Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:60 - ಕನ್ನಡ ಸತ್ಯವೇದವು J.V. (BSI)

60 ಯೆರೆಮೀಯನು ಬಾಬೆಲಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು (ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು) ಒಂದು ಗ್ರಂಥವನ್ನಾಗಿ ಬರೆದು

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

60 ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲಾ ಕೇಡಿನ ವಿಷಯವನ್ನು ಅಂದರೆ ಬಾಬೆಲಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲಾ ಸಂಗತಿಗಳನ್ನು ಒಂದು ಗ್ರಂಥವನ್ನಾಗಿ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

60 ಸೆರಾಯನು ಸರಬರಾಯಿನ ಕಾರಬಾರಿ. ಯೆರೆಮೀಯನು ಬಾಬಿಲೋನಿಗೆ ಸಂಭವಿಸತಕ್ಕ ಎಲ್ಲ ಕೇಡಿನ ವಿಷಯವನ್ನು, ಅಂದರೆ ಬಾಬಿಲೋನಿನ ಸಂಬಂಧವಾಗಿ ಹಿಂದೆ ಲಿಖಿತವಾದ ಎಲ್ಲ ಸಂಗತಿಗಳನ್ನು, ಒಂದು ಗ್ರಂಥವಾಗಿ ಬರೆದು ಸೆರಾಯನಿಗೆ ಹೀಗೆಂದು ಹೇಳಿದನು:

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

60 ಬಾಬಿಲೋನಿಗೆ ಉಂಟಾಗುವ ಎಲ್ಲಾ ಕೇಡನ್ನು ಯೆರೆಮೀಯನು ಒಂದು ಸುರಳಿಯಲ್ಲಿ ಬರೆದಿದ್ದನು. ಅವನು ಬಾಬಿಲೋನಿನ ಬಗ್ಗೆ ಈ ವಿಷಯಗಳನ್ನೆಲ್ಲ ಬರೆದಿದ್ದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

60 ಹೀಗೆ ಯೆರೆಮೀಯನು ಬಾಬಿಲೋನಿನ ಮೇಲೆ ಬರುವ ಕೇಡನ್ನೆಲ್ಲಾ ಬಾಬಿಲೋನಿಗೆ ವಿರೋಧವಾಗಿ ಬರೆದಿರುವ ಈ ವಾಕ್ಯಗಳನ್ನೆಲ್ಲಾ ಒಂದು ಗ್ರಂಥದಲ್ಲಿ ಬರೆದನು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:60
11 ತಿಳಿವುಗಳ ಹೋಲಿಕೆ  

ಆಗ ಯೆರೆಮೀಯನು ಇನ್ನೊಂದು ಸುರಳಿಯನ್ನು ತೆಗೆದುಕೊಂಡು ನೇರೀಯನ ಮಗನಾಗಿರುವ ಲೇಖಕನಾದ ಬಾರೂಕನಿಗೆ ಕೊಡಲು ಅವನು ಅದರಲ್ಲಿ ಯೆಹೂದದ ಅರಸನಾದ ಯೆಹೋಯಾಕೀಮನು ಬೆಂಕಿಯಲ್ಲಿ ಸುಟ್ಟ ಗ್ರಂಥದ ಎಲ್ಲಾ ಮಾತುಗಳನ್ನಲ್ಲದೆ ಇನ್ನು ಇಂಥಾ ಅನೇಕ ಮಾತುಗಳನ್ನು ಯೆರೆಮೀಯನ ಬಾಯಿಂದ ಬಂದ ಹಾಗೆ ಬರೆದನು.


[ಯೆಹೋವನು ನನಗೆ ಹೀಗೆ ಹೇಳಿದನು] - ನೀನೀಗ ಮನೆಗೆ ಹೋಗಿ ಈ ಮಾತು ಮುಂದಿನ ಕಾಲದಲ್ಲಿ ಶಾಶ್ವತ ಸಾಕ್ಷಿಯಾಗಿರುವಂತೆ ಇವರೆದುರಿಗೆ ಹಲಿಗೆಯ ಮೇಲೆ ಕೆತ್ತು, ಪುಸ್ತಕದಲ್ಲಿ ಬರೆ.


ಆದದರಿಂದ ನೀನು ಕಂಡವುಗಳನ್ನೂ ಈಗ ನಡೆಯುತ್ತಿರುವವುಗಳನ್ನೂ ಮುಂದೆ ಆಗಬೇಕಾದವುಗಳನ್ನೂ ಬರೆ.


ಅದು - ನೀನು ನೋಡುವದನ್ನು ಪುಸ್ತಕದಲ್ಲಿ ಬರೆದು ಎಫೆಸ, ಸ್ಮುರ್ನ, ಪೆರ್ಗಮ, ಥುವತೈರ, ಸಾರ್ದಿಸ್, ಫಿಲದೆಲ್ಫಿಯ, ಲವೊದಿಕೀಯ ಎಂಬೀ ಏಳು ಪಟ್ಟಣಗಳ ಸಭೆಗಳಿಗೆ ಕಳುಹಿಸಬೇಕೆಂದು ನುಡಿಯಿತು.


ದಾನಿಯೇಲನೇ, ನೀನು ಈ ಮಾತುಗಳನ್ನು ಮುಚ್ಚಿಡು, ಅವುಗಳನ್ನು ಬರೆಯುವ ಗ್ರಂಥಕ್ಕೆ ಮುದ್ರೆಹಾಕು, ಅಂತ್ಯಕಾಲದವರೆಗೆ ಮರೆಯಾಗಿರಲಿ; ಬಹು ಜನರು ಅತ್ತಿತ್ತ ತಿರುಗುವರು, ತಿಳುವಳಿಕೆಯು ಹೆಚ್ಚುವದು.


ಸೆರಾಯನಿಗೆ ಹೀಗೆ ಹೇಳಿದನು - ನೋಡು, ನೀನು ಬಾಬೆಲಿಗೆ ಸೇರಿದ ಮೇಲೆ ಈ ಮಾತುಗಳನ್ನೆಲ್ಲಾ [ತಕ್ಕವರಿಗೆ] ಓದಿ ಹೇಳಿ -


ಯೆಹೋವನು ಇಂತೆನ್ನುತ್ತಾನೆ - ಇಗೋ, ನಾನು ಬಾಬೆಲಿನ ಮೇಲೂ ಲೇಬ್‍ಕಾಮೈ ದೇಶದವರ ಮೇಲೂ ನಾಶನದ ಗಾಳಿಯನ್ನು ಬೀಸಮಾಡುವೆನು.


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು