Biblia Todo Logo
ಆನ್‌ಲೈನ್ ಬೈಬಲ್

- ಜಾಹೀರಾತುಗಳು -




ಯೆರೆಮೀಯ 51:64 - ಕನ್ನಡ ಸತ್ಯವೇದವು J.V. (BSI)

64 ಯೆಹೋವನು ಬಾಬೆಲಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಣುಗುವದು, ಮತ್ತೆ ಏಳದು ಎಂದು ಹೇಳು. ಜನಗಳು ಆಯಾಸಗೊಂಡು ದುಡಿದದ್ದು [ಬೆಂಕಿಗೆ ತುತ್ತಾಗುವದು] ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಇಂಡಿಯನ್ ರಿವೈಜ್ಡ್ ವರ್ಸನ್ (IRV) - ಕನ್ನಡ - 2019

64 ಯೆಹೋವನು ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಆ ಪಟ್ಟಣವೂ ಹೀಗೆಯೇ ಮುಳುಗುವುದು, ಮತ್ತೆ ಏಳದು” ಎಂದು ಹೇಳು ಎಂದನು. ಜನರು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವುದು ಎಂಬ ಮಾತಿನವರೆಗೆ ಯೆರೆಮೀಯನ ಪ್ರವಾದನೆಯಾಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸತ್ಯವೇದವು C.L. Bible (BSI)

64 ಆಮೇಲೆ, ‘ಸರ್ವೇಶ್ವರ ಸ್ವಾಮಿ ಬಾಬಿಲೋನಿಗೆ ಬರಮಾಡುವ ವಿಪತ್ತಿನಿಂದ ಈ ನಗರ ಹೀಗೆಯೇ ಮುಳುಗುವುದು, ಮತ್ತೆ ಏಳದು,’ ಎಂದು ಹೇಳು.” ಇಲ್ಲಿಗೆ ಯೆರೆಮೀಯನ ಪ್ರವಾದನೆ ಮುಗಿಯಿತು.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಪರಿಶುದ್ದ ಬೈಬಲ್‌

64 ಆಮೇಲೆ ‘ಇದೇ ರೀತಿಯಲ್ಲಿ ಬಾಬಿಲೋನ್ ಕೂಡ ಮುಳುಗಿಹೋಗುವುದು. ಬಾಬಿಲೋನ್ ಎಂದಿಗೂ ಮೇಲಕ್ಕೆ ಏಳುವದಿಲ್ಲ. ಅಲ್ಲಿ ನಾನು ಬರಮಾಡುವ ಅನೇಕ ವಿಪತ್ತುಗಳಿಂದಾಗಿ ಬಾಬಿಲೋನ್ ಮುಳುಗಿಹೋಗುವುದು’” ಎಂದು ಹೇಳು. ಯೆರೆಮೀಯನ ಸಂದೇಶ ಇಲ್ಲಿಗೆ ಮುಗಿಯುತ್ತದೆ.

ಅಧ್ಯಾಯವನ್ನು ನೋಡಿ ನಕಲು ಮಾಡಿ

ಕನ್ನಡ ಸಮಕಾಲಿಕ ಅನುವಾದ

64 ಹೀಗೆ ಹೇಳು, ‘ಈ ಪ್ರಕಾರ ಬಾಬಿಲೋನ್ ಮುಳುಗಿ ಹೋಗುವುದು. ನಾನು ಅವಳ ಮೇಲೆ ತರುವ ಕೇಡಿನೊಳಗಿಂದ ಏಳದು. ಅವರು ಬೀಳುವರು.’ ” ಇಲ್ಲಿಯ ತನಕ ಯೆರೆಮೀಯನ ವಾಕ್ಯಗಳು.

ಅಧ್ಯಾಯವನ್ನು ನೋಡಿ ನಕಲು ಮಾಡಿ




ಯೆರೆಮೀಯ 51:64
16 ತಿಳಿವುಗಳ ಹೋಲಿಕೆ  

ಸೇನಾಧೀಶ್ವರನಾದ ಯೆಹೋವನು ಹೀಗೆ ನುಡಿಯುತ್ತಾನೆ - ಬಾಬೆಲಿನ ಗಾತ್ರವಾದ ಪೌಳಿ ಗೋಡೆಯು ಸಂಪೂರ್ಣವಾಗಿ ನೆಲಸಮವಾಗುವದು, ಅದರ ಉನ್ನತದ್ವಾರಗಳು ಬೆಂಕಿಯಿಂದ ಸುಟ್ಟುಹೋಗುವವು; ಜನಾಂಗಗಳು ಪಟ್ಟ ಪರಿಶ್ರಮ ವ್ಯರ್ಥ, ಜನಗಳು ಆಯಾಸಗೊಂಡು ದುಡಿದದ್ದು ಬೆಂಕಿಗೆ ತುತ್ತಾಗುವದು.


ಗೋದಿಗೆ ಬದಲಾಗಿ ಮುಳ್ಳುಗಳೂ ಜವೆಗೋದಿಗೆ ಪ್ರತಿಯಾಗಿ ಕೆಟ್ಟ ಕಳೆಗಳೂ ಬೆಳೆಯಲಿ. ಹೀಗೆ ಯೋಬನ ಮಾತುಗಳು ಮುಗಿದವು.


ಆಗ ಬಲಿಷ್ಠನಾದ ಒಬ್ಬ ದೇವದೂತನು ದೊಡ್ಡ ಬೀಸುವ ಕಲ್ಲಿನಂತಿರುವ ಒಂದು ಕಲ್ಲನ್ನು ಎತ್ತಿ ಸಮುದ್ರದೊಳಗೆ ಹಾಕಿ - ಮಹಾ ಪಟ್ಟಣವಾದ ಬಾಬೆಲು ಹೀಗೆಯೇ ದಡದಡನೆ ಕೆಡವಲ್ಪಟ್ಟು ಇನ್ನೆಂದಿಗೂ ಕಾಣಿಸುವದಿಲ್ಲ.


ಇಲ್ಲಿಗೆ ಇಷಯನ ಮಗನಾದ ದಾವೀದನ ಪ್ರಾರ್ಥನೆಗಳ ಸಮಾಪ್ತಿ.


ಅವನು ಗಟ್ಟಿಯಾದ ಶಬ್ದದಿಂದ ಕೂಗುತ್ತಾ - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾನಗರಿಯು ಬಿದ್ದಳು; ದೆವ್ವಗಳ ವಾಸಸ್ಥಾನವೂ ಅಶುದ್ಧಾತ್ಮಗಳ ಆಶ್ರಯವೂ ಅಪವಿತ್ರವಾಗಿಯೂ ಅಸಹ್ಯವಾಗಿಯೂ ಇರುವ ಸಕಲ ವಿಧವಾದ ಪಕ್ಷಿಗಳ ಆಶ್ರಯವೂ ಆದಳು.


ಅವನ ಹಿಂದೆ ಎರಡನೆಯವನಾದ ಒಬ್ಬ ದೇವದೂತನು ಬಂದು - ಬಿದ್ದಳು, ಬಿದ್ದಳು, ಬಾಬೆಲೆಂಬ ಮಹಾ ನಗರಿಯು ಬಿದ್ದಳು. ಆಕೆಯು ಸಕಲ ಜನಾಂಗಗಳಿಗೆ ತನ್ನ ಅತಿ ಜಾರತ್ವವೆಂಬ ದ್ರಾಕ್ಷಾರಸವನ್ನು ಕುಡಿಸಿದಳು ಎಂದು ಹೇಳಿದನು.


ಜನಗಳು ದುಡಿದದ್ದು ಬೆಂಕಿಗೆ ತುತ್ತಾಗುವದು, ಜನಾಂಗಗಳು ಪಟ್ಟ ಪರಿಶ್ರಮವು ವ್ಯರ್ಥವಾಗುವದು, ಆಹಾ, ಇದೆಲ್ಲಾ ಸೇನಾಧೀಶ್ವರನಾದ ಯೆಹೋವನಿಂದಲೇ ಸಂಭವಿಸುವದಷ್ಟೆ.


ಬಾಬೆಲು ಜನಾಂಗಗಳ ಬೆರಗಿಗೆ ಈಡಾಗಿದೆ! ಸಮುದ್ರವು ಬಾಬೆಲಿನ ಮೇಲೆ ನುಗ್ಗಿದೆ, ಲೆಕ್ಕವಿಲ್ಲದ ತೆರೆಗಳು ಆ ರಾಜ್ಯವನ್ನು ಮುಚ್ಚಿಬಿಟ್ಟಿವೆ.


[ಇದಲ್ಲದೆ ಈ ಅಪ್ಪಣೆಯಾಯಿತು] - ನೀನು ಅವರಿಗೆ ನುಡಿಯತಕ್ಕದ್ದೇನಂದರೆ - ಇಸ್ರಾಯೇಲ್ಯರ ದೇವರೂ ಸೇನಾಧೀಶ್ವರನೂ ಆದ ಯೆಹೋವನು ಇಂತೆನ್ನುತ್ತಾನೆ - ನಾನು ನಿಮ್ಮಲ್ಲಿಗೆ ಖಡ್ಗವನ್ನು ಕಳುಹಿಸುವೆನು; [ಆ ನನ್ನ ರೋಷವನ್ನು] ಕುಡಿದು ಅಮಲೇರಿದವರಾಗಿ ಕಕ್ಕಿ ಬಿದ್ದು ಏಳದಿರಿ.


ಆತನು ಭೂಪತಿಗಳಿಗೆ ಭಯಪ್ರದನಾಗಿ ಪ್ರಭುಗಳ ಅಹಂಭಾವವನ್ನು ತೊಡೆದುಬಿಡುವನು.


ಮಂತ್ರಾಲೋಚನೆಗಳನ್ನು ಕೇಳಿ ಕೇಳಿ ನಿನಗೆ ಸಾಕಾಯಿತಲ್ಲವೇ; ಖಗೋಲಜ್ಞರು, ಜೋಯಿಸರು, ಪಂಚಾಂಗದವರು, ಇವರೆಲ್ಲರೂ ನಿಂತು ನಿನಗೆ ಬರುವ ವಿಪತ್ತುಗಳಿಂದ ನಿನ್ನನ್ನು ಉದ್ಧರಿಸಲಿ.


ಎಲ್ಲರೂ ತಮ್ಮ ತಮ್ಮ ನೆರೆಯವರಿಗೆ ಮೋಸಮಾಡುತ್ತಾರೆ, ಸತ್ಯವನ್ನು ಆಡುವದೇ ಇಲ್ಲ; ತಮ್ಮ ನಾಲಿಗೆಗೆ ಸುಳ್ಳನ್ನು ಕಲಿಸಿದ್ದಾರೆ; ತಮಗೆ ಆಯಾಸವಾಗುವ ಮಟ್ಟಿಗೂ ಕೆಡುಕನ್ನು ಮಾಡುತ್ತಿದ್ದಾರೆ.


ಜನಾಂಗಗಳಲ್ಲಿ ನಿನ್ನನ್ನು ಬಲ್ಲವರೆಲ್ಲರೂ ನಿನ್ನ ಗತಿಗೆ ಬೆಚ್ಚಿ ಬೆರಗಾಗುವರು; ನೀನು ತೀರಾ ಧ್ವಂಸವಾಗಿ ಇನ್ನೆಂದಿಗೂ ಇಲ್ಲದಂತಾದಿ.


ಆಗ ನೀನು ನಿನ್ನ ಸಂಗಡ ಬಂದವರ ಕಣ್ಣೆದುರಿಗೆ ಆ ಕೂಜವನ್ನು ಒಡೆದುಬಿಟ್ಟು ಅವರಿಗೆ ಹೀಗೆ ಹೇಳು -


ನಮ್ಮನ್ನು ಅನುಸರಿಸಿ:

ಜಾಹೀರಾತುಗಳು


ಜಾಹೀರಾತುಗಳು