Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:5 - ಕನ್ನಡ ಸತ್ಯವೇದವು J.V. (BSI)

5 ಇಸ್ರಾಯೇಲ್ಯರ ಸದಮಲಸ್ವಾವಿುಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

5 ಇಸ್ರಾಯೇಲರ ಸದಮಲಸ್ವಾಮಿಗೆ ಆತನ ಜನರು ಮಾಡಿದ ಅಪರಾಧವು ತಮ್ಮ ದೇಶದಲ್ಲಿ ತುಂಬಿದ್ದರೂ, ಸೇನಾಧೀಶ್ವರನಾದ ಯೆಹೋವನೆಂಬ ದೇವರು ಇಸ್ರಾಯೇಲನ್ನಾಗಲಿ ಅಥವಾ ಯೆಹೂದವನ್ನಾಗಲಿ ತ್ಯಜಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

5 ಇಸ್ರಯೇಲರ ಪರಮ ಪಾವನ ಸ್ವಾಮಿಯಾದ ನನಗೆ ನನ್ನ ಜನರು ಮಾಡಿದ ಅಪರಾಧ ತಮ್ಮ ನಾಡಿನಲ್ಲಿ ತುಂಬಿದ್ದರೂ ಸೇನಾಧೀಶ್ವರ ಸರ್ವೇಶ್ವರನೆಂಬ ದೇವರಾದ ನಾನು ಇಸ್ರಯೇಲನ್ನಾಗಲಿ ಜುದೇಯವನ್ನಾಗಲಿ ತ್ಯಜಿಸಿಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

5 ಸರ್ವಶಕ್ತನಾದ ಯೆಹೋವನು ಇಸ್ರೇಲನ್ನು ಮತ್ತು ಯೆಹೂದವನ್ನು ವಿಧವೆಯಾಗಿ ಮಾಡಿಲ್ಲ. ಆತನು ಅವರ ಕೈಬಿಟ್ಟಿಲ್ಲ. ಅವರು ಇಸ್ರೇಲಿನ ಪರಿಶುದ್ಧನನ್ನು ತೊರೆದು ಅಪರಾಧ ಮಾಡಿದರು. ಅವರು ಆತನನ್ನು ತ್ಯಜಿಸಿದರು. ಆದರೆ ಆತನು ಅವರನ್ನು ತ್ಯಜಿಸಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

5 ಏಕೆಂದರೆ ಅವರ ದೇಶವು ಇಸ್ರಾಯೇಲಿನ ಪರಿಶುದ್ಧನಿಗೆ ವಿರೋಧವಾದ ಪಾಪದಿಂದ ತುಂಬಿದ್ದಾಗ್ಯೂ ಸೇನಾಧೀಶ್ವರ ಯೆಹೋವ ದೇವರು ಇಸ್ರಾಯೇಲನ್ನಾಗಲಿ, ಯೆಹೂದವನ್ನಾಗಲಿ ಕೈಬಿಡಲಿಲ್ಲ.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:5
37 ತಿಳಿವುಗಳ ಹೋಲಿಕೆ  

ಆ ದಿನದಲ್ಲಿ ಯೆಹೋವನು ಯೆರೂಸಲೇವಿುನವರನ್ನು ಸುತ್ತಲು ಕಾಪಾಡುವನು; ಅವರೊಳಗೆ ಈಗಿನ ಕುಂಟನು ಆ ದಿನದಲ್ಲಿ ದಾವೀದನಂತಿರುವನು; ದಾವೀದ ವಂಶವು ದೇವರಂತೆ, ಯೆಹೋವನ ದೂತನ ಹಾಗೆ ಅವರಿಗೆ ಮುಂದಾಳಾಗುವದು.


ಆ ದಿನದಲ್ಲಿ ನಾನು ಯೆಹೂದದ ಕುಲಪತಿಗಳನ್ನು ಸೌದೆಯ ಮಧ್ಯದಲ್ಲಿನ ಅಗ್ಗಿಷ್ಟಿಕೆಯನ್ನಾಗಿಯೂ ಸಿವುಡುಗಳ ನಡುವಣ ಪಂಜನ್ನಾಗಿಯೂ ಮಾಡುವೆನು; ಅವರು ಸುತ್ತಣ ಜನಾಂಗಗಳನ್ನೆಲ್ಲಾ ಎಡಬಲಗಳಲ್ಲಿ ನುಂಗಿಬಿಡುವರು; ಯೆರೂಸಲೇವಿುನವರು ತಮ್ಮ ಸ್ಥಳವಾದ ಯೆರೂಸಲೇವಿುನಲ್ಲಿಯೇ ಇನ್ನು ವಾಸಿಸುವರು.


ಇಸ್ರಾಯೇಲ್ಯರೇ, ಯೆಹೋವನ ವಾಕ್ಯವನ್ನು ಕೇಳಿರಿ; ಯೆಹೋವನು ದೇಶನಿವಾಸಿಗಳ ಮೇಲೆ ವಿವಾದಹಾಕಿದ್ದಾನೆ. ಏಕಂದರೆ ಪ್ರೀತಿ ಸತ್ಯತೆ ದೇವಜ್ಞಾನಗಳು ದೇಶದಲ್ಲಿಲ್ಲ;


ಯೆಹೋವನು ಮೀಸಲಾದ ದೇಶದಲ್ಲಿ ಯೆಹೂದವನ್ನು ತನ್ನ ಸ್ವಾಸ್ತ್ಯವನ್ನಾಗಿ ಅನುಭವಿಸುವನು, ಯೆರೂಸಲೇಮನ್ನು ಮತ್ತೆ ತನಗಾಗಿ ಆರಿಸಿಕೊಳ್ಳುವನು.


ನೀನು ಪುರಾತನ ಕಾಲದಿಂದಲೂ ನಮ್ಮ ಪಿತೃಗಳಿಗೆ ಪ್ರಮಾಣಮಾಡಿರುವಂತೆ ಯಾಕೋಬನ ವಂಶದವರಿಗೆ ಸತ್ಯಪರನಾಗಿಯೂ ಅಬ್ರಹಾಮನ ವಂಶದವರಿಗೆ ಪ್ರೀತಿಪರನಾಗಿಯೂ ನಡೆಯುವಿ.


ನಿನಗೆ ಯಾವ ದೇವರು ಸಮಾನ? ನೀನು ನಿನ್ನ ಸ್ವಾಸ್ತ್ಯದವರಲ್ಲಿ ಉಳಿದವರ ಅಪರಾಧವನ್ನು ಕ್ಷವಿುಸುವವನೂ ಅವರ ದ್ರೋಹವನ್ನು ಲಕ್ಷಿಸದವನೂ ಆಗಿದ್ದೀ; ಹೌದು, ನಮ್ಮ ದೇವರು ನಿತ್ಯವೂ ಕೋಪಿಸುವವನಲ್ಲ, ಕರುಣೆಯೇ ಆತನಿಗೆ ಇಷ್ಟ.


ಇಸ್ರಾಯೇಲ್ಯರ ಸಂಖ್ಯೆಯು ಅಳೆಯುವದಕ್ಕೂ ಲೆಕ್ಕಿಸುವದಕ್ಕೂ ಅಸಾಧ್ಯವಾದ ಸಮುದ್ರತೀರದ ಉಸುಬಿನಂತಾಗುವದು; ಆಗ ಅವರು ನನ್ನ ಪ್ರಜೆಯಲ್ಲದವರು ಎನಿಸಿಕೊಳ್ಳುವದಕ್ಕೆ ಬದಲಾಗಿ ಜೀವಸ್ವರೂಪನಾದ ದೇವರ ಮಕ್ಕಳು ಎನಿಸಿಕೊಳ್ಳುವರು.


ಆತನು ನನಗೆ - ಇಸ್ರಾಯೇಲ್ ಮತ್ತು ಯೆಹೂದ ವಂಶದವರ ಅಧರ್ಮವು ಅತ್ಯಂತವಾಗಿದೆ; ದೇಶವು ರಕ್ತಪೂರ್ಣವಾಗಿದೆ, ಪಟ್ಟಣವು ಅನ್ಯಾಯಭರಿತವಾಗಿದೆ; ಆ ವಂಶದವರು - ನಮ್ಮ ದೇಶವನ್ನು ಯೆಹೋವನು ಬಿಟ್ಟುಬಿಟ್ಟಿದ್ದಾನೆ, ಯೆಹೋವನು ನೋಡನು ಎಂಬದಾಗಿ ಮಾತಾಡಿಕೊಳ್ಳುತ್ತಿದ್ದಾರಲ್ಲಾ;


ಆಗ ಆತನು ನನಗೆ - ನರಪುತ್ರನೇ, ನೋಡಿದಿಯಾ? ಯೆಹೂದವಂಶದವರು ತಾವು ಇಲ್ಲಿ ನಡಿಸುವ ಅಸಹ್ಯಕಾರ್ಯಗಳು ಅಲ್ಪವೆಂದು ಭಾವಿಸಿಕಂಡರೇನೋ? ದೇಶವನ್ನು ಹಿಂಸೆಯಿಂದ ತುಂಬಿಸಿಬಿಟ್ಟದ್ದಲ್ಲದೆ ನನ್ನನ್ನು ಕೆಣಕಬೇಕೆಂದೇ ಮತ್ತೆ ಯತ್ನಿಸುತ್ತಿದ್ದಾರೆ; ನೋಡು, ಪತ್ರೆಯನ್ನು ಮೂಗಿಗೆ ಒತ್ತಿಕೊಳ್ಳುತ್ತಾರೆ.


ಆ ದಿನಗಳಲ್ಲಿ, ಆ ಕಾಲದಲ್ಲಿ ಇಸ್ರಾಯೇಲಿನ ಅಧರ್ಮವನ್ನು ಎಲ್ಲಿ ಹುಡುಕಿದರೂ ಇರುವದೇ ಇಲ್ಲ; ಯೆಹೂದದ ಪಾಪವನ್ನು ಎಲ್ಲಿ ತಡಕಿದರೂ ಸಿಕ್ಕುವದೇ ಇಲ್ಲ; ನಾನು ಉಳಿಸುವ ಜನಶೇಷವನ್ನು ಕ್ಷವಿುಸುವೆನಲ್ಲವೆ. ಇದು ಯೆಹೋವನ ನುಡಿ.


ನನ್ನ ಸೇವಕ ಯಾಕೋಬೇ, ಭಯಪಡಬೇಡ, ನಾನು ನಿನ್ನೊಂದಿಗಿದ್ದೇನೆ; ನಾನು ಯಾವ ಜನಾಂಗಗಳಲ್ಲಿಗೆ ನಿನ್ನನ್ನು ಅಟ್ಟಿದೆನೋ ಆ ಜನಾಂಗಗಳನ್ನೆಲ್ಲಾ ನಿರ್ಮೂಲಮಾಡುವೆನು; ನಿನ್ನನ್ನೋ ನಿರ್ಮೂಲಮಾಡೆನು; ವಿುತಿಮೀರಿ ಶಿಕ್ಷಿಸೆನು, ಆದರೆ ಶಿಕ್ಷಿಸದೆ ಬಿಡುವದಿಲ್ಲ. ಇದು ಯೆಹೋವನ ನುಡಿ.


ಯೆಹೋವನು ಹೀಗೆನ್ನುತ್ತಾನೆ - ಮೇಲೆ ಆಕಾಶಮಂಡಲವನ್ನು ಅಳೆಯಬಹುದಾದರೆ ಕೆಳಗೆ ಭೂಮಂಡಲದ ಅಸ್ತಿವಾರವನ್ನು ಪರೀಕ್ಷಿಸಬಹುದಾದರೆ ಆಗ ಇಸ್ರಾಯೇಲ್ ವಂಶವು ಮಾಡಿರುವ ಸಕಲ ದುಷ್ಕೃತ್ಯಗಳ ನಿವಿುತ್ತ ನಾನು ಆ ವಂಶವನ್ನು ನಿರಾಕರಿಸಿಬಿಟ್ಟೇನು.


ಆದಕಾರಣ ಸೇನಾಧೀಶ್ವರನಾದ ಯೆಹೋವನು ಪ್ರವಾದಿಗಳ ವಿಷಯದಲ್ಲಿ ಹೀಗನ್ನುತ್ತಾನೆ - ಆಹಾ, ನಾನು ಇವರಿಗೆ ಕಹಿಯಾದ ಆಹಾರಪಾನಗಳನ್ನು ಕೊಡುವೆನು; ಯೆರೂಸಲೇವಿುನ ಪ್ರವಾದಿಗಳಿಂದ ಭ್ರಷ್ಟತನವು ದೇಶದಲ್ಲೆಲ್ಲಾ ಹರಡಿದೆಯಷ್ಟೆ.


ಈ ಜನರು ನನ್ನನ್ನು ತೊರೆದು ತಮಗಾಗಲಿ ತಮ್ಮ ಪಿತೃಗಳಿಗಾಗಲಿ ಯೆಹೂದದ ಅರಸರಿಗಾಗಲಿ ತಿಳಿಯದ ಅನ್ಯದೇವತೆಗಳಿಗೆ ಧೂಪಹಾಕುತ್ತಾ ಈ ಸ್ಥಳವನ್ನು ಅನ್ಯಸ್ಥಾನವಾಗಿ ಮಾಡಿ


ಅವರ ಅಧರ್ಮಕ್ಕೂ ಪಾಪಕ್ಕೂ ಎರಡರಷ್ಟು ಶಿಕ್ಷೆಯನ್ನು ಮೊದಲು ಕೊಡುವೆನು; ಹೆಣಗಳಂತಿರುವ ತಮ್ಮ ಹೇಯ ವಿಗ್ರಹಗಳಿಂದ ನನ್ನ ದೇಶವನ್ನು ಹೊಲಸು ಮಾಡಿ ನನ್ನ ಸ್ವಾಸ್ತ್ಯವನ್ನು ತಮ್ಮ ಅಸಹ್ಯ ವಸ್ತುಗಳಿಂದ ತುಂಬಿಸಿದ್ದಾರಷ್ಟೆ.


ನಿನ್ನ ಜನರು ಪರಿಶುದ್ಧಜನರು, ಯೆಹೋವನು ವಿಮೋಚಿಸಿದವರು ಎಂದು ಅನ್ನಿಸಿಕೊಳ್ಳುವರು, ನಿನಗೋ ಪತಿಯು ವರಿಸಿ ತ್ಯಜಿಸದ ಪುರಿ ಎಂದು ಹೆಸರು ಬರುವದು.


ಯಾಕೋಬೇ, ಇಸ್ರಾಯೇಲೇ, ಈ ವಿಷಯಗಳನ್ನು ಜ್ಞಾಪಕದಲ್ಲಿಟ್ಟುಕೋ, ನನ್ನ ಸೇವಕನಾಗಿದ್ದೀಯಲ್ಲವೇ; ಇಸ್ರಾಯೇಲೇ, ನಾನು ನಿನ್ನನ್ನು ನಿರ್ಮಿಸಿದೆನು, ನೀನು ನನ್ನ ಸೇವಕನು, ನಿನ್ನನ್ನು ಮರೆತುಬಿಡೆನು.


ಯೆಹೋವನು ತನ್ನ ಜನರನ್ನು ಬೇಡವೆಂದು ತಳ್ಳಿಬಿಡುವದಿಲ್ಲ; ತನ್ನ ಸ್ವಾಸ್ತ್ಯವನ್ನು ಕೈಬಿಡುವದಿಲ್ಲ.


ನಾವು ದಾಸರಾದರೂ ನಮ್ಮ ದೇವರು ನಮ್ಮ ದಾಸತ್ವದಲ್ಲಿ ನಮ್ಮನ್ನು ಕೈಬಿಡಲಿಲ್ಲ; ಹಾಳುಬಿದ್ದ ನಮ್ಮ ದೇವರ ಆಲಯವನ್ನು ತಿರಿಗಿ ಕಟ್ಟಿ ಭದ್ರಪಡಿಸುವದಕ್ಕೋಸ್ಕರ ನಮಗೆ ಉಜ್ಜೀವನ ಪ್ರಾಪ್ತವಾಗುವಂತೆಯೂ ಯೆಹೂದದಲ್ಲಿಯೂ ಯೆರೂಸಲೇವಿುನಲ್ಲಿಯೂ ನಮಗೆ ಅಭಯಾಶ್ರಯ ಸಿಕ್ಕುವಂತೆಯೂ ಪಾರಸಿಯ ರಾಜರ ಮುಂದೆ ನಮಗೆ ಕೃಪೆಯನ್ನು ಅನುಗ್ರಹಿಸಿದ್ದಾನೆ.


ಯೆಹೋವನು ದಯದಿಂದ ನಿಮ್ಮನ್ನು ಸ್ವಕೀಯಜನವನ್ನಾಗಿ ಆರಿಸಿಕೊಂಡ ಮೇಲೆ ಆತನು ತನ್ನ ಮಹೋನ್ನತ ನಾಮದ ನಿವಿುತ್ತವಾಗಿ ನಿಮ್ಮನ್ನು ಕೈಬಿಡುವದೇ ಇಲ್ಲ.


ಮನಸ್ಸೆಯು ಯೆಹೂದ್ಯರನ್ನು ಯೆಹೋವನ ದೃಷ್ಟಿಯಲ್ಲಿ ಕೆಟ್ಟದ್ದಾಗಿರುವದನ್ನು ಮಾಡ ಪ್ರೇರಿಸಿದ್ದಲ್ಲದೆ ಯೆರೂಸಲೇಮನ್ನೆಲ್ಲಾ ನಿರಪರಾಧ ರಕ್ತದಿಂದ ತುಂಬಿಸಿದನು.


ನನ್ನ ಪ್ರಜೆಗಳಾದ ಇಸ್ರಾಯೇಲ್ಯರನ್ನು ಕೈಬಿಡದೆ ಅವರ ಮಧ್ಯದಲ್ಲೇ ವಾಸಿಸುವೆನು ಎಂದು ಹೇಳಿದನು.


ಸುಳ್ಳುಸಾಕ್ಷಿ, ನರಹತ್ಯ, ಕಳ್ಳತನ, ವ್ಯಭಿಚಾರ, ಇವುಗಳೇ ನಡೆಯುತ್ತವೆ; ದೊಂಬಿಗಳು ಆಗುತ್ತಲಿವೆ, ದೇಶವೆಲ್ಲಾ ರಕ್ತಮಯವಾಗಿದೆ.


ಅಲೆಗಳು ಭೋರ್ಗರೆಯುವಷ್ಟು ಸಮುದ್ರವನ್ನು ರೇಗಿಸುವ ನಿನ್ನ ದೇವರಾದ ಯೆಹೋವನು ನಾನೇ; ಸೇನಾಧೀಶ್ವರನಾದ ಯೆಹೋವನೆಂಬದೇ ನನ್ನ ನಾಮಧೇಯ.


ಏಕೆ ಸ್ತಬ್ಧನಂತೆಯೂ ರಕ್ಷಿಸಲಾರದ ಶೂರನ ಹಾಗೆಯೂ ಇದ್ದೀ? ಆದರೂ ಯೆಹೋವನೇ, ನೀನು ನಮ್ಮ ಮಧ್ಯದಲ್ಲಿರುತ್ತೀ, ನಾವು ನಿನ್ನ ಹೆಸರಿನವರು, ನಮ್ಮನ್ನು ಕೈಬಿಡಬೇಡ.


ನೀನು ಯೆಹೂದವನ್ನು ಸಂಪೂರ್ಣವಾಗಿ ತ್ಯಜಿಸಿಬಿಟ್ಟಿದ್ದೀಯೋ? ಚೀಯೋನಿನ ಮೇಲೆ ಮನಃಪೂರ್ವಕವಾಗಿ ಅಸಹ್ಯಪಟ್ಟಿದ್ದೀಯೋ? ನಮಗೆ ಗುಣವಾಗದಂತೆ ಏಕೆ ಪೆಟ್ಟುಹೊಡೆದಿ? ಸುಖವನ್ನು ನಿರೀಕ್ಷಿಸಿದೆವು, ಯಾವ ಮೇಲೂ ಆಗಲಿಲ್ಲ; ಕ್ಷೇಮಕಾಲವನ್ನು ಎದುರುನೋಡಿದೆವು, ಹಾ, ಅಂಜಿಕೆಯೇ!


ಯಾಕೋಬ್ಯರ ಸ್ವಾಸ್ತ್ಯವಾದಾತನು ಅವುಗಳ ಹಾಗಲ್ಲ; ಆತನು ಸಮಸ್ತವನ್ನೂ ನಿರ್ಮಿಸಿದವನು; ಇಸ್ರಾಯೇಲು ಆತನ ಸ್ವಾಸ್ತ್ಯವಾದ ವಂಶ; ಸೇನಾಧೀಶ್ವರನಾದ ಯೆಹೋವನೆಂಬದು ಆತನ ನಾಮಧೇಯ.


ನಿಮ್ಮ ಸಹೋದರರನ್ನು ಅಮ್ಮಿ, ನಿಮ್ಮ ಸಹೋದರಿಯರನ್ನು ರುಹಾಮ ಅನ್ನಿರಿ.


ಇಲ್ಲವಾದರೆ ನಾನು ಅವಳ ಬಟ್ಟೆಯನ್ನು ಕಿತ್ತು ಅವಳನ್ನು ಹುಟ್ಟಿದಾಗ ಇದ್ದಂತೆ ಬೆತ್ತಲೆಯಾಗಿ ನಿಲ್ಲಿಸಿಬಿಟ್ಟು ಕಾಡನ್ನಾಗಿ ಮಾಡಿ ಮರುಭೂವಿುಯ ಸ್ಥಿತಿಗೆ ತಂದು ನೀರಡಿಕೆಯಿಂದ ಸಾಯಿಸುವೆನು;


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು