಪಟ್ಟಣಗಳು ಬರಿದಾದ ಊರುಗಳಾಗುವವು. ಬಾಬಿಲೋನು ಮರುಭೂಮಿಯಾಗುವುದು. ಅದು ನಿರ್ಜನವಾದ ನೆಲವಾಗುವುದು. ಜನರು ಬಾಬಿಲೋನಿನ ಮೂಲಕ ಪ್ರಯಾಣ ಮಾಡಲಾಗದು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

43 ಕಾಡು, ಕಗ್ಗಾಡು, ಬೆಂಗಾಡು ಆಗಿವೆ ಅದರ ನಗರಗಳು. ಆ ದೇಶದೊಳು ಯಾರೂ ವಾಸಿಸರು, ಯಾವ ಮನುಷ್ಯನೂ ಹಾದು ಹೋಗನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:43
12 ತಿಳಿವುಗಳ ಹೋಲಿಕೆ  

ನಮ್ಮನ್ನು ಐಗುಪ್ತದೇಶದೊಳಗಿಂದ ಬರಮಾಡಿ ಕಾಡಾಗಿಯೂ ಹಳ್ಳಕೊಳ್ಳವಾಗಿಯೂ ನಿರ್ಜಲವಾಗಿಯೂ ಘೋರಾಂಧಕಾರವಾಗಿಯೂ ಯಾರೂ ಹಾದುಹೋಗದೆಯೂ ಯಾರೂ ವಾಸಿಸದೆಯೂ ಇರುವ ಅರಣ್ಯದಲ್ಲಿ ನಡಿಸಿದ ಯೆಹೋವನು ಎಲ್ಲಿ ಎಂದು ಅವರು ಅಂದುಕೊಳ್ಳಲಿಲ್ಲವಲ್ಲ.


ಅದು ಎಂದಿಗೂ ನಿವಾಸಸ್ಥಳವಾಗದು, ತಲತಲಾಂತರಕ್ಕೂ ಅಲ್ಲಿ ಜನರು ಒಕ್ಕಲಿರರು; ಯಾವ ಅರಬಿಯನೂ ಗುಡಾರಹಾಕನು; ಕುರುಬರು ಮಂದೆಗಳನ್ನು ತಂಗಿಸರು.


ದೇಶವೆಲ್ಲಾ ನೊಂದು ನಡುಗುತ್ತದೆ; ಏಕಂದರೆ ಬಾಬೆಲ್ ದೇಶವು ಹಾಳುಬಿದ್ದು ನಿರ್ಜನವಾಗಲಿ ಎಂದು ಯೆಹೋವನು ಅದರ ವಿಷಯವಾಗಿ ಮಾಡಿಕೊಂಡಿರುವ ಸಂಕಲ್ಪಗಳು ಸ್ಥಿರವಾಗಿವೆ.


ಆಗ ಬಾಬೆಲು ಹಾಳುದಿಬ್ಬಗಳೂ ನರಿಗಳ ಹಕ್ಕೆಯೂ ಆಗಿರುವದು; ಅದು ನಿರ್ಜನವಾಗಿ ಬೆರಗಿನ ಸಿಳ್ಳಿಗೆ ಗುರಿಯಾಗುವದು.


ನಿಮ್ಮ ಮಾತೃಭೂವಿುಯು ಮಾನಭಂಗಕ್ಕೆ ಈಡಾಗುವದು, ನಿಮ್ಮನ್ನು ಹೆತ್ತ ರಾಜ್ಯವು ನಾಚಿಕೊಳ್ಳುವದು; ಆಹಾ, ಅದು ಕಾಡು, ಕಗ್ಗಾಡು, ಬೆಗ್ಗಾಡು, ಜನಾಂಗಗಳಲ್ಲಿ ಕನಿಷ್ಠವೂ ಆಗುವದು.


ಬನ್ನಿರಿ, ಯೆಹೋವನ ಕಾರ್ಯವನ್ನು ನೋಡಿರಿ; ಆತನು ಭೂಲೋಕದಲ್ಲಿ ಎಂಥಾ ಪ್ರಳಯವನ್ನು ನಡಿಸಿದ್ದಾನೆ.


ಹೀಗಿರಲು ನೀನು ಮಂತ್ರಿಸಿ ನಿವಾರಿಸಲಾರದ ಕೇಡು ನಿನಗೆ ಸಂಭವಿಸುವದು, ನೀನು ಪರಿಹರಿಸಲಾಗದ ವಿಪತ್ತು ನಿನ್ನ ಮೇಲೆ ಬೀಳುವದು; ನೀನು ತಪ್ಪಿಸಲರಿಯದ ನಾಶನವು ನಿನಗೇ ತಟ್ಟನೆ ಉಂಟಾಗುವದು.


ಯೆಹೋವನೇ, ನೀನು ಈ ಸ್ಥಳವನ್ನು ನಿರ್ಮೂಲಮಾಡಬೇಕೆಂದು ಉದ್ದೇಶಿಸಿ ಇದು ಜನರಿಗೂ ಪಶುಗಳಿಗೂ ನೆಲೆಯಾಗದೆ ಸದಾ ಹಾಳಾಗಿಯೇ ಇರಲಿ ಎಂದು ನುಡಿದಿದ್ದೀಯಲ್ಲಾ ಎಂಬದಾಗಿ ಅರಿಕೆಮಾಡಬೇಕು.


ಅಲ್ಲಿನ ಅರಮನೆಗಳಲ್ಲಿ ದಬ್ಬೆಗಳ್ಳಿಗಳೂ ಕೋಟೆಗಳಲ್ಲಿ ಮುಳ್ಳುಗಿಳ್ಳುಗಳೂ ಹಬ್ಬಿಕೊಳ್ಳುವವು; ಅದು ನರಿಗಳಿಗೆ ಹಕ್ಕೆಯಾಗಿಯೂ ಉಷ್ಟ್ರಪಕ್ಷಿಗಳಿಗೆ ಎಡೆಯಾಗಿಯೂ ಇರುವದು.


ಆದಕಾರಣ ಬೆರಗಿನ ಸಿಳ್ಳಿಗೆ ಅವರ ದೇಶವು ನಿತ್ಯವಾಗಿ ಗುರಿಯಾಗುವದು; ಹಾದುಹೋಗುವವರೆಲ್ಲರೂ ಬೆರಗಾಗಿ ತಲೆದೂಗುವರು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು