ಯೆರೆಮೀಯ 51:50 - ಕನ್ನಡ ಸತ್ಯವೇದವು J.V. (BSI)50 ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇವಿುನ ಹಂಬಲು ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ. ಅಧ್ಯಾಯವನ್ನು ನೋಡಿಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 201950 ಖಡ್ಗಕ್ಕೆ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ; ದೂರದಲ್ಲಿಯೂ ಯೆಹೋವನನ್ನು ಸ್ಮರಿಸಿರಿ, ಯೆರೂಸಲೇಮಿನ ಹಂಬಲ ನಿಮ್ಮ ಮನಸ್ಸಿನಲ್ಲಿ ಹುಟ್ಟಲಿ. ಅಧ್ಯಾಯವನ್ನು ನೋಡಿಕನ್ನಡ ಸತ್ಯವೇದವು C.L. Bible (BSI)50 “ಕತ್ತಿಯಿಂದ ತಪ್ಪಿಸಿಕೊಂಡವರೇ, ಸುಮ್ಮನೆ ನಿಂತುಕೊಳ್ಳದೆ ನಡೆಯಿರಿ. ದೂರವಿರುವಾಗಲು ಸರ್ವೇಶ್ವರನನ್ನು ಸ್ಮರಿಸಿರಿ. ಜೆರುಸಲೇಮನ್ನು ಕುರಿತು ಮನಸ್ಸಾರೆ ಹಂಬಲಿಸಿರಿ. ಅಧ್ಯಾಯವನ್ನು ನೋಡಿಪರಿಶುದ್ದ ಬೈಬಲ್50 ನೀವು ಖಡ್ಗಗಳಿಂದ ತಪ್ಪಿಸಿಕೊಂಡಿರಿ. ನೀವು ಅವಸರ ಮಾಡಿ ಬಾಬಿಲೋನನ್ನು ಬಿಡಬೇಕು. ತಡೆಯಬೇಡಿ, ನೀವು ಬಹಳ ದೂರಪ್ರದೇಶದಲ್ಲಿ ಇದ್ದೀರಿ. ಆದರೆ ನೀವು ಇರುವಲ್ಲಿಯೇ ಯೆಹೋವನನ್ನು ಸ್ಮರಿಸಿರಿ; ಜೆರುಸಲೇಮನ್ನೂ ಸ್ಮರಿಸಿಕೊಳ್ಳಿರಿ. ಅಧ್ಯಾಯವನ್ನು ನೋಡಿಕನ್ನಡ ಸಮಕಾಲಿಕ ಅನುವಾದ50 ಖಡ್ಗದಿಂದ ತಪ್ಪಿಸಿಕೊಂಡವರೇ, ನಡೆಯಿರಿ, ನಿಲ್ಲಬೇಡಿರಿ. ದೂರದಲ್ಲಿ ಯೆಹೋವ ದೇವರನ್ನು ಜ್ಞಾಪಕಮಾಡಿಕೊಳ್ಳಿರಿ, ಯೆರೂಸಲೇಮು ನಿಮ್ಮ ಮನಸ್ಸಿಗೆ ಬರಲಿ.” ಅಧ್ಯಾಯವನ್ನು ನೋಡಿ |
ಆಗ ತಪ್ಪಿಸಿಕೊಂಡು ಸೆರೆಗೆ ಒಯ್ಯಲ್ಪಟ್ಟು ಜನಾಂಗಗಳ ಮಧ್ಯೆ ವಾಸಿಸುವ ನಿಮ್ಮವರು ಅನ್ಯದೇವತೆಗಳಲ್ಲಿನ ಮೋಹದಿಂದ ನನ್ನನ್ನು ತೊರೆದ ತಮ್ಮ ಹೃದಯವನ್ನೂ ತಮ್ಮ ಬೊಂಬೆಗಳ ಮೇಲಣ ಕಾಮದಿಂದ ದೇವದ್ರೋಹಮಾಡಿದ ತಮ್ಮ ಕಣ್ಣುಗಳನ್ನೂ ಭಂಗಪಡಿಸಿದವನು ನಾನೇ ಎಂಬದಾಗಿ ನನ್ನನ್ನು ಜ್ಞಾಪಕಮಾಡಿಕೊಂಡು ತಾವು ಬಹಳ ಅಸಹ್ಯಕಾರ್ಯಗಳನ್ನು ನಡಿಸಿ ಕೆಟ್ಟತನವನ್ನು ಮಾಡಿದ್ದೇವೆಂದು ತಮ್ಮನ್ನು ತಾವೇ ಹೇಸಿಕೊಳ್ಳುವರು.