Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:59 - ಕನ್ನಡ ಸತ್ಯವೇದವು J.V. (BSI)

59 ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ನಾಲ್ಕನೆಯ ವರುಷ ಚಿದ್ಕೀಯನೊಡನೆ ಬಾಬೆಲಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರಂದರೆ ಸರಬರಾಯಿ ಕಾರುಬಾರಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

59 ಮಹ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಯೆಹೂದದ ಅರಸನಾದ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದಾಗ ಪ್ರವಾದಿಯಾದ ಯೆರೆಮೀಯನು ಅವನಿಗೆ ಕೊಟ್ಟ ಅಪ್ಪಣೆ. (ಸೆರಾಯನು ಯಾರೆಂದರೆ ಸೇನೆಯ ಪ್ರಧಾನ ಅಧಿಕಾರಿ.)

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

59 ಮಸ್ಸೇಯನ ಮೊಮ್ಮಗನೂ ನೇರೀಯನ ಮಗನೂ ಆದ ಸೆರಾಯನು ಜುದೇಯದ ಅರಸ ಚಿದ್ಕೀಯನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಚಿದ್ಕೀಯನೊಡನೆ ಬಾಬಿಲೋನಿಗೆ ಪ್ರಯಾಣಮಾಡಿದನು. ಆಗ ಪ್ರವಾದಿ ಯೆರೆಮೀಯನು ಸೆರಾಯನಿಗೆ ಒಂದು ಅಪ್ಪಣೆಯನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

59 ಯೆರೆಮೀಯನು ಸೆರಾಯ ಎಂಬ ಅಧಿಕಾರಿಯ ಕೈಗೆ ಕೊಟ್ಟ ಸಂದೇಶವಿದು. ಸೆರಾಯನು ಯೆಹೂದದ ನೇರೀಯನ ಮಗ. ನೇರೀಯನು ಮಹ್ಸೇಯನ ಮಗನು. ಸೆರಾಯನು ಯೆಹೂದದ ರಾಜನಾದ ಚಿದ್ಕೀಯನ ಜೊತೆಗೆ ಬಾಬಿಲೋನಿಗೆ ಹೋದನು. ಈ ಸಂಗತಿ ಯೆಹೂದದಲ್ಲಿ ಚಿದ್ಕೀಯನ ಆಳ್ವಿಕೆಯ ನಾಲ್ಕನೇ ವರ್ಷದಲ್ಲಿ ನಡೆದದ್ದು. ಆ ಸಮಯದಲ್ಲಿ ಯೆರೆಮೀಯನು ಸೆರಾಯನೆಂಬ ಅಧಿಕಾರಿಯ ಕೈಗೆ ಈ ಸಂದೇಶವನ್ನು ಕೊಟ್ಟನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

59 ಪ್ರವಾದಿಯಾದ ಯೆರೆಮೀಯನು ಮಹ್ಸೇಯನ ಮಗನಾದ ನೇರೀಯನ ಮಗ ಸೆರಾಯನಿಗೆ, ಅವನು ಯೆಹೂದದ ಅರಸನಾದ ಚಿದ್ಕೀಯನ ಸಂಗಡ, ಇವನ ಆಳ್ವಿಕೆಯ ನಾಲ್ಕನೆಯ ವರ್ಷದಲ್ಲಿ ಬಾಬಿಲೋನಿಗೆ ಹೋದಾಗ ಆಜ್ಞಾಪಿಸಿದ ವಾಕ್ಯವು. ಆ ಸೆರಾಯನು ಅಂಗರಕ್ಷಕ ಸೇನೆಯ ನಾಯಕನಾಗಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:59
6 ತಿಳಿವುಗಳ ಹೋಲಿಕೆ  

ಆಗ ಯೆರೆಮೀಯನು ನೇರೀಯನ ಮಗನಾದ ಬಾರೂಕನನ್ನು ಕರೆಯಿಸಿ ಯೆಹೋವನ ಮಾತುಗಳನ್ನೆಲ್ಲಾ ನುಡಿಯಲು ಅವನು ಯೆರೆಮೀಯನ ಬಾಯಿಂದ ಬಂದ ಹಾಗೆಯೇ ಅವುಗಳನ್ನು ಗ್ರಂಥದ ಸುರಳಿಯಲ್ಲಿ ಬರೆದನು.


ನನ್ನ ಚಿಕ್ಕಪ್ಪನ ಮಗನಾದ ಹನಮೇಲನ ಮುಂದೆ ಕ್ರಯಪತ್ರಕ್ಕೆ ರುಜುಮಾಡಿದ ಸಾಕ್ಷಿಗಳ ಸಮಕ್ಷಮ ಕಾರಾಗೃಹದ ಅಂಗಳದಲ್ಲಿ ಕೂತಿದ್ದ ಎಲ್ಲಾ ಯೆಹೂದ್ಯರ ಎದುರಿನಲ್ಲಿ ಆ ಕ್ರಯಪತ್ರವನ್ನು ಮಹ್ಸೇಮನ ಮೊಮ್ಮಗನೂ ನೇರೀಯನ ಮಗನೂ ಆದ ಬಾರೂಕನ ಕೈಗೆ ಕೊಟ್ಟೆನು.


ಯೋಷೀಯನ ಮಗನೂ ಯೆಹೂದದ ಅರಸನೂ ಆದ ಯೆಹೋಯಾಕೀಮನ ಆಳಿಕೆಯ ನಾಲ್ಕನೆಯ ವರುಷದಲ್ಲಿ ನೇರೀಯನ ಮಗನಾದ ಬಾರೂಕನು ಯೆರೆಮೀಯನ ಮಾತುಗಳನ್ನು ಅವನ ಬಾಯಿಂದ ಬಂದ ಹಾಗೆಯೇ ಪುಸ್ತಕದಲ್ಲಿ ಬರೆದಾಗ ಪ್ರವಾದಿಯಾದ ಯೆರೆಮೀಯನು ಯೆಹೋವನ ಅಪ್ಪಣೆಯ ಪ್ರಕಾರ


ಅದೇ ವರುಷದಲ್ಲಿ, ಯೆಹೂದದ ಅರಸನಾದ ಚಿದ್ಕೀಯನ ಆಳಿಕೆಯ ಆರಂಭದಲ್ಲಿ, ಅಂದರೆ ನಾಲ್ಕನೆಯ ವರುಷದ ಐದನೆಯ ತಿಂಗಳಲ್ಲಿ ಪ್ರವಾದಿಯಾದ ಅಜ್ಜೂರನ ಮಗನೂ ಗಿಬ್ಯೋನ್ ಊರಿನವನೂ ಆದ ಹನನ್ಯನು ಯೆಹೋವನ ಆಲಯದೊಳಗೆ ಯಾಜಕರ ಮತ್ತು ಸಕಲಜನರ ಎದುರಿನಲ್ಲಿ ನನಗೆ ಹೀಗೆ ಹೇಳಿದನು -


ಚಿದ್ಕೀಯನು ಅರಸನಾದಾಗ ಇಪ್ಪತ್ತೊಂದು ವರುಷದವನಾಗಿದ್ದನು. ಇವನು ಯೆರೂಸಲೇವಿುನಲ್ಲಿ ಹನ್ನೊಂದು ವರುಷ ಆಳಿದನು. ಲಿಬ್ನದ ಯೆರೆಮೀಯನ ಮಗಳು ಆದ ಹಮೂಟಲ್ ಎಂಬಾಕೆಯು ಅವನ ತಾಯಿ.


ಆದರೆ ನಮ್ಮ ಪೂರ್ವಿಕರು ಪರಲೋಕದೇವರನ್ನು ರೇಗಿಸಿದ್ದರಿಂದ ಆತನು ಅವರನ್ನು ಬಾಬೆಲಿನ ಕಸ್ದೀಯ ರಾಜನಾದ ನೆಬೂಕದ್ನೆಚ್ಚರನ ಕೈಗೆ ಒಪ್ಪಿಸಿಕೊಟ್ಟನು. ಅವನು ಈ ಆಲಯವನ್ನು ಹಾಳುಮಾಡಿ ಜನರನ್ನು ಸೆರೆಹಿಡಿದು ಬಾಬೆಲಿಗೆ ಒಯ್ದನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು